Asianet Suvarna News Asianet Suvarna News

ಸಂಸತ್ತಿನಲ್ಲಿ ಸ್ಮೋಕ್ ಬಾಂಬ್:ಪ್ರತಾಪ ಸಿಂಹ, ಅಮಿತ್ ಶಾ ವಿರುದ್ಧ ಆಪ್ ಪ್ರತಿಭಟನೆ

ಸಂಸತ್‌ನಲ್ಲಿ ಹೊಗೆ ಬಾಂಬ್ ಸಿಡಿಸಿದ ಆರೋಪಿಗಳಿಗೆ ಪಾಸ್ ಕೊಡಿಸಿರುವ ಸಂಸದ ಪ್ರತಾಪ್ ಸಿಂಹ ಅವರನ್ನು ಲೋಕಸಭಾ ಸ್ಥಾನದಿಂದ ಉಚ್ಚಾಟಿಸಬೇಕು. ದಾಳಿ ಹಿನ್ನೆಲೆಯಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಶುಕ್ರವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು. 

Parliament security breach AAP protests against Pratap Singh and Amit Shah at freedom park bengaluru rav
Author
First Published Dec 16, 2023, 8:22 AM IST

ಬೆಂಗಳೂರು (ಡಿ.16): ಸಂಸತ್‌ನಲ್ಲಿ ಹೊಗೆ ಬಾಂಬ್ ಸಿಡಿಸಿದ ಆರೋಪಿಗಳಿಗೆ ಪಾಸ್ ಕೊಡಿಸಿರುವ ಸಂಸದ ಪ್ರತಾಪ್ ಸಿಂಹ ಅವರನ್ನು ಲೋಕಸಭಾ ಸ್ಥಾನದಿಂದ ಉಚ್ಚಾಟಿಸಬೇಕು. ದಾಳಿ ಹಿನ್ನೆಲೆಯಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಶುಕ್ರವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು. 

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ, ದಾಳಿ ನಡೆಸಿದ ಯುವಕರಿಗೆ ಪ್ರತಾಪ್ ಸಿಂಹ ಅವರು ಪಾಸ್ ನೀಡಿರುವುದು ಕಳವಳಕಾರಿ ವಿಚಾರವಾಗಿದೆ. ಒಬ್ಬವಿದ್ಯಾವಂತ ಸಂಸದನಾಗಿ ಅಪರಿಚಿತರಿಗೆ ಪಾಸುಗಳನ್ನು ನೀಡಲು ಹೇಗೆ ಸಾಧ್ಯ. ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ. ತಕ್ಷಣ ಪ್ರತಾಪ್ ಸಿಂಹ ಅವರನ್ನು 3 ಸಂಸತ್‌ ಸದಸ್ಯ ಸ್ಥಾನದಿಂದ ಉಚ್ಛಾಟನೆ ಮಾಡಬೇಕು. ಸಂಸತ್‌ಗೆ ರಕ್ಷಣೆ ನೀಡದ ಅಮಿತ್ ಶಾ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. 

ಬೆಂಗಳೂರು ಜನರಿಗೆ ವಿದ್ಯುತ್ ಶಾಕ್; ಇಂದು ನಾಳೆ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ

ಸಂಸತ್ ಸಭಾಂಗಣ ಪ್ರವೇಶಿಸಲು ಪಾಸ್ ಸ್ವೀಕರಿಸಿದ ವ್ಯಕ್ತಿ ನಡೆಸುವ ಎಲ್ಲ ಕೃತ್ಯಗಳಿಗೆ ಪಾಸ್ ನೀಡಿದ ಸಂಸದರೇ ಜವಾಬ್ದಾರರಾಗಿ ರುತ್ತಾರೆ. ಪರಿಚಿತರಿಗಷ್ಟೇ ಪಾಸ್ ನೀಡಬೇಕು ಎಂಬ ನಿಯಮವಿದೆ. ಇದೆಲ್ಲವೂ ಪಾಸ್‌ನಲ್ಲಿ ಉಲ್ಲೇಖವಾಗಿರುತ್ತದೆ. ಹಾಗಾಗಿ ಪ್ರತಾಪ್ ಸಿಂಹ ಅವರನ್ನು ಉಚ್ಛಾಟಿಸಿ, ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು. 

ಆರೋಪಿಗಳಾಗಿರುವ ಮೈಸೂರು ಮೂಲದ ಮನೋರಂಜನ್, ಉತ್ತರ ಪ್ರದೇಶದ ಲಖನೌದ ಸಾಗರ್ ಶರ್ಮಾ, ಹರಿಯಾಣದ ನೀಲಂ ಹಾಗೂ ಐಕ್ಕಿ ಶರ್ಮಾ, ಗುರುಗ್ರಾಮದ ಲಲಿತ್‌ ಝಾ, ಮಹಾರಾಷ್ಟ್ರದ ಅಮೋಲ್ ಶಿಂಧೆ ಎಲ್ಲರೂ ಒಗ್ಗೂಡಿದ್ದು ಹೇಗೆ. ಒಂದೂವರೆ ವರ್ಷದಿಂದ ಸಂಚು ಹೂಡಿದ್ದರೂ ಕೇಂದ್ರ ಗುಪ್ತಚರ ಇಲಾಖೆಗೆ ತಿಳಿಯಲಿಲ್ಲವೆ. ದೇಶದ ಭದ್ರತೆ ವಿಚಾರವನ್ನು ಸಂಪೂರ್ಣವಾಗಿ ಕಡೆಗಣಿಸಿರುವ ಅಮಿತ್‌ಶಾ ಅವರು ರಾಜೀನಾಮೆ ನೀಡಬೇಕು ಎಂದು ತಾಯಿಸಿದರು.

ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕೋಡಿಮಠದ ಶ್ರೀಗೆ ಆಹ್ವಾನ!

 ಪ್ರತಿಭಟನೆಯಲ್ಲಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ಪ್ರೈಸದಂ, ನಗರ ಘಟಕದ ಅಧ್ಯಕ್ಷ ಡಾ. ಸತೀಶ್ ಮೋಹನ್, ಮಹಿಳಾಘಟಕದ ಅಧ್ಯಕ್ಷೆ ವೀಣಾ ರಾವ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ, ಕಾರ್ಯಕರ್ತರು ಪಾಲ್ಗೊಂಡಿದ್ದರು.

Follow Us:
Download App:
  • android
  • ios