ವಾಲ್ಮೀಕಿ ಹಗರಣದಲ್ಲಿ ಯಾರನ್ನೂ ರಕ್ಷಿಸಲ್ಲ: ಸಿಎಂ ಸಿದ್ದರಾಮಯ್ಯ

ಪ್ರಕರಣದ ಸಮಗ್ರ ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಮಾಡಿ ಆದೇಶ ಮಾಡಲಾಗಿದೆ. ಈಗಾಗಲೇ ಎಸ್‌ಐಟಿ ತನಿಖೆ ಚುರುಕಾಗಿ ನಡೆಯುತ್ತಿದೆ. ತನಿಖೆ ಆಧರಿಸಿ ಯಾರೇ ತಪ್ಪಿತಸ್ಥರಿದ್ದರೂ ಎಲ್ಲರ ವಿರುದ್ಧವೂ ಕ್ರಮ ಜರುಗಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದ ಸಿಎಂ ಸಿದ್ದರಾಮಯ್ಯ

Not Protect Anyone in the Valmiki Corporation Scandal Case Says CM Siddaramaiah grg

ಬೆಂಗಳೂರು(ಜೂ.02):  ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣ ವರ್ಗಾ ವಣೆ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ಸಮಗ್ರ ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಮಾಡಿ ಆದೇಶ ಮಾಡಲಾಗಿದೆ ಎಂದು ತಿಳಿಸಿದ್ದಾರೆ. 

ನಾಗೇಂದ್ರ ವಿರುದ್ಧದ ಆರೋಪದ ವಾಸ್ತವಾಂಶ ಪರಿಶೀಲನೆ: ಡಿ.ಕೆ. ಶಿವಕುಮಾರ್‌

ಈಗಾಗಲೇ ಎಸ್‌ಐಟಿ ತನಿಖೆ ಚುರುಕಾಗಿ ನಡೆಯುತ್ತಿದೆ. ತನಿಖೆ ಆಧರಿಸಿ ಯಾರೇ ತಪ್ಪಿತಸ್ಥರಿದ್ದರೂ ಎಲ್ಲರ ವಿರುದ್ಧವೂ ಕ್ರಮ ಜರುಗಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

Latest Videos
Follow Us:
Download App:
  • android
  • ios