ಪರಶುರಾಮ ಥೀಮ್ ಪಾರ್ಕ್ ವಿವಾದ; ಸಮಗ್ರ ತನಿಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರೀ ಪ್ರಚಾರದೊಂದಿಗೆ ಲೋಕರ್ಪಣೆಗೊಂಡಿದ್ದ ಕಾರ್ಕಳ ತಾಲೂಕಿನ ಎರ್ಲಪಾಡಿ ಉಮಿಕಲ್ ಬೆಟ್ಟದಲ್ಲಿ ಪರಶುರಾಮ ದೇವರ ಕಂಚಿನ ಪ್ರತಿಮೆ ವಿವಾದಕ್ಕೀಡಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಉಡುಪಿ (ನ.22): ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರೀ ಪ್ರಚಾರದೊಂದಿಗೆ ಲೋಕರ್ಪಣೆಗೊಂಡಿದ್ದ ಕಾರ್ಕಳ ತಾಲೂಕಿನ ಎರ್ಲಪಾಡಿ ಉಮಿಕಲ್ ಬೆಟ್ಟದಲ್ಲಿ ಪರಶುರಾಮ ದೇವರ ಕಂಚಿನ ಪ್ರತಿಮೆ ವಿವಾದಕ್ಕೀಡಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಪರಶುರಾಮ ಮೂರ್ತಿ ವಿವಾದ ಕುರಿತಂತೆ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಕಂದಾಯ ಇಲಾಖೆ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ ಉಡುಪಿ ಜಿಲ್ಲೆ ಕಾರ್ಕಳದ ಗೋಮಾಳ ಜಮೀನಿನಲ್ಲಿ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗಿತ್ತು. ಕಂಚು ಎಂದು ಹೇಳಿ ಫೈಬರ್ ಗ್ಲಾಸ್ ನಿಂದ ಪ್ರತಿಮೆ ನಿರ್ಮಾಣ ಮಾಡಿದ್ದ ಅರೋಪ ಕೇಳಿಬಂದಿತ್ತು. ಆರೋಪ ಬರುತ್ತಿದ್ದಂತೆ ಅರ್ಧ ಪ್ರತಿಮೆ ತೆರವು ಮಾಡಿರುವ ನಿರ್ಮಿತಿ ಕೇಂದ್ರ. ವಿಧಾನಸಭಾ ಚುನಾವಣೆಯ ಲಾಭ ಪಡೆಯಲು ಅಂದಿನ ಸಚಿವ ಸುನಿಲ್ ಕುಮಾರ್ ತರಾತುರಿ ಉದ್ಘಾಟನೆ ಮಾಡಿಸಿದ್ದಾರೆಂದು ಆರೋಪಿಸಲಾಗಿತ್ತು.
ಕಾರ್ಕಳ ಪರುಶುರಾಮ ಮೂರ್ತಿ ರಿಯಾಲಿಟಿ ಚೆಕ್‌ಗೆ ಮುಂದಾದ ಬಿಜೆಪಿ, ಕಾಂಗ್ರೆಸ್ ನಾಯಕರಿಗೆ ಜೈಲು ಶಿಕ್ಷೆ ಭೀತಿ
ಈ ಬಗ್ಗೆ ತನಿಖೆ ನಡೆಸುವಂತೆ ಕಳೆದ ಮೂರು ತಿಂಗಳಿಂದ ನಿರಂತರ ಹೋರಾಟ ನಡೆಸುತ್ತಿರುವ ಉಡುಪಿ ಜಿಲ್ಲಾ ಕಾಂಗ್ರೆಸ್. ಕಾಮಗಾರಿ ಹೆಸರಲ್ಲಿ ಅವ್ಯವಹಾರ ನಡೆದ ಬಗ್ಗೆ ಎಂಎಲ್ಸಿ ಮಂಜುನಾಥ ಭಂಡಾರಿ ನೇತೃತ್ವದಲ್ಲಿ ಹೋರಾಟ ನಡೆಸಿದ ಮುಖ್ಯಮಂತ್ರಿಗಳ ಗಮನ ಸೆಳೆದ ಕಾಂಗ್ರೆಸ್ ನಾಯಕರು. ಸದ್ಯ ವಿವಾದ ಸಂಬಂಧ ಸಮಗ್ರ ತನಿಖೆಗೆ ಸಿಎಂ ಸೂಚನೆ ನೀಡಿರುವುದಾಗಿ ಎಂಎಲ್ಸಿ ಮಂಜುನಾಥ ತಿಳಿಸಿದ್ದಾರೆ.