ಬೆಸ್ಕಾಂ ಸಹಾಯಕ ಎಂಜಿನಿಯರ್ ಒಬ್ಬರ ಮೇಲ್ಮನವಿ ವಿಚಾರಣೆ ವೇಳೆ ಹೈಕೋರ್ಟ್‌ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಸರ್ಕಾರಿ ಅಧಿಕಾರಿಗಳು ಮತ್ತು ಸರ್ಕಾರಿ ಸ್ವಾಮ್ಯದ ಉದ್ಯಮಗಳ ಅಧಿಕಾರಿಗಳ ವರ್ಗಾವಣೆ ಹಾಗೂ ಸ್ಥಳ ನಿಯುಕ್ತಿ ವಿಚಾರಗಳು ಸಂಬಂಧಪಟ್ಟ ಆಡಳಿತ ಇಲಾಖೆಯ ಹಂತದಲ್ಲೇ ಮುಗಿಯಬೇಕು ಎಂದು ಸ್ಪಷ್ಟಪಡಿಸಿದೆ

ಬೆಂಗಳೂರು (ಮಾ.21): ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಅಥವಾ ಸ್ಥಳ ನಿಯುಕ್ತಿ ವಿಚಾರಗಳು ಇಲಾಖಾ ಹಂತದಲ್ಲೇ ಮುಗಿಯಬೇಕು ಎಂದು ಹೈಕೋರ್ಟ್‌ ಅಭಿಪ್ರಾಯ ಪಟ್ಟಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (ಬೆಸ್ಕಾಂ) ವೈಟ್‌ಫೀಲ್ಡ್‌ ವಿಭಾಗದ ಸಹಾಯಕ ಎಂಜಿನಿಯರ್ ಎಸ್.ಚೇತನ್ ಎಂಬಾತ ಸಲ್ಲಿಸಿದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಅಭಿಪ್ರಾಯ ನೀಡಿತು.

ಇದನ್ನೂ ಓದಿ: ಸರ್ಕಾರಿ ನೌಕರರ ವರ್ಗಾವಣೆಗೆ 'ಸಿಎಂ ಹಸ್ತಕ್ಷೇಪ' ಸಲ್ಲದು, ಮಾಡಲು ಇದಕ್ಕಿಂತ ದೊಡ್ಡ ಕೆಲಸಗಳಿವೆ - ಹೈಕೋರ್ಟ್ ತರಾಟೆ!

ಇದನ್ನೂ ಓದಿ:Bengaluru Cab Scam: ₹285ರ ಟ್ರಿಪ್‌ಗೆ ₹5,950 ಬಿಲ್! ಬೆಂಗಳೂರಲ್ಲಿ ಕ್ಯಾಬ್ ಡ್ರೈವರ್‌ಗಳ ಹೊಸ ಕಳ್ಳಾಟ ಬಯಲು

ಸರ್ಕಾರಿ ಅಧಿಕಾರಿಗಳು ಮತ್ತು ಸರ್ಕಾರಿ ಉದ್ಯಮದಲ್ಲಿ ಕೆಲಸ ಮಾಡುವ ಅಧಿಕಾರಿಗಳ ವರ್ಗಾವಣೆ ಮತ್ತು ಸ್ಥಳ ನಿಯುಕ್ತಿ ಸಂಬಂಧಪಟ್ಟ ಆಡಳಿತ ಇಲಾಖೆ ನಿರ್ವಹಿಸಬೇಕು ಎಂದು ತಿಳಿಸಿದೆ.

YouTube video player