ಬಿಬಿಎಂಪಿ ಗುತ್ತಿಗೆದಾರರ ಬಿಲ್ ಪಾವತಿ ವಿಚಾರವಾಗಿ ನಮ್ಮ ವಿರುದ್ಧ ಯಾರು ಎಷ್ಟುಮಾತನಾಡುತ್ತಾರೋ ಮಾತನಾಡಲಿ. ನಾವು ಯಾರ ನಾಲಿಗೆಗೂ ಬೀಗ ಹಾಕುವುದಿಲ್ಲ. ಆದರೆ ಯಾರು ಸರಿಯಾದ ರೀತಿಯಲ್ಲಿ ಕಾಮಗಾರಿ ಮಾಡಿದ್ದಾರೋ ಅವರಿಗೆ ಮಾತ್ರ ಬಿಲ್ ಪಾವತಿ ಆಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು (ಆ.8) : ಬಿಬಿಎಂಪಿ ಗುತ್ತಿಗೆದಾರರ ಬಿಲ್ ಪಾವತಿ ವಿಚಾರವಾಗಿ ನಮ್ಮ ವಿರುದ್ಧ ಯಾರು ಎಷ್ಟುಮಾತನಾಡುತ್ತಾರೋ ಮಾತನಾಡಲಿ. ನಾವು ಯಾರ ನಾಲಿಗೆಗೂ ಬೀಗ ಹಾಕುವುದಿಲ್ಲ. ಆದರೆ ಯಾರು ಸರಿಯಾದ ರೀತಿಯಲ್ಲಿ ಕಾಮಗಾರಿ ಮಾಡಿದ್ದಾರೋ ಅವರಿಗೆ ಮಾತ್ರ ಬಿಲ್ ಪಾವತಿ ಆಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಅಕ್ರಮಗಳ ವಿರುದ್ಧ ನಾವು 40 ಪರ್ಸೆಂಟ್, ಪೇಸಿಎಂ ಅಭಿಯಾನ ಮಾಡಿದ್ದೆವು. ಗುತ್ತಿಗೆದಾರರ ಸಂಘದ ಅಧ್ಯಕ್ಷರು ಭ್ರಷ್ಟಾಚಾರದ ಬಗ್ಗೆ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದರು. ಲೋಕಾಯುಕ್ತ ಸಂಸ್ಥೆಯೂ ಒಂದೇ ವಿಧಾನಸಭಾ ಕ್ಷೇತ್ರದಲ್ಲಿ ಕಾಮಗಾರಿ ಆಗದೆ .137 ಕೋಟಿ ಬಿಲ್ ಪಾವತಿ ಮಾಡಲಾಗಿದೆ ಎಂದು ವರದಿ ನೀಡಿತ್ತು. ಇವರ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸದನದಲ್ಲಿ ಅಗತ್ಯ ಕ್ರಮದ ಭರವಸೆ ನೀಡಿದ್ದರು. ಅವರ ಸಲಹೆ, ಮಾರ್ಗದರ್ಶನದಂತೆ ಇವರ ಮೇಲೆ ನಾವು ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಪರೋಕ್ಷ ತಿರುಗೇಟು ನೀಡಿದರು.
ಬಿಬಿಎಂಪಿ 45 ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಖುದ್ದು ಫೀಲ್ಡ್‌ಗಿಳಿದ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್
ನಮ್ಮ ತನಿಖೆಯಲ್ಲಿ ಯಾರು ಸರಿಯಾದ ರೀತಿಯಲ್ಲಿ ಕಾಮಗಾರಿ ನಡೆಸಿದ್ದಾರೋ ಅವರಿಗೆ ಬಿಲ್ ಪಾವತಿ ಆಗಲಿದೆ. ಈ ಕಾಮಗಾರಿಗಳು ವ್ಯವಸ್ಥಿತ ರೂಪದಲ್ಲಿ ನಡೆಯಬೇಕು ಎಂಬುದು ನಮ್ಮ ನಿಲುವು. ಸಂತೋಷ್ ಪಾಟೀಲ್ ಸೇರಿದಂತೆ ಅನೇಕ ಪ್ರಕರಣಗಳು ನಮ್ಮ ಮುಂದಿವೆ. ಹೀಗಾಗಿ ಈ ವಿಚಾರದಲ್ಲಿ ಯಾವ ಟೀಕೆಗಳಿಗೂ ನಾವು ಹೆದರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಅಕ್ರಮ ತನಿಖೆಗೆ ಎಸ್‌ಐಟಿ ರಚನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಯಾವುದೇ ಎಸ್‌ಐಟಿ ರಚನೆ ಮಾಡಿಲ್ಲ. ಬಿಬಿಎಂಪಿ ವ್ಯಾಪ್ತಿಯಲ್ಲಿ ಯಾವಾಗ ಯಾವ ಕಾಮಗಾರಿಗೆ ಟೆಂಡರ್ ಆಯಿತು. ಅನುಮತಿ ಸಿಕ್ಕಿದ್ದು ಯಾವಾಗ? ಕಾಮಗಾರಿ ಮುಗಿದಿದ್ದು ಯಾವಾಗ? ಬಿಲ್ ಆಗಿದ್ದು ಯಾವಾಗ? ಅದರ ಗುಣಮಟ್ಟವೇನು? ಎಂಬುದನ್ನು ಪರಿಶೀಲಿಸುತ್ತಿದ್ದೇವೆ. .2 ಕೋಟಿ ಮೊತ್ತದ ಕಾಮಗಾರಿಗಳಲ್ಲಿ .1.99 ಕೋಟಿ ಬಿಲ್ ನೀಡಿ .1 ಲಕ್ಷ ಮಾತ್ರ ಬಾಕಿ ಉಳಿಸಿದ್ದಾರೆ. ಇಂತಹ 25 ಪ್ರಕರಣಗಳು ಇವೆ. ಇವೆಲ್ಲವೂ ತಿಳಿಯಬಾರದೇ? ಎಂದು ತಿರುಗೇಟು ನೀಡಿದರು.
ಕುಮಾರಸ್ವಾಮಿಗೆ ತಕ್ಕ ಉತ್ತರ ಕೊಡ್ತೀನಿ: ಡಿ.ಕೆ.ಶಿವಕುಮಾರ್
ಎಕ್ಸ್‌ಪ್ರೆಷನ್ ಆಫ್ ಇಂಟ್ರೆಸ್ಟ್ ವಿಸ್ತರಣೆ
ಇನ್ನು ಸುರಂಗ ರಸ್ತೆ ನಿರ್ಮಾಣ ವಿಚಾರವಾಗಿ ಕಂಪನಿ ಜತೆಗಿನ ಸಭೆ ಬಗ್ಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಮೇಲ್ಸೇತುವೆ ಹಾಗೂ ಟನಲ್ ರಸ್ತೆ ಸೇರಿದಂತೆ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಯಾವ ಕ್ರಮ ಕೈಗೊಳ್ಳಬಹುದು ಎಂಬ ಬಗ್ಗೆ ಎಕ್ಸ್‌ಪ್ರೆಷನ್ ಆಫ್ ಇಂಟರೆಸ್ಟ್ ಕರೆದಿದ್ದವು. ಕೇವಲ ಎರಡು ಕಂಪನಿಗಳು ಮುಂದೆ ಬಂದಿದ್ದು, ಇನ್ನೂ ಹೆಚ್ಚಿನ ಸಂಖ್ಯೆಗಳು ಭಾಗವಹಿಸಲಿ ಎಂಬ ಕಾರಣಕ್ಕೆ ಅವಧಿಯನ್ನು ಏಳು ದಿನ ವಿಸ್ತರಿಸಲಾಗಿದೆ ಎಂದರು.
