ಚನ್ನಪಟ್ಟಣ ತಾಲೂಕಿನ ಸಿಂಗರಾಜಿಪುರ ಕೆರೆಯ ಬಳಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯೊಬ್ಬಳ ಬ್ಯಾಗ್ ಮತ್ತು ಐಡಿ ಕಾರ್ಡ್ ಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಮದ್ದೂರು ತಾಲೂಕಿನ ಮಹಾಲಕ್ಷ್ಮಿ ಎಂದು ಗುರುತಿಸಲಾದ ವಿದ್ಯಾರ್ಥಿನಿ ಕೆರೆಯಲ್ಲಿ ಮುಳುಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಬೆಂಗಳೂರು (ಜೂ.12): ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಿಂಗರಾಜಿಪುರ ಕೆರೆಯ ಬಳಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯೊಬ್ಬಳ ಬ್ಯಾಗ್ ಮತ್ತು ಐಡಿ ಕಾರ್ಡ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ತೀವ್ರ ಹುಡುಕಾಟ ಆರಂಭಿಸಿದ್ದಾರೆ.
ಕಾಣೆಯಾಗಿರುವ ವಿದ್ಯಾರ್ಥಿನಿ ಮದ್ದೂರು ತಾಲೂಕಿನ ಅಂಬರಹಳ್ಳಿ ಗ್ರಾಮದ ಮಹಾಲಕ್ಷ್ಮಿ ಎಂದು ಗುರುತಿಸಲಾಗಿದೆ.
ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯಲ್ಲಿ, ವಿದ್ಯಾರ್ಥಿನಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಅಗ್ನಿಶಾಮಕ ಸಿಬ್ಬಂದಿ ಹಾಗೂ ನುರಿತ ಈಜುಗಾರರು ಕೆರೆಯಲ್ಲಿ ಹುಡುಕಾಟ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.
ಪೊಲೀಸರು ಸ್ಥಳದಲ್ಲಿ ತನಿಖೆ ನಡೆಸುತ್ತಿದ್ದು, ವಿದ್ಯಾರ್ಥಿನಿಯ ಕಾಣೆಯಾಗಿರುವ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸುವ ಪ್ರಯತ್ನದಲ್ಲಿದ್ದಾರೆ.
ಘಟನೆಯ ಕುರಿತು ತನಿಖೆ ಮುಂದುವರಿದಿದ್ದು, ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ.
ಹೆಚ್ಚಿನ ಅಪ್‌ಡೇಟ್‌ಗಾಗಿ ಸಂಪರ್ಕದಲ್ಲಿರಿ.
