Asianet Suvarna News Asianet Suvarna News

ಚಿಕ್ಕಮಗಳೂರು: ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲಸ್ತೀನ್‌ ಧ್ವಜ ಹಾರಾಟ ವಿಡಿಯೋ ವೈರಲ್!

ಚಿಕ್ಕಮಗಳೂರು ನಗರದಲ್ಲಿ ಯುವಕರಿಬ್ಬರು ಭಾನುವಾರ ಪ್ಯಾಲೆಸ್ತೇನಿಯನ್ ಧ್ವಜ ಹಿಡಿದು ನಗರದಾದ್ಯಂತ ಸಂಚಾರ ನಡೆಸಿದ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದರಿಂದ ನಗರದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Palestine flag flying in Chikkamagalur video went viral on social media rav
Author
First Published Sep 16, 2024, 5:52 AM IST | Last Updated Sep 16, 2024, 12:20 PM IST

ಚಿಕ್ಕಮಗಳೂರು (ಸೆ.16): ಚಿಕ್ಕಮಗಳೂರು ನಗರದಲ್ಲಿ ಯುವಕರಿಬ್ಬರು ಭಾನುವಾರ ಪ್ಯಾಲೆಸ್ತೇನಿಯನ್ ಧ್ವಜ ಹಿಡಿದು ನಗರದಾದ್ಯಂತ ಸಂಚಾರ ನಡೆಸಿದ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದರಿಂದ ನಗರದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಸೋಮವಾರ ಈದ್ ಮಿಲಾದ್ ಮೆರವಣಿಗೆಗೆ ಸಿದ್ಧತೆ ನಡೆಯುತ್ತಿರುವಾಗಲೇ ಮುಸ್ಲಿಂ ಯುವಕರು ಪ್ಯಾಲೆಸ್ತೇನ್ ಧ್ವಜ ಹಿಡಿದು ಓಡಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಚಿಕ್ಕಮಗಳೂರಿನ ಕೆ.ಎಂ.ರಸ್ತೆ ಸೇರಿ ಪ್ರಮುಖ ರಸ್ತೆಗಳಲ್ಲಿ ಯುವಕರು ಧ್ವಜ ಹಿಡಿದು ಓಡಾಟ ನಡೆಸಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.

ನಾಗಮಂಗಲ ಗಲಭೆಗೆ ಕೇರಳ ಪಿಎಫ್‌ಐ ನಂಟು? ಎನ್‌ಐಎ ತನಿಖೆಗೆ ಆರ್‌ ಅಶೋಕ್ ಒತ್ತಾಯ

ವಿಷಯ ತಿಳಿಯುತ್ತಿದ್ದಂತೆ ನಗರ ಪೊಲೀಸ್ ಠಾಣೆ ಎದುರು ಜಮಾಯಿಸಿದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ಯಾಲೆಸ್ತೇನ್‌ ಧ್ವಜ ಹಿಡಿದು ಓಡಾಡುವ ಮೂಲಕ ದೇಶ ದ್ರೋಹದ ಕೆಲಸ ಮಾಡಿರುವ ಯುವಕರನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಸಂತೋಷ್ ಕೋಟ್ಯಾನ್, ಬಜರಂಗದಳದ ಜಿಲ್ಲಾ ಸಹ ಸಂಚಾಲಕ ಶ್ಯಾಮ್ ವಿ.ಗೌಡ, ವಿಎಚ್‌ಪಿ ಮುಖಂಡ ದಿಲೀಪ್‌ ಶೆಟ್ಟಿ, ನಗರಾಧ್ಯಕ್ಷ ಕೃಷ್ಣ, ಅಮಿತ್, ರಾಜೇಶ್, ಮಂಜು, ಕಿಟ್ಟಿ, ಜಾನಕಿ ರಾಮ್ ಹಾಗೂ ಕಾರ್ಯಕರ್ತರು ಇದ್ದರು.

ಕತ್ತೆ ಕಾಯ್ತಿದ್ರಾ ಪೊಲೀಸರು?: ಕಾಂಗ್ರೆಸ್ ಸರ್ಕಾರ ಸರ್ವನಾಶವಾಗುತ್ತೆ ಎಂದಿದ್ಯಾಕೆ ಆರ್.ಅಶೋಕ್

ನಗರ ಪೊಲೀಸ್ ಠಾಣೆ ಎದುರು ಭಾನುವಾರ ಪ್ರತಿಭಟನೆ ನಡೆಸಿದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೇನಿಯನ್ ಧ್ವಜ ಹಿಡಿದು ಬೈಕ್‌ನಲ್ಲಿ ಸಂಚಾರ ನಡೆಸಿದ ಯುವಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Latest Videos
Follow Us:
Download App:
  • android
  • ios