ಭ್ರಷ್ಟಾಚಾರದ ಕೇಸಿದೆ ಎಂದು ಪಿಂಚಣಿ ನಿಲ್ಲಿಸುವಂತಿಲ್ಲ: ಹೈಕೋರ್ಟ್
ಸರ್ಕಾರಿ ನೌಕರನ ವಿರುದ್ಧ ಮೂರನೇ ವ್ಯಕ್ತಿ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ದೂರು ನೀಡಿದ್ದಲ್ಲಿ, ಆ ಪ್ರಕರಣ ವಿಲೇವಾರಿಗೆ ಬಾಕಿಯಿದೆ ಎಂಬ ಕಾರಣ ನೀಡಿ ಆರೋಪಿತ ಸರ್ಕಾರಿ ನೌಕರನಿಗೆ ನಿವೃತ್ತಿ ಬಳಿಕ ಪಿಂಚಣಿ ಹಾಗೂ ಇನ್ನಿತರ ಸೌಲಭ್ಯ ತಡೆಹಿಡಿಯಲು ಅವಕಾಶವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.
ಬೆಂಗಳೂರು (ನ.28) : ಸರ್ಕಾರಿ ನೌಕರನ ವಿರುದ್ಧ ಮೂರನೇ ವ್ಯಕ್ತಿ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ದೂರು ನೀಡಿದ್ದಲ್ಲಿ, ಆ ಪ್ರಕರಣ ವಿಲೇವಾರಿಗೆ ಬಾಕಿಯಿದೆ ಎಂಬ ಕಾರಣ ನೀಡಿ ಆರೋಪಿತ ಸರ್ಕಾರಿ ನೌಕರನಿಗೆ ನಿವೃತ್ತಿ ಬಳಿಕ ಪಿಂಚಣಿ ಹಾಗೂ ಇನ್ನಿತರ ಸೌಲಭ್ಯ ತಡೆಹಿಡಿಯಲು ಅವಕಾಶವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.
ಭ್ರಷ್ಟಾಚಾರ ಆರೋಪದಲ್ಲಿ ದೂರು ದಾಖಲಾಗಿದ್ದರೂ ನಿವೃತ್ತ ನೌಕರ ಮಲ್ಲಿಕಾರ್ಜುನ್ ಎಂಬಾತನಿಗೆ ಪೂರ್ಣ ಪ್ರಮಾಣದಲ್ಲಿ ಪಿಂಚಣಿ ನೀಡಲು ಏಕ ಸದಸ್ಯ ನ್ಯಾಯಪೀಠ ನೀಡಿದ್ದ ಆದೇಶ ರದ್ದು ಕೋರಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್) ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಸುನಿಲ್ ದತ್ತ ಯಾದವ್ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
PSI Recruitment 2023: ಡಿ.23ಕ್ಕೆ ಪಿಎಸ್‌ಐ ಮರುಪರೀಕ್ಷೆ ನಡೆಸಲು ಕೆಇಎ ಆದೇಶ: ಬೆಂಗಳೂರಲ್ಲಿ ಮಾತ್ರ ಅವಕಾಶ
ಮಲ್ಲಿಕಾರ್ಜುನ್ ಕೆಪಿಟಿಸಿಎಲ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ವೇಳೆ 2018ರಲ್ಲಿ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಮೂರನೇ ವ್ಯಕ್ತಿ ದೂರು ದಾಖಲಿಸಿದ್ದರು. ಬಳಿಕ 2022ರಲ್ಲಿ ಮಲ್ಲಿಕಾರ್ಜುನ್ ನಿವೃತ್ತರಾಗಿ ಪಿಂಚಣಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಕ್ರಿಮಿನಲ್ ಪ್ರಕರಣ ದಾಖಲಾಗಿರುವುದರಿಂದ ಪಿಂಚಣಿ ಮೊತ್ತದಲ್ಲಿ ಶೇ.50ರಷ್ಟು ಮಾತ್ರ ನೀಡಲಾಗುವುದು ಎಂದು ಕೆಪಿಟಿಸಿಎಲ್ ತಿಳಿಸಿತ್ತು. ಅದನ್ನು ಪ್ರಶ್ನಿಸಿ ಮಲ್ಲಿಕಾರ್ಜುನ್ ಹೈಕೋರ್ಟ್‌ಗೆ ತಕರಾರು ಸಲ್ಲಿಸಿದ್ದರು.
ಅದನ್ನು ಪುರಸ್ಕರಿಸಿದ್ದ ಏಕ ಸದಸ್ಯಪೀಠ, ಕೆಪಿಟಿಸಿಎಲ್ ಹಿಂಬರಹವನ್ನು ರದ್ದುಪಡಿಸಿತ್ತು. ಹಾಗೆಯೇ, ಸಂಪೂರ್ಣ ಪಿಂಚಣಿ ಪಾವತಿಸುವಂತೆ ಸೂಚನೆ ನೀಡಿತ್ತು. ಇದರಿಂದ ವಿಭಾಗೀಯ ಪೀಠಕ್ಕೆ ಕೆಪಿಟಿಸಿಎಲ್ ಮೇಲ್ಮನವಿ ಸಲ್ಲಿಸಿತ್ತು.
ಇದೀಗ ಕೆಪಿಟಿಸಿಎಲ್ ಮೇಲ್ಮನವಿಯನ್ನು ವಜಾಗೊಳಿಸಿರುವ ವಿಭಾಗೀಯ ಪೀಠ, ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಮೂರನೇ ವ್ಯಕ್ತಿ ದಾಖಲಿಸಿರುವ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಮುಂದಿಟ್ಟುಕೊಂಡು ನಿವೃತ್ತರಾದ ನೌಕರನ ಪಿಂಚಣಿ ತಡೆಹಿಡಿಯಲು ಅವಕಾಶವಿಲ್ಲ. ಈ ಪ್ರಕರಣದಲ್ಲಿ ಮಲ್ಲಿಕಾರ್ಜುನ್ ತಮ್ಮ ಉದ್ಯೋಗದಾತರಿಗೆ ಯಾವುದೇ ಸಮಸ್ಯೆ ಮಾಡಿಲ್ಲ. ಆತ ನಿವೃತ್ತಿಯಾದ ನಂತರ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ನಂತರ ಕ್ರಿಮಿನಲ್ ವಿಚಾರಣೆ ಆರಂಭವಾಗಿದೆ. ಹಾಗಾಗಿ, ಪಿಂಚಣಿ ಸೇರಿದಂತೆ ಇನ್ನಿತರ ಸೌಲಭ್ಯ ತಡೆಹಿಡಿಯಲು ಅವಕಾಶವಿಲ್ಲ. ಹಾಗಾಗಿ ಶೀಘ್ರವೇ ಮಲ್ಲಿಕಾರ್ಜುನ್‌ಗೆ ನೀಡಬೇಕಿರುವ ಎಲ್ಲ ಸೌಲಭ್ಯ ಕಲ್ಪಿಸುವಂತೆ ಕೆಪಿಟಿಸಿಎಲ್‌ಗೆ ನಿರ್ದೇಶಿಸಿದೆ.
ಅಸ್ಪಷ್ಟ ದಾಖಲೆ ನೆಪಕ್ಕೆ ಕೋಟಾ ನಿರಾಕರಣೆ ಸಲ್ಲದು: ಹೈಕೋರ್ಟ್ ಅಭಿಪ್ರಾಯ