ಕರ್ನಾಟಕದಲ್ಲಿ ಕೊರೋನಾ ಮಾಹಾಮಾರಿಗೆ ಮತ್ತೊಂದು ಬಲಿ..!

ಕರ್ನಾಟದಲ್ಲಿ ಇಂದು (ಸೋಮವಾರ) ಮಾಹಾಮಾರಿ ಕೊರೋನಾ ವೈರಸ್‌ ಮತ್ತೊಂದು ಜೀವ ಬಲಿಪಡೆದುಕೊಂಡಿದೆ. ಎಲ್ಲಿ?

One More Coronavirus Positive patient death In Kalaburagi On April 27th

ಬೆಂಗಳೂರು, (ಏ.27): ರಾಜ್ಯದಲ್ಲಿ ಮತ್ತೊಬ್ಬ ಕೊರೋನಾ ಸೋಂಕಿತ ಸಾವನ್ನಪ್ಪಿದ್ದು,  ಮೃತಪಟ್ಟವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. 

ಕಲಬುರಗಿಯಲ್ಲಿ 57 ವರ್ಷದ ಕೊರೋನಾ ಸೋಂಕಿತ ವ್ಯಕ್ತಿ ಇಂದು (ಸೋಮವಾರ) ಮೃತಪಟ್ಟಿದ್ದಾನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ಕಂಟ್ರೋಲ್‌ಗೆ ಬಂತಾ? ಆಶಾಭಾವ ಮೂಡಿಸಿದ ಇಂದಿನ ರಿಪೋರ್ಟ್..! 

ಈ ಬಗ್ಗೆ ಚಿವ ಡಾ. ಕೆ ಸುಧಾಕರ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿತ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. 57 ವರ್ಷದ ಅಳಂದದ ನಿವಾಸಿಯಾಗಿದ್ದ ಇವರಲ್ಲಿ ಏಪ್ರಿಲ್ 21ರಂದು ಕೊರೊನಾ ಪಾಸಿಟಿವ್ ಬಂದಿತ್ತು. ಉಸಿರಾಟದ ತೊಂದರೆಯಿಂದ ಕಲಬುರಗಿಯ ಜಿಮ್ಸ್​ಗೆ ದಾಖಲಾಗಿದ್ದು, ತೀವ್ರ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು. ಇದೀಗ ಇವರು ಮೃತಪಟ್ಟಿದ್ದು, ಇದರೊಂದಿಗೆ ಕಲಬುರಗಿ ಜಿಲ್ಲೆಯಲ್ಲಿನ ಒಟ್ಟು ಐವರು ಕೊರೊನಾ ಸೋಂಕಿನಿಂದ ಮೃತಪಟ್ಟಂತಾಗಿದೆ ಎಂದು ಸ್ಪಷ್ಟಪಡಿಸಿದರು.

ಈ ಮೂಲಕ ದೇಶದಲ್ಲಿ ಮೊದಲ ಬಲಿಯಾಗಿದ್ದ ಕಲಬುರಗಿಯಲ್ಲಿ ಇದು 5ನೇ ಸಾವಾಗಿದಂತಾಗಿದೆ. ಇನ್ನು ರಾಜ್ಯದಲ್ಲಿ ಇಂದು (ಸೋಮವಾರ) ಹೊಸದಾಗಿ ಒಂಬತ್ತು ಕೊರೋನಾ ವೈರಸ್ ಪ್ರಕರಣ ಪತ್ತೆಯಾಗಿದ್ದು, ಒಟ್ಟಾರೇ ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆ ಆಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2, ವಿಜಯಪುರ ಜಿಲ್ಲೆಯಲ್ಲಿ 2, ಮಂಡ್ಯ ಜಿಲ್ಲೆಯಲ್ಲಿ 2, ಬಾಗಲಕೋಟೆಯಲ್ಲಿ 2 ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ ಒಂದು ಪ್ರಕರಣ ಇಂದು ಪತ್ತೆಯಾಗಿವೆ.

ಈ ಪೈಕಿ 193 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಈ ಮಾಹಿತಿ ನೀಡಲಾಗಿದೆ.

Latest Videos
Follow Us:
Download App:
  • android
  • ios