ಬಿಬಿಎಂಪಿಯ ವಾರ್ಡ್‌ಗಳ ಸಂಖ್ಯೆಯನ್ನು 243ರಿಂದ 225ಕ್ಕೆ ಇಳಿಕೆ ಮಾಡುವುದಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿ ಶುಕ್ರವಾರ ರಾಜ್ಯಪತ್ರ ಹೊರಡಿಸಿದೆ. ಈ ಮೂಲಕ 2021ರ ಜನವರಿ 29ರಂದು ಬಿಬಿಎಂಪಿಯ ವಾರ್ಡ್ ಸಂಖ್ಯೆಯನ್ನು 198ರಿಂದ 243ಕ್ಕೆ ಏರಿಸಿ ಹೊರಡಿಸಲಾದ ಅಧಿಸೂಚನೆಯನ್ನು ತಕ್ಷಣ ಜಾರಿಗೆ ಬರುವಂತೆ ಹಿಂಪಡೆದುಕೊಂಡಿದೆ.
ಬೆಂಗಳೂರು (ಆ.5): ಬಿಬಿಎಂಪಿಯ ವಾರ್ಡ್‌ಗಳ ಸಂಖ್ಯೆಯನ್ನು 243ರಿಂದ 225ಕ್ಕೆ ಇಳಿಕೆ ಮಾಡುವುದಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿ ಶುಕ್ರವಾರ ರಾಜ್ಯಪತ್ರ ಹೊರಡಿಸಿದೆ.
ಈ ಮೂಲಕ 2021ರ ಜನವರಿ 29ರಂದು ಬಿಬಿಎಂಪಿಯ ವಾರ್ಡ್ ಸಂಖ್ಯೆಯನ್ನು 198ರಿಂದ 243ಕ್ಕೆ ಏರಿಸಿ ಹೊರಡಿಸಲಾದ ಅಧಿಸೂಚನೆಯನ್ನು ತಕ್ಷಣ ಜಾರಿಗೆ ಬರುವಂತೆ ಹಿಂಪಡೆದುಕೊಂಡಿದೆ.
ಇದೀಗ ಬಿಬಿಎಂಪಿಯ ಅಧಿನಿಯಮ 2020ರ ಅಧಿಕಾರ ಚಲಾಯಿಸಿ ತಕ್ಷಣದಿಂದ ಜಾರಿಗೆ ಬರುವಂತೆ ವಾರ್ಡ್ ಸಂಖ್ಯೆಯನ್ನು 225ಕ್ಕೆ ನಿಗದಿ ಪಡಿಸಲಾಗಿದೆ ಎಂದು ಶುಕ್ರವಾರ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ರಾಜ್ಯಪತ್ರ ಹೊರಡಿಸಿದ್ದಾರೆ.
ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಗೆ 243ರಿಂದ 225ಕ್ಕೆ ಇಳಿಸಲು ಸರ್ಕಾರ ಸಿದ್ಧತೆ?
ಶೀಘ್ರ ವಾರ್ಡ್ ರಚನೆ:
ರಾಜ್ಯ ಸರ್ಕಾರ ವಾರ್ಡ್ ಸಂಖ್ಯೆಯನ್ನು 225ಕ್ಕೆ ನಿಗದಿಪಡಿಸಿ ಆದೇಶಿಸಿದೆ. ಅದರಂತೆ ರಾಜ್ಯ ಸರ್ಕಾರವು ರಚನೆ ಮಾಡಿರುವ ಬಿಬಿಎಂಪಿ ಮುಖ್ಯ ಆಯುಕ್ತರ ನೇತೃತ್ವದ ಸಮಿತಿಯು ವಾರ್ಡ್‌ಗಳನ್ನು ಮರು ರಚನೆ ಮಾಡಿ ಗಡಿ ನಿಗದಿಪಡಿಸಬೇಕಿದೆ. ಈ ಕುರಿತು ಈಗಾಗಲೇ ಸಮಿತಿ ಕಾರ್ಯೋನ್ಮುಖವಾಗಿದ್ದು, ಶೀಘ್ರದಲ್ಲಿ 225 ವಾರ್ಡ್‌ಗಳ ನಕ್ಷೆ ಸಮೇತ ವಾರ್ಡ್ ಗಡಿ ನಿಗದಿಪಡಿಸಿ ಕರಡು ಸಿದ್ಧಪಡಿಸಿ ನಗರಾಭಿವೃದ್ಧಿ ಇಲಾಖೆಗೆ ಸಲ್ಲಿಸಲಿದೆ.
10 ದಿನ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ:
ನಗರದ ನಗರಾಭಿವೃದ್ಧಿ ಇಲಾಖೆ ಸಮಿತಿ ಸಲ್ಲಿಕೆ ಮಾಡಿದ ವಾರ್ಡ್ ನಕ್ಷೆ ಮತ್ತು ಗಡಿ ನಿಗದಿಪಡಿಸಿದ ವರದಿಯನ್ನು ರಾಜ್ಯಪತ್ರ ಹೊರಡಿಸುವ ಮೂಲಕ ಕರಡು ಅಧಿಸೂಚನೆ ಹೊರಡಿಸಿ ಸಾರ್ವಜನಿಕರಿಂದ ಆಕ್ಷೇಪಣೆ ಸಲ್ಲಿಕೆಗೆ ಕೋರಲಾಗುತ್ತದೆ. ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶ ನೀಡಲಾಗುವುದು. ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಗತ್ಯ ಎನಿಸಿದರೆ, ವಾರ್ಡ್ ರಚನೆ, ಗಡಿ ಹಾಗೂ ನಕ್ಷೆ ಬದಲಾವಣೆ ಮಾಡಿ ಅಂತಿಮ ಅಧಿಸೂಚನೆ ಹೊರಡಿಸಲಾಗುತ್ತದೆ.
ಹೆಸರು, ವಾರ್ಡ್ ಸಂಖ್ಯೆ ಬದಲಾವಣೆ
ವಾರ್ಡ್ ಸಂಖ್ಯೆಯನ್ನು 225ಕ್ಕೆ ಇಳಿಕೆ ಮಾಡುವುದರಿಂದ ಬಹುತೇಕ ಹಳೆಯ ವಾರ್ಡ್‌ಗಳ ಸಂಖ್ಯೆ ಮತ್ತು ಹೆಸರು ಬದಲಾವಣೆ ಆಗಲಿದೆ. 243 ವಾರ್ಡ್ ರಚನೆ ಸಂದರ್ಭದಲ್ಲಿ ಕೆಲವು ವಾರ್ಡ್‌ಗಳಿಗೆ ಪ್ರಸಿದ್ಧ ವ್ಯಕ್ತಿಗಳ, ಸ್ವಾತಂತ್ರ್ಯ ಹೋರಾಟಗಾರರ ಹೆಸರುಗಳನ್ನು ಇಡಲಾಗಿತ್ತು. ಆ ಪೈಕಿ ವಿವಾದಕ್ಕೆ ಎಡೆ ಮಾಡಿಕೊಟ್ಟಕೆಲವು ವಾರ್ಡ್‌ಗಳ ಹೆಸರುಗಳೂ ಇದ್ದವು. ಆ ಹೆಸರುಗಳು ಇದೀಗ ಮತ್ತೆ ಬದಲಾವಣೆ ಆಗುವ ಸಾಧ್ಯತೆ ಇದೆ.
6 ವಾರದಲ್ಲಿ ಪ್ರಕ್ರಿಯೆ ಪೂರ್ಣ?
2021ರಲ್ಲಿ ರಚನೆ ಮಾಡಿದ 243 ವಾರ್ಡ್ ಮರು ವಿಂಗಡಣೆ ಪ್ರಶ್ನಿಸಿ ಕಾಂಗ್ರೆಸ್‌ನ ಮಾಜಿ ಮೇಯರ್ ಮಂಜುನಾಥರೆಡ್ಡಿ ಮತ್ತಿತರ ಮುಖಂಡರು ಹೈಕೋರ್ಚ್‌ನ ಹೊರೆ ಹೋಗಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಚ್ ಕಳೆದ ಜೂನ್ 19ರಂದು ಹೊಸದಾಗಿ ವಾರ್ಡ್ ಪುನರ್ ವಿಂಗಡಣೆಗೆ ಸೂಚಿಸಿ ರಾಜ್ಯ ಸರ್ಕಾರಕ್ಕೆ 12 ವಾರ ಕಾಲಾವಕಾಶ ನೀಡಿದೆ. ಈಗಾಗಲೇ ಬಹುತೇಕ ಆರು ವಾರ ಪೂರ್ಣಗೊಂಡಿದೆ. ಉಳಿದ ಪ್ರಕ್ರಿಯೆಯನ್ನು ಇನ್ನಾರು ವಾರದಲ್ಲಿ ಪೂರ್ಣಗೊಳಿಸಬೇಕಿದೆ.
ಬಿಬಿಎಂಪಿ ಚುನಾವಣೆ ಮಾಡುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್
ವಾರ್ಡ್‌ಗಳ ಮತದಾರ ಸಂಖ್ಯೆ ಹೆಚ್ಚಳ
2011ರ ಜನಗಣತಿಗೆ ಅನುಗುಣವಾಗಿ ವಾರ್ಡ್ ಮರು ವಿಂಗಡಣೆ ಮಾಡಲಾಗುತ್ತಿದೆ. 243 ವಾರ್ಡ್‌ಗೆ ಸುಮಾರು 36 ಸಾವಿರ ಜನಸಂಖ್ಯೆಯ ಆಸುಪಾಸಿನಲ್ಲಿ ವಾರ್ಡ್ ಮರು ವಿಂಗಡಣೆ ಮಾಡಲಾಗಿತ್ತು. ಇದೀಗ ವಾರ್ಡ್ ಸಂಖ್ಯೆ ಕಡಿತಗೊಳಿಸಿರುವುದರಿಂದ ವಾರ್ಡ್ ಜನಸಂಖ್ಯೆಯ ಪ್ರಮಾಣದಲ್ಲಿಯೂ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
