ನಮ್ಮ ಸರ್ಕಾರ ಮಾನವೀಯತೆ ಎತ್ತಿ ಹಿಡಿದಿದೆ; .ಎಲ್ಲರಿಗೂ ನ್ಯಾಯ ಖಾತರಿಪಡಿಸುತ್ತದೆ: ಡಿಸಿಎಂ ಡಿಕೆ.ಶಿವಕುಮಾರ

ನಮ್ಮದು ಎಲ್ಲಾ ಜಾತಿ, ಧರ್ಮ, ವರ್ಗಗಳ ರಕ್ಷಣೆಗಾಗಿ ಇರುವ ಸರ್ಕಾರ. ಸಮಾಜದಲ್ಲಿ ಸೋದರತ್ವ ಭಾವನೆ ಮುಂದುವರೆಯಬೇಕಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬುಧವಾರ ಹೇಳಿದರು.

Our government protects all says DCM DK Shivakumar at Mangaluru rav

ಮಂಗಳೂರು (ಜ.25): ನಮ್ಮದು ಎಲ್ಲಾ ಜಾತಿ, ಧರ್ಮ, ವರ್ಗಗಳ ರಕ್ಷಣೆಗಾಗಿ ಇರುವ ಸರ್ಕಾರ. ಸಮಾಜದಲ್ಲಿ ಸೋದರತ್ವ ಭಾವನೆ ಮುಂದುವರೆಯಬೇಕಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬುಧವಾರ ಹೇಳಿದರು.

ನಗರದ ಹೊರವಲಯದ ಅಡ್ಯಾರ್ ಕಣ್ಣೂರಿನ ಮೈದಾನದಲ್ಲಿ ನಡೆದ ಸುನ್ನಿ ಯುವಜನ ಸಂಘಟನೆಯ 30ನೇ ವರ್ಷದ ಮಹಾಸಮ್ಮೇಳನದ ಸಮಾರೋಪದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿಗಳು ಮಾತನಾಡಿದರು.

ಬಿಜೆಪಿ ಭಾವನಾತ್ಮಕ ವಿಷಯಗಳನ್ನು ಕೆದಕುವ ಮೂಲಕ ರಾಜಕೀಯದಲ್ಲಿ ತೊಡಗಿದ್ದಾರೆ. ಆದರೆ, ಜನರ ಹೊಟ್ಟೆ ತುಂಬಿಸುವತ್ತ ನಾನು ಕೆಲಸ ಮಾಡುತ್ತಿದ್ದೇವೆ. ನಾವು ಮಾನವೀಯತೆಯನ್ನು ಎತ್ತಿ ಹಿಡಿದಿದ್ದೇವೆ. “ದೇಶವನ್ನು ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ನೀವು ನಮಗೆ ಅಧಿಕಾರ ಕೊಟ್ಟಿದ್ದೀರಿ. ಎಲ್ಲಾ ವರ್ಗದ ಜನರಿಗೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ನೀವು ಮಾತ್ರ ರಾಮಭಕ್ತರಾ? ಮುಖ್ಯಮಂತ್ರಿಗಳು ಜೈ ಶ್ರೀರಾಮ್ ಎಂದಿಲ್ಲವೇ? ಬಿಜೆಪಿ ವಿರುದ್ಧ ಸಚಿವ ಚಲುವರಾಯಸ್ವಾಮಿ ಗರಂ

ಪ್ರವಾದಿಗಳು ಹಾಕಿದ ತಳಹದಿಯ ಮೇಲೆ ನಾವು ಬದುಕುತ್ತಿದ್ದೇವೆ. ಯುವಜನತೆ ದೇಶದ ಆಸ್ತಿ. ಸಂಪ್ರದಾಯ, ಆಚಾರ-ವಿಚಾರಗಳಲ್ಲಿ ಯಾರೂ ಹಸ್ತಕ್ಷೇಪ ಮಾಡಬಾರದು ನಿಮಗಾಗಿ ಒಂದು ನಿಲುವು ತೆಗೆದುಕೊಳ್ಳುವ ಮೂಲಕ ನಾವು ನಿಮ್ಮನ್ನು ರಕ್ಷಿಸುತ್ತೇವೆ. ಮುಸ್ಲಿಮರನ್ನು ನನ್ನ ಸಹೋದರರು ಎಂದು ಹೇಳಿದ್ದಕ್ಕಾಗಿ ನನ್ನನ್ನು ಟೀಕಿಸಲಾಯಿತು. ಆದರೆ, ಈ “ಕನಕಪುರ ಬಂಡೆ” ಅದಕ್ಕೆ ಹೆದರುವುದಿಲ್ಲ ಎಂದು ತಿಳಿಸಿದರು.

''ಚುನಾವಣೆ ಹತ್ತಿರ ಬರುತ್ತಿದೆ. ನಾನು ಅದರ ಬಗ್ಗೆ ಮಾತನಾಡುವುದಿಲ್ಲ. ಆದರೆ, ನಾವು ದೇಶವನ್ನು ರಕ್ಷಿಸಬೇಕಾಗಿದೆ. ಎಲ್ಲರೂ ಸರ್ಕಾರಕ್ಕೆ ಆಶೀರ್ವಾದ ಮಾಡಬೇಕು. ನಾವು ನಿಮ್ಮೊಂದಿಗೆ ಇದ್ದೇವೆ. ಅನುದಾನದ ಕುರಿತು ಮುಖ್ಯಮಂತ್ರಿ ಜತೆ ಮಾತನಾಡುತ್ತೇನೆ ಎಂದರು.

ಸತತ 8 ಸಲ ವಿಧಾನಪರಿಷತ್‌ಗೆ ಆಯ್ಕೆ; ಸಭಾಪತಿ ಬಸವರಾಜ ಹೊರಟ್ಟಿ ಲಿಮ್ಕಾ ಬುಕ್‌ ಆಫ್‌ ರೆಕಾರ್ಡ್ಸ್‌ಗೆ ಸೇರ್ಪಡೆ!

ಇದೇ ವೇಳೆ ಹಿಂದಿನ ಸರಕಾರ ವಿದ್ಯಾರ್ಥಿಗಳಿಗೆ ಜಾರಿಗೆ ತಂದಿರುವ ವಸ್ತ್ರ ಸಂಹಿತೆಯನ್ನು ಹಿಂಪಡೆಯಬೇಕು ಎಂದು ಸುನ್ನಿ ಯುವಜನ ಸಂಘ ಆಗ್ರಹಿಸಿತು.

ಅಲ್ಲದೆ, 2019ರಲ್ಲಿ ಮಂಗಳೂರಿನಲ್ಲಿ ಸಿಎಎ ವಿರುದ್ಧ ನಡೆದ ಪ್ರತಿಭಟನೆ ವೇಳೆ ಪೊಲೀಸ್ ಗೋಲಿಬಾರ್‌ನಲ್ಲಿ ಮೃತಪಟ್ಟ ನೌಸೀನ್ ಕುದ್ರೋಳಿ ಮತ್ತು ಜಲೀಲ್ ಬೆಂಗ್ರೆ ಅವರ ಕುಟುಂಬಕ್ಕೆ ಪರಿಹಾರ ನೀಡಬೇಕು ಮತ್ತು ಕುಟುಂಬಗಳ ವಿರುದ್ಧ ದಾಖಲಿಸಿರುವ ನಕಲಿ ಪ್ರಕರಣಗಳನ್ನು ಹಿಂಪಡೆಯಬೇಕು. ಡಿ.ಜೆ.ಹಳ್ಳಿ-ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಎಲ್ಲ ಜಾತಿಗೆ ಸೇರಿದ ಅಮಾಯಕ ಸಂತ್ರಸ್ತರನ್ನು ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿಕೊಂಡರು.

Latest Videos
Follow Us:
Download App:
  • android
  • ios