ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟ ಸಂವಿಧಾನಕ್ಕೆ‌ ವಿರುದ್ಧವಾಗಿದೆ; ಸಿಎಂ ಸಿದ್ದರಾಮಯ್ಯ!

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಕುರಿತು ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮಿಗಳ ಜೊತೆ ಎರಡು ಬಾರಿ ಸಭೆ ನಡೆಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 2ಎ ಮೀಸಲಾತಿ ಒತ್ತಾಯ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ. ಮೀಸಲಾತಿ ವಿಚಾರದಲ್ಲಿ ಆರ್ಟಿಕಲ್ 340 ಪ್ರಕಾರ ನಡೆದುಕೊಳ್ಳಬೇಕಾಗುತ್ತದೆ ಎಂದು ಸಭೆಗೆ ಮಾಹಿತಿ ನೀಡಿದರು.

Panchamasali community 2A reservation demand is against Constitution says CM Siddaramaiah sat

ಬೆಳಗಾವಿ (ಡಿ.12): ಈಗಾಗಲೇ ರಾಜ್ಯದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವುದರ ಕುರಿತು ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮಿಗಳ ಜೊತೆ ಎರಡು ಬಾರಿ ಸಭೆ ಮಾಡಿದ್ದೇನೆ. ಅವರಿಗೆ ಪ್ರತಿಭಟನೆ ಮಾಡಲು ಅವಕಾಶ ಇದೆ. ಆದರೆ, 2ಎ ಮೀಸಲಾತಿ ಒತ್ತಾಯ ಸಂವಿಧಾನಕ್ಕೆ‌ ವಿರುದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ವಿಧಾನ ಪರಿಷತ್‌ ಅಧಿವೆಶನದಲ್ಲಿ ಗುರುವಾರ ಪಾಲ್ಗೊಂಡು ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿ ಹೋರಾಟದ ವಿಚಾರವಾಗಿ ಜಯಮೃತ್ಯುಂಜಯ ಸ್ವಾಮಿಗಳ ಜೊತೆ 2 ಬಾರಿ ಸಭೆ ಮಾಡಿದ್ದೇನೆ. ಆದರೆ, ಇಲ್ಲಿ 2ಎ ಮೀಸಲಾತಿ ಒತ್ತಾಯ ಸಂವಿಧಾನಕ್ಕೆ‌ ವಿರುದ್ಧವಾಗಿದೆ. ಮೀಸಲಾತಿ ವಿಚಾರದಲ್ಲಿ ಆರ್ಟಿಕಲ್‌ 340 ಪ್ರಕಾರ ನಡೆದುಕೊಳ್ಳಬೇಕಾಗತ್ತದೆ. ಅವರಿಗೆ ಪ್ರತಿಭಟನೆ ಮಾಡಲು ಅವಕಾಶ ಇದೆ, ಮಾಡಿಕೊಳ್ಳಲಿ. ಇನ್ನು ಪಂಚಮಸಾಲಿ ಸಮುದಾಯವನ್ನು 2ಎ ಮೀಸಲಾತಿಗೆ ಸೇರಿಸಲು ಪರ್ಮನೆಂಟ್ ಬ್ಯಾಕ್ವರ್ಡ್ ಕ್ಲಾಸ್‌ನವರು (ಶಾಸ್ವತ ಹಿಂದುಳಿದ ವರ್ಗಗಳ ಆಯೋಗ) ಶಿಫಾರಸ್ಸು ಮಾಡಬೇಕಾಗುತ್ತದೆ. ಈ ವೇಳೆ ಇಂಥವರನ್ನ ಹಿಂದುಳಿದ ವರ್ಗಕ್ಕೆ ಸೇರಿಸಿ, ಈ ವರ್ಗದವರನ್ನು ಮೀಸಲಾತಿಯಿಂದ ಹೊರಗಿಡಿ ಎಂದು ಹೇಳಬೇಕಾಗುತ್ತದೆ. ಇದೀಗ ಅಂತ್ಯಂತ ಹಿಂದುಳಿದವರು, ಅತಿ ಹಿಂದುಳಿದವರು ಮತ್ತು ಹಿಂದುಳಿದವರು ಈ ರೀತಿ ವಿಭಾಗ ಇದೆ ಎಂದು ಸಭೆಗೆ ಮಾಹಿತಿ ನೀಡಿದರು.

ಇದನ್ನೂ ಓದಿ: ಪೊಲೀಸರ ದೌರ್ಜನ್ಯ ಖಂಡಿಸಿ ಪಂಚಮಸಾಲಿ ಹೋರಾಟ ತೀವ್ರ, ಹಳ್ಳಿ ಹಳ್ಳಿಗಳಲ್ಲಿ ಹೋರಾಟದ ಕಿಚ್ಚು!

ಮುಂದುವರೆದು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುರುಗೇಶ್ ನಿರಾಣಿ ಅವರನ್ನು ಮಂತ್ರಿ ಮಂಡಲಕ್ಕೆ ಸೇರಿಸಿರಲಿಲ್ಲ. ಅದಕ್ಕಾಗಿ 2ಎ ಮೀಸಲಾತಿ ಹೋರಾಟ ಶುರು ಆಯಿತು ಎಂದು ಸಿದ್ದರಾಮಯ್ಯ ಹೇಳಿದರು. ಸಿಎಂ ಮಾತಿಗೆ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ ಕಳೆದ 30 ವರ್ಷಗಳಿಂದ ರಾಜ್ಯದಲ್ಲಿ ಪಂಚಮಸಾಲಿ ಸಮುದಾಯ ಮೀಸಲಾತಿಗೆ ಹೋರಾಟ ಮಾಡುತ್ತಿದೆ. ಇದು ಕೇವಲ ಮಂತ್ರಿಗಿರಿಗಾಗಿ ಶುರುವಾದ ಹೋರಾಟವಲ್ಲ ಎಂದು ವಿಪಕ್ಷ ನಾಯಕರು ತಿರುಗೇಟು ನೀಡಿದರು. ಕಳೆದ 32 ವರ್ಷದಿಂದ ಪಂಚಮಸಾಲಿಗಳ ಹೋರಾಟ ಶುರುವಾಗಿದೆ. ಕಾಶಪ್ಪನವರ್ ಹೋರಾಟ ಶುರುಮಾಡಿದ್ದು ಎಂದ ವಿಪಕ್ಷ ಸದಸ್ಯರು ಹೇಳಿದರು.

ಇದಕ್ಕೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಆದರೆ, 2002ರಲ್ಲಿ ಕೆಟಗರಿ ಮಾಡಿದಾಗ ಯಾಕೆ ಈ ಬಗ್ಗೆ ಪ್ರಸ್ತಾಪಿಸಿಲ್ಲ. 2021-22ರಲ್ಲಿ 2ಎ ಮೀಸಲಾತಿ ಹೋರಾಟ ಶುರುವಾಗಿದ್ದು ಎಂದು ಹೇಳಿದರು.

Latest Videos
Follow Us:
Download App:
  • android
  • ios