Asianet Suvarna News Asianet Suvarna News

ಸದನದಲ್ಲೂ ಸದ್ದು ಮಾಡಿದ ಕರಿಮಣಿ ಮಾಲೀಕ ಹಾಡು! ಏನಿಲ್ಲ.. ಏನಿಲ್ಲ.. ಸರ್ಕಾರದ ಬಳಿ ಹಣವಿಲ್ಲ ಎಂದ ಆರ್ ಅಶೋಕ್

ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿರುವ ‘ಏನಿಲ್ಲ ಏನಿಲ್ಲ ಕರಿಮಣಿ ಮಾಲೀಕ ನೀ ನಲ್ಲ.. ಹಾಡು ಇದೀಗ ಸದನದೊಳಗೂ ಸದ್ದು ಮಾಡಿದೆ.   ಬುಧವಾರ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಏನಿಲ್ಲ..ಏನಿಲ್ಲ..ಸರ್ಕಾರದ ಬಳಿ ಹಣವಿಲ್ಲ ಎಂದು ವ್ಯಂಗ್ಯವಾಡಿದರು

Opposition leader R Ashok satire against the state government rav
Author
First Published Feb 15, 2024, 6:21 PM IST

ಬೆಂಗಳೂರು (ಫೆ.15): ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿರುವ ‘ಏನಿಲ್ಲ ಏನಿಲ್ಲ ಕರಿಮಣಿ ಮಾಲೀಕ ನೀ ನಲ್ಲ.. ಹಾಡು ಇದೀಗ ಸದನದೊಳಗೂ ಸದ್ದು ಮಾಡಿದೆ.  

ಬುಧವಾರ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಏನಿಲ್ಲ..ಏನಿಲ್ಲ..ಸರ್ಕಾರದ ಬಳಿ ಹಣವಿಲ್ಲ ಎಂದು ವ್ಯಂಗ್ಯವಾಡಿದರು.

ಸರ್ಕಾರ ಸರಿಯಾದ ದಾರಿಯಲ್ಲಿ ನಡೆಯುತ್ತಿಲ್ಲ. ಸರ್ಕಾರ ಎಲ್ಲೋ ಒಂದು ಕಡೆ ಕೆಟ್ಟೋಗಿರೋ ಬಸ್ ತರ ನಿಂತು ಹೋಗಿದೆ. ಇದು ಮುಂದೆ ಹೋಗುತ್ತೋ ಇಲ್ವೋ ಗೊತ್ತಿಲ್ಲ ಇದೀಗ ಒಂದು ಹಾಡು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಾಂಗ್ರೆಸ್​ ಸರ್ಕಾರದ ಬಗ್ಗೆಯೂ ಹಾಡು ಕೂಡ ಹಾಕಿದ್ದಾರೆ. ಸರ್ಕಾರದಲ್ಲಿ ಹಣವಿಲ್ಲ, ಸತ್ತು ಹೋಗಿದೆ ಎಂದು ಕುಟುಕಿದರು.

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮಣಿಪಾಲ್ ಆಸ್ಪತ್ರೆಗೆ ದಾಖಲು!

ಹಣವನ್ನು ಸಮಾನವಾಗಿ ಹಂಚಬೇಕೆನ್ನುವುದು ಸರ್ಕಾರದ ಉದ್ದೇಶ ಎಂದು ಹೇಳುತ್ತಿದೆಯಾದರೂ, ದಲಿತರಿಗೆ ಮೀಸಲಿಟ್ಟ 11,400 ಕೋಟಿ ರು. ಅನ್ನು ಬೇರೆ ಕಡೆಗೆ ಬಳಕೆ ಮಾಡಲಾಗಿದೆ. ಹಿಂದುಳಿದವರ ಚಾಂಪಿಯನ್‌ ಎಂದು ಹೇಳಿಕೊಂಡು ಈ ರೀತಿ ಮಾಡುತ್ತಿದ್ದಾರೆ. ಇಂತಹ ಘನ ಕಾರ್ಯಕ್ಕೆ ಆ ಹಣ ಬಳಸಿದ್ದೇವೆ ಎಂದು ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದರು.

ಇನ್ನೂ ಐವತ್ತು ಗ್ಯಾರಂಟಿಯಾದರೂ ಮಾಡಿ. ಆದರೆ ಗ್ಯಾರಂಟಿ ಹೆಸರಲ್ಲಿ ಜನರಿಗೆ ಮೋಸ ಮಾಡಬೇಡಿ. ಮಕ್ಕಳು ಬಸ್ಸಿಲ್ಲದೆ ಜೆಸಿಬಿ, ಕಲ್ಲು ತುಂಬಿಕೊಂಡ ಲಾರಿಯಲ್ಲಿ ಪ್ರಯಾಣಿಸುತ್ತಿದ್ದಾರೆ. ಬಸ್ಸುಗಳಿಲ್ಲದೆ, ರೂಟ್‌ಗಳನ್ನು ರದ್ದು ಮಾಡಿ ಜನರಿಗೆ ತೊಂದರೆಯಾಗಿದೆ. ಯಾವುದೇ ಕಾರ್ಯಕ್ರಮ ಮಾಡುವಾಗ ಅದರಿಂದ ಏನು ಪರಿಣಾಮ ಎಂದು ಆಲೋಚಿಸಿಲ್ಲ. ಮಹಿಳೆಯರಿಗೆ 2 ಸಾವಿರ ರೂ. ವನ್ನು ಒಂದು ತಿಂಗಳು ಕೊಟ್ಟು, ಮುಂದಿನ ತಿಂಗಳು ಕೊಡಲೇ ಇಲ್ಲ. ಬಾಕಿ ಎಷ್ಟು ಉಳಿಸಿದೆ ಎಂದು ಸರ್ಕಾರ ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದರು.


5 ಕೆಜಿ ಅಕ್ಕಿ ನೀಡುತ್ತೇವೆ ಎಂದು ರಾಜ್ಯಪಾಲರ ಭಾಷಣದಲ್ಲಿದೆ. ಅದು ಕೇಂದ್ರ ಸರ್ಕಾರ ನೀಡುತ್ತಿದ್ದು, ಸೌಜನ್ಯಕ್ಕಾದರೂ ಉಲ್ಲೇಖಿಸಬೇಕಿತ್ತು. ಕೇಂದ್ರದ ಯೋಜನೆಗಳೆಲ್ಲ ತಮ್ಮದೇ ಎಂದು ಬಿಂಬಿಸುವ ಪ್ರಯತ್ನ ನಡೆದಿದೆ. ವಿದ್ಯುತ್‌ ಉಚಿತ ಎಂದು ದರ ಹೆಚ್ಚಿಸಲಾಗಿದೆ. ಅಲ್ಲೇ ದುಡ್ಡು ಕಿತ್ತು ಅಲ್ಲೇ ನೀಡುವುದು ಸಿಎಂ ಸಿದ್ದರಾಮಯ್ಯ ಅವರ ಕೆಲಸ. ಯುವನಿಧಿ ಯೋಜನೆಗೆ ಹಣ ಉಳಿಸಲು ವಿಳಂಬ ಮಾಡಿದ್ದಾರೆ. ಬಂದ ತಕ್ಷಣ ಐದು ಗ್ಯಾರಂಟಿ ಚಾಲೂ ಎಂದು ಮತ್ತೆ ಕೊಡಲೇ ಇಲ್ಲ ಎಂದರು.

ಈ ಸರ್ಕಾರ ಬಹಳ ದಿನ ಉಳಿಯೊಲ್ಲ ಕಾದು ನೋಡಿ; ಮಾಜಿ ಸಚಿವ ಮುರುಗೇಶ್ ನಿರಾಣಿ ಬಾಂಬ್!

ಉತ್ತರಪ್ರದೇಶದಲ್ಲಿ 10 ಲಕ್ಷ ಕೋಟಿ ರೂ. ಗುಜರಾತಿನಲ್ಲಿ 26 ಲಕ್ಷ ಕೋಟಿ ರೂ. ಕೈಗಾರಿಕಾ ಒಪ್ಪಂದ ನಡೆದಿದೆ. ಅದನ್ನು ತಿಳಿಸದೆ ಬಂಡವಾಳ ಹೂಡಿಕೆಯಲ್ಲಿ ನಾವೇ ಚಾಂಪಿಯನ್ ಎಂದು ಹೇಳಿಕೊಂಡಿದ್ದಾರೆ.

ಕೇಂದ್ರ ಸರ್ಕಾರದಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ರ ಅಭಿವೃದ್ಧಿಗೆ 5,000 ಕೋಟಿ ರೂ. ದೊರೆತಿದೆ. 2009-14 ರ ಅವಧಿಯಲ್ಲಿ ರೈಲ್ವೆ ಯೋಜನೆಗೆ 835 ಕೋಟಿ ರೂ. ಸಿಕ್ಕರೆ, ಮೋದಿ ಅವಧಿಯಲ್ಲಿ 3,424 ಕೋಟಿ ರೂ. ದೊರೆತಿದೆ. ಕರಾವಳಿ ಅಭಿವೃದ್ಧಿಗೆ ಸಾಗರಮಾಲಾ ಯೋಜನೆಯಡಿ 1,441 ಕೋಟಿ ರೂ. ದೊರೆತಿದೆ. ಆದ್ದರಿಂದ ಕಾಂಗ್ರೆಸ್ ಹೇಳುವಂತೆ ಕೇಂದ್ರ ಸರ್ಕಾರದಿಂದ ಅನ್ಯಾಯ ಎನ್ನುವುದು ತಪ್ಪು. ಮನಮೋಹನ್ ಸಿಂಗ್ ಸರ್ಕಾರಕ್ಕಿಂತ 3-4 ಪಟ್ಟು ಅಧಿಕ ಅನುದಾನ ದೊರೆತಿದೆ ಎಂದರು.

Follow Us:
Download App:
  • android
  • ios