ಬೆಂಗಳೂರು(ಜು.09): ಕೊರೋನಾ ಭೀತಿಯಿಂದ ಪ್ರಯಾಣಿಕರು ಇಲ್ಲದ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್‌ ನಿಲ್ದಾಣಗಳಲ್ಲಿನ ಹೋಟೆಲ್‌ ಮತ್ತು ಮಳಿಗೆಗಳನ್ನು ಗುರುವಾರದಿಂದ ಬಂದ್‌ ಮಾಡಲು ಮಾಲೀಕರು ನಿರ್ಧರಿಸಿದ್ದಾರೆ.

ಲಾಕ್‌ಡೌನ್‌ನಿಂದ ಮಾರ್ಚ್‌, ಏಪ್ರಿಲ್‌ ಮತ್ತು ಮೇ ತಿಂಗಳಲ್ಲಿ ಯಾವುದೇ ಆರ್ಥಿಕ ಚಟುವಟಿಕೆಗಳು ನಡೆದಿಲ್ಲ. ಅದರಲ್ಲೂ ಸಾರಿಗೆ ವ್ಯವಸ್ಥೆ ಸ್ಥಗಿತದಿಂದಾಗಿ ಬಸ್‌ ನಿಲ್ದಾಣಗಳಲ್ಲಿನ ವಾಣಿಜ್ಯ ಮಳಿಗೆಗಳಿಗೆ ಆದಾಯವೇ ಇಲ್ಲದಂತಾಗಿದೆ.

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲಿದೆ ರೊಬೋಟ್‌..! 

ಇದೀಗ ಲಾಕ್‌ಡೌನ್‌ ಸಡಿಲಿಕೆ ನಂತರವೂ ಮಳಿಗೆಗಳಲ್ಲಿ ವ್ಯಾಪಾರವಿಲ್ಲದಂತಾಗಿದೆ. ಹೀಗಾಗಿ ತಮ್ಮ ವಹಿವಾಟು ಬಂದ್‌ ಮಾಡುವುದಾಗಿ ಮಳಿಗೆ ಮತ್ತು ಹೋಟೆಲ್‌ಗಳ ಮುಂಭಾಗದಲ್ಲಿ ಬೋರ್ಡ್‌ಗಳನ್ನು ಹಾಕಲಾಗಿದೆ.