ಪಾದರಾಯನಪುರ ಗಲಭೆ ಪ್ರಕರಣ ರದ್ದು: ಹೈಕೋರ್ಟ್ ಆದೇಶ

ಬಿಬಿಎಂಪಿ ಅಧಿಕಾರಿಗಳು ಪಾದರಾಯನಪುರಕ್ಕೆ ಸೀಲ್ ಡೌನ್ ಮಾಡಲು ಹೋದಾಗ 51 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು ಎಂದು ಹೇಳುತ್ತಾರೆ. ಆದರೆ, ಯಾರಿಗೆ ಸೋಂಕು ತಗುಲಿತ್ತು ಎಂಬ ಬಗ್ಗೆ ಯಾವುದೇ ವಿವರಗಳನ್ನು ಆರೋಪ ಪಟ್ಟಿಯಲ್ಲಿ ದಾಖಲಿಸಿಲ್ಲ. ಪ್ರಕರಣದಲ್ಲಿ ಒಂದೇ ರೀತಿಯಲ್ಲಿ ಸಾಕ್ಷಿಗಳ ಹೇಳಿಕೆ ದಾಖಲಿಸಲಾಗಿದೆ. ಗಲಭೆ ನಡೆದಿದೆ ಎನ್ನಲಾದ ಸಮಯದಲ್ಲಿ ಯಾವುದೇ ಆಸ್ತಿ ಪಾಸ್ತಿ ನಷ್ಟವಾಗಿಲ್ಲ. ಪೊಲೀಸರು ಯಾವುದೇ ವಸ್ತು ವಶಪಡಿ ಸಿಕೊಂಡಿಲ್ಲ ಎಂದು ಆದೇಶದಲ್ಲಿ ಹೇಳಲಾಗಿದೆ.

Padarayanpur Riot Case Canceled Says High Court of Karnataka grg

ಬೆಂಗಳೂರು(ಮಾ.20):  ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ನಗರದ ಪಾದರಾಯನಪುರದಲ್ಲಿ ನಡೆದ ಗಲಭೆ ಸಂಬಂಧ ಗುಂಪುಗೂಡಿ ಪಾಲಿಕೆ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಸಂಬಂಧ 375 ಆರೋಪಿಗಳ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ. ಈ ಕುರಿತಂತೆ ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ನವಾಜ್ ಪಾಷಾ ಮತ್ತಿತರ ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಪುರಸ್ಕರಿಸಿದ ನ್ಯಾ.ಕೆ. ನಟರಾಜನ್ ಅವರ ಪೀಠ ಈ ಆದೇಶ ಮಾಡಿದೆ.

ಬಿಬಿಎಂಪಿ ಅಧಿಕಾರಿಗಳು ಪಾದರಾಯನಪುರಕ್ಕೆ ಸೀಲ್ ಡೌನ್ ಮಾಡಲು ಹೋದಾಗ 51 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು ಎಂದು ಹೇಳುತ್ತಾರೆ. ಆದರೆ, ಯಾರಿಗೆ ಸೋಂಕು ತಗುಲಿತ್ತು ಎಂಬ ಬಗ್ಗೆ ಯಾವುದೇ ವಿವರಗಳನ್ನು ಆರೋಪ ಪಟ್ಟಿಯಲ್ಲಿ ದಾಖಲಿಸಿಲ್ಲ. ಪ್ರಕರಣದಲ್ಲಿ ಒಂದೇ ರೀತಿಯಲ್ಲಿ ಸಾಕ್ಷಿಗಳ ಹೇಳಿಕೆ ದಾಖಲಿಸಲಾಗಿದೆ. ಗಲಭೆ ನಡೆದಿದೆ ಎನ್ನಲಾದ ಸಮಯದಲ್ಲಿ ಯಾವುದೇ ಆಸ್ತಿ ಪಾಸ್ತಿ ನಷ್ಟವಾಗಿಲ್ಲ. ಪೊಲೀಸರು ಯಾವುದೇ ವಸ್ತು ವಶಪಡಿ ಸಿಕೊಂಡಿಲ್ಲ ಎಂದು ಆದೇಶದಲ್ಲಿ ಹೇಳಲಾಗಿದೆ.

60% ಕನ್ನಡ ಫಲಕ ಇಲ್ಲವೆಂದು ಮಳಿಗೆ ಮುಚ್ಚಬೇಡಿ: ಹೈಕೋರ್ಟ್

ಅಲ್ಲದೆ, ಪಾಲಿಕೆ ಅಧಿಕಾರಿಗಳು ಆ ಪ್ರದೇಶವನ್ನು ಸೀಲ್ ಡೌನ್ ಮಾಡಲು ಮುಂದಾದಾಗ ಅಲ್ಲಿನ ಜನ ಹಾಲು, ತರಕಾರಿ ಮತ್ತಿತರ ಅಗತ್ಯ ವಸ್ತುಗಳನ್ನು ತರಲು ತೊಂದರೆ ಆಗಬಹುದೆಂದು ಪ್ರತಿರೋಧ ಮಾಡಿರಬಹುದು. ಆಗ ಬಿಗುವಿನ ವಾತಾವರಣ ನಿರ್ಮಾಣವಾಗಿರಬಹುದು. ಜತೆಗೆ, ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಐಪಿಸಿ ಸೆಕ್ಷನ್ 188ರಡಿ ಕಾಗ್ನಿಜೆನ್ಸ್ ತೆಗೆದುಕೊಳ್ಳಲು ನಿರ್ಬಂಧವಿದೆ. ಆದರೂ ಈ ಸೆಕ್ಷನ್ ಅಡಿಯಲ್ಲಿ ಕಾಗ್ನಿಜೆನ್ಸ್ ತೆಗೆದುಕೊಂಡು ಮುಂದುವರಿ ದಿದ್ದು ಸರಿಯಲ್ಲ. ಹಾಗಾಗಿ ಪ್ರಕರಣ ರದ್ದುಗೊಳಿಸ ಲಾಗುವುದು ಎಂದು ಆದೇಶಿಸಿದೆ.

2020ರ ಏ.19ರಂದು ಸಂಜೆ ಸಮಯದಲ್ಲಿ ಬಿಬಿ ಎಂಪಿ ಅಧಿಕಾರಿಗಳು ಕೋವಿಡ್ ಸೋಂಕು ತಗುಲಿದ್ದ 51 ಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲು ಹೋಗಿ ದ್ದರು. ಅಲ್ಲಿ ಅರ್ಜಿದಾರ ಆರೋಪಿಗಳು ಆಕ್ರಮ ವಾಗಿ ಗುಂಪು ಸೇರಿದ್ದರು. ಕೈಯಲ್ಲಿ ಚಾಕು, ದೊಣ್ಣೆ ರಾಡ್ ಹಿಡಿದುಕೊಂಡು ಆಶಾ ಕಾರ್ಯಕರ್ತರು, ವೈದ್ಯಾಧಿಕಾರಿಗಳು, ಪಾಲಿಕೆ ಅಧಿಕಾರಿಗಳ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದರು. ಆರೋಪಿಗಳು ಚೇರು, ಟೇಬಲ್‌ಗಳನ್ನು ಒಡೆದು ಟೆಂಟ್ ಕಿತ್ತು ಹಾಕಿ ಅಕ್ಕ ಪಕ್ಕದ ರಸ್ತೆಗಳಲ್ಲಿ ಸಾರ್ವಜನಿಕ ಆಸ್ತಿಗಳಿಗೆ ಹಾನಿಯುಂಟು ಮಾಡಿದ್ದರು ಎನ್ನಲಾಗಿತ್ತು.

ಈ ಸಂಬಂಧ ಪ್ರಕರಣಗಳನ್ನು ದಾಖಲಿಸಿ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ವಿಚಾರಣಾ ನ್ಯಾಯಾಲಯ ವಿಚಾರಣೆ ನಡೆಸುತ್ತಿತ್ತು. ಇದರಿಂದ ಹೈಕೋರ್ಟ್ ಮೆಟ್ಟಿಲೇರಿ ಪ್ರಕರಣ ರದ್ದುಪಡಿಸಲು ಕೋರಿದ್ದ ಅರ್ಜಿದಾರರು, ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ. ತಮ್ಮ ಮನೆ ಬೇರೆ ಕಡೆಯಿವೆ. ನಿಜ ವಾದ ಆರೋಪಿಗಳನ್ನು ಗುರುತಿಸದೆ ಪೊಲೀಸರು ಸಿಕ್ಕ ಸಿಕ್ಕವರ ಮೇಲೆ ಕೇಸ್ ಹಾಕಿದ್ದಾರೆ. ಪಾಲಿಕೆ ಅಧಿಕಾ ರಿಗಳು ಘಟನಾ ಸ್ಥಳಕ್ಕೆ ಬಂದಾಗ ಅವರಲ್ಲಿ ಸೋಂಕಿ ತರ ಪಟ್ಟಿಯೇ ಇರಲಿಲ್ಲ. ಗಲಭೆ ನಡೆದಿದೆ ಎಂದು ಹೇಳಿದ್ದರೂ ಯಾರಿಗೂ ಗಾಯವಾಗಿಲ್ಲ. ಹಾಗಾಗಿ, ಪ್ರಕರಣ ರದ್ದುಗೊಳಿಸಬೇಕು ಎಂದು ಕೋರಿದ್ದರು.

Latest Videos
Follow Us:
Download App:
  • android
  • ios