Asianet Suvarna News Asianet Suvarna News

ಪ್ರವಾಸಿ ತಾಣಗಳಲ್ಲಿ ವೀಕೆಂಡ್‌ ಜನಜಂಗುಳಿ


ಲಾಕ್ ಡೌನ್ ಸಡಿಲಿಕೆ ಬಳಿಕ ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಸಾವಿರಾರು ಜನರು ವಿವಿಧೆಡೆ ಭೇಟಿ ನಿಡುತ್ತಿದ್ದಾರೆ.

People Visited Tourist Places After lockDown Release
Author
Bengaluru, First Published Sep 7, 2020, 8:28 AM IST

ಬೆಂಗಳೂರು (ಸೆ.07): ಕೊರೋನಾ ನಿಯಂತ್ರಣದ ಹಿನ್ನೆಲೆಯಲ್ಲಿ ಪ್ರವಾಸಿ ಸ್ಥಳಗಳಿಗೆ ವಿಧಿಸಲಾಗಿದ್ದ ನಿರ್ಬಂಧವನ್ನು ತೆರವು ಮಾಡಲಾಗಿದ್ದು, ಇದೀಗ ದಿನದಿಂದ ದಿನಕ್ಕೆ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುತ್ತಿರುವವರ ಸಂಖ್ಯೆ ಏರುತ್ತಿದೆ. ಭಾನುವಾರ ಜೋಗ, ಮೈಸೂರು, ಕೊಡಗು ಸೇರಿದಂತೆ ವಿವಿಧೆಡೆ ಪ್ರವಾಸಿ ಸ್ಥಳಗಳಿಗೆ ಪ್ರವಾಸಿಗರ ದಂಡೆ ಆಗಮಿಸಿತ್ತು.

ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ದೊಡ್ಡ ಪ್ರಮಾಣದಲ್ಲಿಯೇ ಪ್ರವಾಸಿಗರು ಧಾವಿಸಿದ್ದರು. ಸುಮಾರು 8 ಸಾವಿರ ಜನ ಪ್ರವಾಸಿಗರು ಜಲಪಾತದ ಸೊಗಸನ್ನು ಸವಿದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಕಂಡುಬಂದಿದ್ದಾರೆ. ಸುಮಾರು 780 ಕಾರು, 380 ಬೈಕ್‌, 70 ಟಿಟಿ ವಾಹನಗಳಲ್ಲಿ ಪ್ರವಾಸಿಗರು ಭೇಟಿ ನೀಡಿದ್ದರು. ನಿರ್ಬಂಧ ಸಡಿಲಿಕೆಯ ನಂತರ ಮೈಸೂರಿನ ಅರಮನೆಗೆ ಭೇಟಿ ನೀಡುತ್ತಿರುವವ ಸಂಖ್ಯೆಯೂ ಹೆಚ್ಚಳವಾಗಿದೆ.

ಗುಣಹೊಂದಿದ ಮಹಿಳೆಗೆ ಮತ್ತೆ ಕೊರೋನಾ! ಎಚ್ಚರ! ...

ಕೊಡಗು ಜಿಲ್ಲೆಯ ಮಡಿಕೇರಿಯ ರಾಜಾಸೀಟು ಉದ್ಯಾನವನ, ಅಬ್ಬಿ ಜಲಪಾತ, ಕುಶಾಲನಗರದ ಕಾವೇರಿ ನಿಸರ್ಗಧಾಮ ಪ್ರವಾಸಿ ತಾಣಗಳನ್ನು ತೆರೆಯಲಾಗಿದ್ದು, ಪ್ರವಾಸಿಗರು ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು.

ಸೋಂಕಿನಲ್ಲಿ ಬ್ರೆಜಿಲ್ ಹಿಂದಿಕ್ಕಿದ ಭಾರತವೀಗ ವಿಶ್ವದಲ್ಲೇ ನಂಬರ್ 2! ...

ಬೆಳಗಾವಿ ಜಿಲ್ಲೆಯ ಗೋಕಾಕ್‌ ಫಾಲ್ಸ್‌, ಗೋಡಚಿನಮಲ್ಕಿ ಫಾಲ್ಸ್‌, ವಿಜಯಪುರದ ಗೋಲಗುಮ್ಮಟ, ಬಾಗಲಗೋಟೆ ಜಿಲ್ಲೆಯ ಬಾದಾಮಿ, ಪಟ್ಟದಕಲ್ಲು, ಐಹೊಳೆ, ಕೂಡಲಸಂಗಮ, ಪಟ್ಟದಕಲ್ಲು ವೀಕ್ಷಣೆಗೆ ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು.

ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಸಾತೊಡ್ಡಿ, ಮಾಗೋಡ, ಕಾನೂರು ಜಲಪಾತಗಳಲ್ಲಿ ಬಹಳಷ್ಟುಜನ ಪ್ರವಾಸಿಗರು ಆಗಮಿಸಿದ್ದರು.

Follow Us:
Download App:
  • android
  • ios