Asianet Suvarna News Asianet Suvarna News

ಕನ್ನಡದಲ್ಲಿ ಎನ್‌ಎಸ್‌ಇ ಪರೀಕ್ಷೆ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ

ಭಾರತೀಯ ಭೌತಶಾಸ್ತ್ರ ಶಿಕ್ಷಕರ ಒಕ್ಕೂಟ ಆಯೋಜಿಸುವ ರಾಷ್ಟ್ರೀಯ ಪ್ರಮಾಣಿತ ಪರೀಕ್ಷೆ (ಎನ್‌ಎಸ್‌ಇ)ಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ಕೊಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

NSE Exam in Kannada issue CM Siddaramaiah Letter to PM Modi bengaluru rav
Author
First Published Sep 5, 2023, 5:51 AM IST

ಬೆಂಗಳೂರು (ಸೆ.5) : ಭಾರತೀಯ ಭೌತಶಾಸ್ತ್ರ ಶಿಕ್ಷಕರ ಒಕ್ಕೂಟ ಆಯೋಜಿಸುವ ರಾಷ್ಟ್ರೀಯ ಪ್ರಮಾಣಿತ ಪರೀಕ್ಷೆ (ಎನ್‌ಎಸ್‌ಇ)ಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ಕೊಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ(PM Narendra modi) ಅವರಿಗೆ ಪತ್ರ ಬರೆದಿರುವ ಅರು, ಅಣು ಇಂಧನ ಇಲಾಖೆಯ ನ್ಯಾಷನಲ್‌ ಸ್ಟೀರಿಂಗ್‌ ಕಮಿಟಿಯ ಮೇಲುಸ್ತುವಾರಿಯಲ್ಲಿ ನಡೆಯುವ ಎನ್‌ಎಸ್‌ಇ, ಅಂತಾರಾಷ್ಟ್ರೀಯ ಒಲಿಂಪಿಯಾಡ್‌ನಲ್ಲಿ ಸ್ಪರ್ಧಿಸಲು ಭಾರತದ ಸ್ಪರ್ಧಿಗಳನ್ನು ಆಯ್ಕೆ ಮಾಡುವ ಪ್ರತಿಷ್ಠಿತ ಪರೀಕ್ಷೆಯಾಗಿದೆ. ಆದರೆ ಎನ್‌ಎಸ್‌ಇಯ ಭೌತಶಾಸ್ತ್ರ, ರಸಾಯನ ಶಾಸ್ತ್ರ, ಜೀವಶಾಸ್ತ್ರ, ಖಗೋಳ ಶಾಸ್ತ್ರ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶವಿಲ್ಲ. ಆದ್ದರಿಂದ ಈ ಪರೀಕ್ಷೆಯಲ್ಲಿ ಹೆಚ್ಚು ಕನ್ನಡ ಮಕ್ಕಳು ಪಾಲ್ಗೊಳ್ಳಲು ಅನುಕೂಲವಾಗುವಂತೆ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ನಡೆಸಬೇಕು. ಇಂತಹ ಅವಕಾಶ ನೀಡಿದರೆ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಯಲು ಸಹಾಯವಾಗುತ್ತದೆ ಎಂದು ಸಿದ್ದರಾಮಯ್ಯ ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.

ಮೇಷ್ಟ್ರು ಸಿಗದಿದ್ದರೆ ನಾನು ಸಿಎಂ ಆಗ್ತಿರಲಿಲ್ಲ: ಶಿಕ್ಷಕರ ದಿನಕ್ಕೆ ಸಿದ್ದರಾಮಯ್ಯ ವಿಶೇಷ ಲೇಖನ

ದೇಶದ ಆರು ಶಾಸ್ತ್ರೀಯ ಭಾಷೆಗಳಲ್ಲಿ ಒಂದಾಗಿರುವ ಕನ್ನಡದಲ್ಲಿ ಎನ್‌ಎಸ್‌ಇ ಪರೀಕ್ಷೆ ನಡೆಸಲು ಅಗತ್ಯ ಕ್ರಮವನ್ನು ತ್ವರಿತವಾಗಿ ತೆಗೆದುಕೊಳ್ಳುವಂತೆ ಪ್ರಧಾನಿ ಅವರನ್ನು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Follow Us:
Download App:
  • android
  • ios