Asianet Suvarna News Asianet Suvarna News

ಕರ್ನಾಟಕದ ಹಲವೆಡೆ ವರುಣನ ಅಬ್ಬರ: ಮನೆಗೋಡೆ ಕುಸಿದು ಓರ್ವ ವ್ಯಕ್ತಿ ಸಾವು

ತುಮಕೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಯಚೂರು, ಕೊಪ್ಪಳ, ಬೆಂಗಳೂರು ಗ್ರಾಮಾ-ನಗರ, ವಿಜಯನಗರ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಸುಮಾರು 60 ಮನೆ, 40ಕ್ಕೂ ಅಧಿಕ ಅಂಗಡಿಗಳಿಗೆ ನೀರುನುಗ್ಗಿದೆ. ಕೊರಟಗೆರೆಯಲ್ಲಿ ಕೇವಲ 2 ಗಂಟೆ ಅವಧಿಯಲ್ಲಿ 637ಮೀ.ಮೀ ಮಳೆಬಿದ್ದಿದೆ. 

one killed due to heavy rain on august 20th in karnataka grg
Author
First Published Aug 21, 2024, 10:39 AM IST | Last Updated Aug 21, 2024, 1:41 PM IST

ಬೆಂಗಳೂರು(ಆ.21):  ತುಮಕೂರು, ಬಳ್ಳಾರಿ ಸೇರಿ ರಾಜ್ಯದ ಒಂಬತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸೋಮವಾರ ರಾತ್ರಿಯಿಂದ ಮಂಗಳವಾರ ಮುಂಜಾನೆ ವರೆಗೆ ಭರ್ಜರಿ ಮಳೆಯಾಗಿದೆ. ಭಾರೀ ಮಳೆಗೆ ತುಮಕೂರಲ್ಲಿ ಜಯಮಂಗಲಿ ನದಿಯಲ್ಲಿ ದಿಢೀರ್ ಪ್ರವಾಹ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡರೆ, ಚಿಕ್ಕಮಗಳೂರಿನಲ್ಲಿ ಮನೆಗೋಡೆ ಕುಸಿದು ವಿಕಲಾಂಗ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. 

ತುಮಕೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಯಚೂರು, ಕೊಪ್ಪಳ, ಬೆಂಗಳೂರು ಗ್ರಾಮಾ-ನಗರ, ವಿಜಯನಗರ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಸುಮಾರು 60 ಮನೆ, 40ಕ್ಕೂ ಅಧಿಕ ಅಂಗಡಿಗಳಿಗೆ ನೀರುನುಗ್ಗಿದೆ. ಕೊರಟಗೆರೆ ಯಲ್ಲಿ ಕೇವಲ 2 ಗಂಟೆ ಅವಧಿಯಲ್ಲಿ 637ಮೀ.ಮೀ ಮಳೆಬಿದ್ದಿದೆ. 

 

ಬೆಂಗಳೂರಲ್ಲಿ ಭಾರೀ ಮಳೆ; ಆಟೋ ಮೇಲೆ ಬಿದ್ದ ಬೃಹತ್ ಮರ! ಚಾಲಕ, ಪ್ರಯಾಣಿಕರಿಗೆ ಗಾಯ!

ಇನ್ನು ಬಳ್ಳಾರಿಯಲ್ಲಿ ಭಾರೀ ಮಳೆಗೆ 9 ಸಂಪರ್ಕ ಸೇತುವೆಗಳು ಮುಳು ಗಿದ್ದು, ಆಂಧ್ರಪ್ರದೇಶ ಸಂಪರ್ಕಿಸುವ ಸೇತುವೆ ಮೇಲೂ ನೀರು ಹರಿದು ಕೆಲಕಾಲ ವಾಹನ ಸಂಚಾರ ಬಂದ್ ಆಗಿದೆ. ಜಿಲ್ಲೆಯಲ್ಲಿ 5 ವಿದ್ಯುತ್ ಟ್ರಾನ್ಸ್‌ಫಾರ್ಮರ್, 51 ವಿದ್ಯುತ್‌ ಕಂಬಗಳು ಧರೆಗುರುಳಿದ್ದು, ಹೊಲಗದ್ದೆಗಳಿಗೂ ನೀರು ನುಗ್ಗಿದೆ. ವಿಜಯನಗರ ಜಿಲ್ಲೆಯ ಹಂಪಿ ಬಳಿಯ ಕಮಲಾಪುರ ಕೆರೆ ಕೋಡಿಬಿದ್ದು ನೂರಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಧವಸ ಧಾನ್ಯಗಳು ಹಾಳಾಗಿವೆ ಎನ್ನಲಾಗಿದೆ.

Latest Videos
Follow Us:
Download App:
  • android
  • ios