ಶಾಲೆಗಳಿಗೆ ಬಾಂಬ್ ಬೆದರಿಕೆ ಉಗ್ರರ ಕೆಲಸದಂತಿದೆ: ಆರ್.ಅಶೋಕ್
ನಗರದ ಶಾಲೆಗಳಿಗೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್‌ನ ಸಂದೇಶ ನೋಡಿದರೆ ಇದೊಂದು ಭಯೋತ್ಪಾದಕರ ಕೆಲಸದಂತೆ ಕಾಣುತ್ತಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಬೆಂಗಳೂರು (ಡಿ.02): ನಗರದ ಶಾಲೆಗಳಿಗೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್‌ನ ಸಂದೇಶ ನೋಡಿದರೆ ಇದೊಂದು ಭಯೋತ್ಪಾದಕರ ಕೆಲಸದಂತೆ ಕಾಣುತ್ತಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬಾಂಬ್ ಬೆದರಿಕೆ ಸುದ್ದಿ ಹೊರಬಿದ್ದ ಬೆನ್ನಲ್ಲೇ ಶುಕ್ರವಾರ ಬಸವೇಶ್ವರನಗರದ ನ್ಯಾಫಲ್ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಬಾಂಬ್ ಬೆದರಿಕೆ ಇ-ಮೇಲ್‌ನಲ್ಲಿ ಮುಸ್ಲಿಂ, ಅಲ್ಲಾಹು, ದೇವಸ್ಥಾನ, ಮುಂಬೈ ಹೋಟೆಲ್ ಮೇಲಿನ ದಾಳಿ ಬಗ್ಗೆ ಪ್ರಸ್ತಾಪಿಸಲಾಗಿದೆ.
ಬೆಂಗಳೂರನ್ನು ಭಯ ಬೀಳಿಸುವ ಹಾಗೂ ದೇಶಕ್ಕೆ ಬೆದರಿಕೆ ಹಾಕುವ ಉದ್ದೇಶದಿಂದ ಇದನ್ನು ಮಾಡಲಾಗಿದೆ. ಇದನ್ನು ಖಂಡಿಸುತ್ತೇನೆ’ ಎಂದರು. ಮಕ್ಕಳ ಜೀವ ಮುಖ್ಯ. ಪೋಷಕರು ಬಹಳ ಆತಂಕದಲ್ಲಿದ್ದಾರೆ. ಈ ಬೆದರಿಕೆ ಹಿಂದೆ ಭಯೋತ್ಪಾದನೆ ಹಿನ್ನೆಲೆಯುಳ್ಳವರ ಕೈವಾಡ ಇರುವಂತಿದೆ. ಬೆಂಗಳೂರು ನಗರದಲ್ಲಿ ಪದೇ ಪದೇ ಈ ರೀತಿ ಆದರೆ ಬೆಂಗಳೂರು ಬ್ರಾಂಡ್‌ಗೆ ತೊಂದರೆಯಾಗುತ್ತದೆ. ಇದರ ಹಿಂದೆ ದೊಡ್ಡ ಜಾಲ ಇರುವ ಸಾಧ್ಯತೆಯಿದ್ದು, ಪೊಲೀಸರು ತನಿಖೆ ನಡೆಸಿ ಪತ್ತೆಹಚ್ಚಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರ ರೈತರ 2 ಲಕ್ಷ ರು.ಗಳವರೆಗೆ ಸಾಲ ಮನ್ನಾ ಮಾಡಲಿ: ಆರ್.ಅಶೋಕ್ ಒತ್ತಾಯ
ಶ್ವೇತಪತ್ರಕ್ಕೆ ಬೆಳಗಾವಿ ಕಲಾಪದಲ್ಲಿ ಪಟ್ಟು: ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದ್ದು, ಹಣಕಾಸಿನ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡುವಂತೆ ಬೆಳಗಾವಿ ಅಧಿವೇಶನದಲ್ಲಿ ಪಟ್ಟು ಹಿಡಿಯಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬರ ಕಾಮಗಾರಿಗಳಿಗೆ ಹಣದ ಕೊರತೆ ಇಲ್ಲ ಎಂದು ಸರ್ಕಾರ ಹೇಳಿದೆ. ಅದು ನಿಜವೇ ಆಗಿದ್ದರೆ ತಕ್ಷಣ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಗ್ಯಾರಂಟಿ ಯೋಜನೆಗಳ ಅರ್ಧಂಬರ್ಧ ಜಾರಿಯಿಂದ ಬೊಕ್ಕಸ ಬರಿದಾಗಿದೆ. ಹೀಗಾಗಿ ಬರಗಾಲದಿಂದ ತತ್ತರಿಸುತ್ತಿರುವ ರೈತರಿಗೆ ಪರಿಹಾರ ನೀಡಲು ಸಾಧ್ಯವಾಗದೆ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಲಾಗುತ್ತಿದೆ. ಇದು ಸಂವೇದನಾರಹಿತ ಎಡಬಿಡಂಗಿ ಸರ್ಕಾರ. ಪ್ರತಿಪಕ್ಷದ ನಾಯಕನಾಗಿ ಆಯ್ಕೆಯಾದ ಬಳಿಕ ಹಲವು ಜಿಲ್ಲೆಗಳಲ್ಲಿ ಬರಗಾಲದ ಅಧ್ಯಯನ ಮಾಡುವ ವೇಳೆ ಸರ್ಕಾರದ ಬಣ್ಣ ಬಯಲಾಗುತ್ತಿದೆ. ಜನತೆಯ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಟೀಕಾಪ್ರಹಾರ ನಡೆಸಿದರು.
ದೇವೇಗೌಡರು ಜಿಲ್ಲಾ ರಾಜಕಾರಣಕ್ಕೆ ಮತ್ತೆ ಬಂದಲ್ಲಿ ಅವರ ಗೆಲುವಿಗೆ ಶ್ರಮಿಸುವೆ: ಪ್ರಜ್ವಲ್ ರೇವಣ್ಣ
ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಮೊದಲು ರಾಜ್ಯ ಸರ್ಕಾರದ ಪಾತ್ರ, ಹೊಣೆಗಾರಿಕೆ ಏನು ಎಂಬುದನ್ನು ಸ್ಪಷ್ಟವಾಗಿ ತಿಳಿಸಬೇಕು. ಕೊಳವೆ ಬಾವಿ ಕೊರೆಸಲು, ಜಾನುವಾರುಗಳಿಗೆ ಮೇವು ಖರೀದಿಸಲು ಆದೇಶವನ್ನು ಹೊರಡಿಸಿಲ್ಲ. ಕನಿಷ್ಠ ಪಕ್ಷ ಕೊಳವೆ ಬಾವಿಗಳಿಗೆ ಆದ್ಯತೆ ಮೇರೆಗೆ ವಿದ್ಯುತ್ ಸಂಪರ್ಕ ಕೊಡುತ್ತಿಲ್ಲ. ಎಲ್ಲದಕ್ಕೂ ಲಂಚ ಕೊಡಬೇಕು. ಇಲ್ಲದಿದ್ದರೆ ಯಾವುದೇ ಕೆಲಸ ಆಗುತ್ತಿಲ್ಲ ಎಂಬುದಾಗಿ ರೈತರು ದೂರು ನೀಡುತ್ತಿದ್ದಾರೆ ಎಂದರು.