ಎಸ್ಸಿ, ಎಸ್ಟಿಮೀಸಲು ಹೆಚ್ಚಳಕ್ಕೆ ಸುಗ್ರೀವಾಜ್ಞೆ ಶಿಕ್ಷಣ, ಉದ್ಯೋಗದಲ್ಲಿ ತಕ್ಷಣದಿಂದಲೇ ಮೀಸಲು: ರಾಮುಲು ನಂತರ ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡಿಸಿ ಪಾಸ್
ಬೆಂಗಳೂರು (ಅ.18) : ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡಕ್ಕೆ ಮೀಸಲಾತಿ ಹೆಚ್ಚಿಸಿ ಕೈಗೊಂಡಿರುವ ತೀರ್ಮಾನವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಪರಿಶಿಷ್ಟಪಂಗಡ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಈ ವಿಷಯ ತಿಳಿಸಿದ್ದಾರೆ.
Kolar: ಒಕ್ಕಲಿಗರ ಮೀಸಲಾತಿ ಶೇ.8ಕ್ಕೆ ಏರಿಸಲು ಹೋರಾಟ: ಚುಂಚಶ್ರೀ
ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನ್ಯಾ.ನಾಗಮೋಹನದಾಸ್ ವರದಿಯ ಶಿಫಾರಸ್ಸಿನಂತೆ ಎಸ್‌ಸಿ ಮೀಸಲಾತಿ ಪ್ರಮಾಣವನ್ನು ಶೇ.15ರಿಂದ 17ಕ್ಕೆ ಮತ್ತು ಎಸ್‌ಟಿ ಮೀಸಲಾತಿಯನ್ನು ಶೇ.3ರಿಂದ 7ಕ್ಕೆ ಹೆಚ್ಚಿಸಲಾಗಿದೆ. ಮುಂದಿನ ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡಿಸಿ ಅನುಮೋದನೆ ಪಡೆದ ಬಳಿಕ ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು. ಅದಕ್ಕೂ ಮುನ್ನ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ತಕ್ಷಣದಿಂದಲೇ ಮೀಸಲಾತಿ ಸೌಲಭ್ಯ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ಆದೇಶವನ್ನು ಕೇಂದ್ರಕ್ಕೆ ಕಳುಹಿಸಿ ಪರಿಚ್ಛೇದ 9ರಲ್ಲಿ ಸೇರಿಸುವಂತೆ ಮನವಿ ಮಾಡಲಾಗುವುದು. ರಾಜ್ಯ ಸರ್ಕಾರವು ಕೈಗೊಂಡ ತೀರ್ಮಾನವನ್ನು ಯಾರೂ ಪ್ರಶ್ನಿಸುವುದಿಲ್ಲ ಎಂಬ ಭಾವನೆ ಇದೆ. ಕೇಂದ್ರ ಸರ್ಕಾರ ಸಹ ಪರಿಚ್ಛೇದ 9ಕ್ಕೆ ಸೇರಿಸಿ ಕಾನೂನು ತೊಡಕುಗಳನ್ನು ನಿವಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಷ್ಟತಪ್ಪಿಸಲು 4 ಸಾರಿಗೆ ನಿಗಮಗಳ ವಿಲೀನ
ಸಾರಿಗೆ ಸಂಸ್ಥೆಯ ನಷ್ಟವನ್ನು ತಪ್ಪಿಸುವ ಸಂಬಂಧ ನಾಲ್ಕು ನಿಗಮಗಳನ್ನು ವಿಲೀನಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ಸಾರಿಗೆ ಖಾತೆಯ ಹೊಣೆ ಹೊತ್ತಿರುವ ಶ್ರೀರಾಮುಲು ತಿಳಿಸಿದರು.
ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ಕೊಟ್ಟೇ ಸರ್ಕಾರ ಚುನಾವಣೆಗೆ ಹೋಗುತ್ತೆ; ವಚನಾನಂದ ಶ್ರೀ
ಶ್ರೀನಿವಾಸಮೂರ್ತಿ ಸಮಿತಿ ಶಿಫಾರಸ್ಸು ಮಾಡಿದಂತೆ ವಿಲೀನಗೊಳಿಸಲು ಸರ್ಕಾರ ಮುಂದಾಗಿದೆ. ನಾಲ್ಕು ನಿಗಮಗಳು ಅಸ್ತಿತ್ವದಲ್ಲಿರುವ ಕಾರಣ ಆಡಳಿತಾತ್ಮಕವಾಗಿ ಹೊರೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ವಿಲೀನಗೊಳಿಸಿ ಒಂದೇ ನಿಗಮ ರಚನೆ ಮಾಡುವುದರಿಂದ ಸಾರಿಗೆ ಸಂಸ್ಥೆ ಅನುಭವಿಸುತ್ತಿರುವ ಆರ್ಥಿಕ ನಷ್ಟತಪ್ಪಿಸಿದಂತಾಗುತ್ತದೆ. ಕೋವಿಡ್ ಕಾಲದಲ್ಲಿ ಸಾರಿಗೆ ಸಂಸ್ಥೆ ಆದಾಯ ಇಲ್ಲದೆ ಬಳಲಿತ್ತು. ಆದರೆ, ಸಾರಿಗೆ ನೌಕರರ ವೇತನ ನೀಡಲು ರಾಜ್ಯ ಸರ್ಕಾರವು ಆರು ಸಾವಿರ ಕೋಟಿ ರು. ಬಿಡುಗಡೆ ಮಾಡಿ ಅನುಕೂಲ ಒದಗಿಸಿತು. ಈಗ ಪರಿಸ್ಥಿತಿ ಸುಧಾರಿಸಿದ್ದರೂ ಸಾರಿಗೆ ಸಂಸ್ಥೆಯ ನಷ್ಟಮಾತ್ರ ತಪ್ಪಿಲ್ಲ. ಹೀಗಾಗಿ ಶ್ರೀನಿವಾಸ ಮೂರ್ತಿ ಶಿಫಾರಸ್ಸಿನಂತೆ ಸಾರಿಗೆ ಸಂಸ್ಥೆಯ ಎಲ್ಲ ನಿಗಮಗಳನ್ನು ವಿಲೀನಗೊಳಿಸಲು ಕ್ರಮ ಕೈಗೊಳ್ಳಲು ಬಯಸಲಾಗಿದೆ ಎಂದರು.