ಗ್ಯಾರಂಟಿ ಯೋಜನೆಗೆ ದಲಿತರ ಹಣ ಬಳಕೆ: ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆ, ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಾಗಿ ದಲಿತರಿಗೆ ಮೀಸಲಾದ ಹಣವನ್ನ ಉಪಯೋಗಿಸಿಕೊಂಡಿದ್ದಾರೆ. ಡೆಂಗ್ಯೂವನ್ನು ನಿಯಂತ್ರಣ ಮಾಡಲಿಕ್ಕೂ ರಾಜ್ಯ ಸರ್ಕಾರಕ್ಕೆ ಆಗುತ್ತಿಲ್ಲ. ಬಿಜೆಪಿ ಸರ್ಕಾರ 40% ಅಂತ ಹೇಳಿಕೊಂಡು ಅಧಿಕಾರಕ್ಕೆ ಬಂದರು. ಆದ್ರೆ ಶಾಸಕರುಗಳಿಗೆ ಅನುದಾನ ಕೊಡುತ್ತಿಲ್ಲ. ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆ ಮಾಡಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಅತಿ ಶೀಘ್ರದಲ್ಲಿ ದಿನಾಂಕ ನಿಗದಿ ಮಾಡುತ್ತೇನೆ ಎಂದ ನಿಖಿಲ್ ಕುಮಾರಸ್ವಾಮಿ 

padayatra against the karnataka government says nikhil kumaraswamy grg

ಮೈಸೂರು(ಜು.27):  ಈಗ ತೆಗೆದುಕೊಂಡ ನಿರ್ಧಾರ ಕಳೆದ ವಿಧಾನಸಭೆ ಚುನಾವಣೆಯಲ್ಲಿ ತೆಗೆದುಕೊಂಡಿದ್ದರೆ ಈಗ ಬಿಜೆಪಿ, ಜೆಡಿಎಸ್ ಪಕ್ಷ ರಾಜ್ಯದಲ್ಲಿ ಅಧಿಕಾರದಲ್ಲಿ ಇರುತಿತ್ತು‌‌. ಈ ವಿಚಾರವನ್ನ ಎಲ್ಲಾ ಕಾರ್ಯಕರ್ತರು ಹೇಳುತ್ತಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. 

ಇಂದು(ಶನಿವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು, ಜೆಡಿಎಸ್‌ಗೆ ಹೊಸ ಹುರುಪು ಬಂದಿದೆ ಅಂದರೆ ಅದು ಮಂಡ್ಯ ಜನರ ಆಶಿರ್ವಾದದಿಂದ. ಯುವಕರಿಗೆ ಅವಕಾಶ ಕೊಡಬೇಕು ಅಂತ ಅಶಯದಲ್ಲಿ ನನಗೆ ಟಿಕೆಟ್ ನೀಡಲಾಗಿತ್ತು. ಕೆಲವು ರಾಜಕೀಯ ಷಡ್ಯಂತರಕ್ಕೆ ಬಲಿಯಾದೆ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ‌ ಎಂದು ಹೇಳಿದ್ದಾರೆ. 

ಡಿಕೆಶಿ 2 ಬಾರಿ ನನ್ನ ಜೊತೆಗಿದ್ದೇ ಸೋಲಿಸಿದ್ರು, ಈಗ ಒಂದು ಸೋಲಿಗೆ ಹತಾಶರಾದರೆ ಹೇಗೆ: ನಿಖಿಲ್ ಕುಮಾರಸ್ವಾಮಿ

ಹಿರಿಯ ನಾಯಕರ ಸಲಹೆ, ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತೇನೆ. ಆಷಾಡ ಮುಗಿದ ಬಳಿಕ ರಾಜ್ಯ ಪ್ರವಾಸ ಮಾಡುತ್ತೇನೆ. ವಿಧಾನಸೌಧದಲ್ಲಿ ಕುಮಾರಣ್ಣರ ಅನುಪಸ್ಥಿತಿ ಕಾಡುತ್ತಿದೆ. 18 ಜನರೇ ಶಾಸಕರಿರಬಹುದು ಎಲ್ಲರೂ ಧ್ವನಿ ಎತ್ತಿದ್ರೆ ನನ್ನ ಅನುಪಸ್ಥಿತಿ ಸರಿದೂಗಿಸಬಹುದು ಎಂದು ಕುಮಾರಸ್ವಾಮಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ. 

ಗ್ಯಾರಂಟಿ ಯೋಜನೆಗಾಗಿ ದಲಿತರಿಗೆ ಮೀಸಲಾದ ಹಣವನ್ನ ಉಪಯೋಗಿಸಿಕೊಂಡಿದ್ದಾರೆ. ಡೆಂಗ್ಯೂವನ್ನು ನಿಯಂತ್ರಣ ಮಾಡಲಿಕ್ಕೂ ರಾಜ್ಯ ಸರ್ಕಾರಕ್ಕೆ ಆಗುತ್ತಿಲ್ಲ. ಬಿಜೆಪಿ ಸರ್ಕಾರ 40% ಅಂತ ಹೇಳಿಕೊಂಡು ಅಧಿಕಾರಕ್ಕೆ ಬಂದರು. ಆದ್ರೆ ಶಾಸಕರುಗಳಿಗೆ ಅನುದಾನ ಕೊಡುತ್ತಿಲ್ಲ. ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆ ಮಾಡಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಅತಿ ಶೀಘ್ರದಲ್ಲಿ ದಿನಾಂಕ ನಿಗದಿ ಮಾಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

Latest Videos
Follow Us:
Download App:
  • android
  • ios