ಜನಪ್ರತಿನಿಧಿಗಳು ಆಸ್ತಿ ವಿವರ ನೀಡದ ಹಿನ್ನೆಲೆ ಆಸ್ತಿ ವಿವರ ಸಲ್ಲಿಸುವಂತೆ ಕರ್ನಾಟಕ ಲೋಕಾಯುಕ್ತ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ. ಕಳೆದ ಬಾರಿ ಸಚಿವರಾಗಿದ್ದ ಶ್ರೀರಾಮುಲು, ಕೆ.ಸಿ ನಾರಾಯಣಗೌಡ, ಎಸ್. ಅಂಗಾರ ಆಸ್ತಿ ವಿವರ ಸಲ್ಲಿಸದೇ ಲೋಪವೆಸಗಿದ್ದರು.  ಈ ಬಾರಿ ರಹೀಂಖಾನ್, ಕೆ.ಎನ್ ರಾಜಣ್ಣ, ಜಮೀರ್ ಅಹಮ್ಮದ್ ಖಾನ್, ರಾಮಲಿಂಗ ರೆಡ್ಡಿ, ಕೆ.ಎಚ್ ಮುನಿಯಪ್ಪರಿಂದಲೂ ಆಸ್ತಿ ವಿವರ ಸಲ್ಲಿಸಿಲ್ಲ

ಬೆಂಗಳೂರು (ನ.30): ಜನಪ್ರತಿನಿಧಿಗಳು ಆಸ್ತಿ ವಿವರ ನೀಡದ ಹಿನ್ನೆಲೆ, ಕಳೆದ ವರ್ಷದ ಅವಧಿ ಮತ್ತು ಈ ಅವಧಿಯಲ್ಲಿ ಆಸ್ತಿ ವಿವರ ಸಲ್ಲಿಸದ ಜನಪ್ರತಿನಿಧಿಗಳ ಪಟ್ಟಿಯನ್ನು ಕರ್ನಾಟಕ ಲೋಕಾಯುಕ್ತ ಸಾರ್ವಜನಿಕ ಪ್ರಕಟಣೆ ಮೂಲಕ ಹೊರಡಿಸಿದೆ.

ಜೂನ್ 30ರೊಳಗೆ ಪ್ರತಿ ವರ್ಷ ಎಲ್ಲ ಜನಪ್ರತಿನಿಧಿಗಳು ಆಸ್ತಿ ವಿವರ ಸಲ್ಲಿಸಬೇಕು. ಜನಪ್ರತಿನಿಧಿಗಳು ಪ್ರತಿವರ್ಷ ಲೋಕಾಯುಕ್ತಕ್ಕೆ ತಮ್ಮ ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯ ಹೀಗಿದ್ದೂ ಕೆಲವರು ಈ ಬಗ್ಗೆ ನಿರ್ಲಕ್ಷ್ಯ ವಹಿಸಿರುವ ಹಿನ್ನೆಲೆ 2022-23 ನೇ ಸಾಲಿನಲ್ಲಿ ಆಸ್ತಿ ವಿವರ ಸಲ್ಲಿಸದ ಶಾಸಕರ ಮಾಹಿತಿ ಪ್ರಕಟ ಪಡಿಸಿದೆ.

ಕಳೆದ ಬಾರಿ ಸಚಿವರಾಗಿದ್ದ ಶ್ರೀರಾಮುಲು, ಕೆ.ಸಿ ನಾರಾಯಣಗೌಡ, ಎಸ್. ಅಂಗಾರ ಆಸ್ತಿ ವಿವರ ಸಲ್ಲಿಸದೇ ಲೋಪವೆಸಗಿದ್ದರು. ಈ ಬಾರಿ ರಹೀಂಖಾನ್, ಕೆ.ಎನ್ ರಾಜಣ್ಣ, ಜಮೀರ್ ಅಹಮ್ಮದ್ ಖಾನ್, ರಾಮಲಿಂಗ ರೆಡ್ಡಿ, ಕೆ.ಎಚ್ ಮುನಿಯಪ್ಪರಿಂದಲೂ ಆಸ್ತಿ ವಿವರ ಸಲ್ಲಿಸಿಲ್ಲ. ಕಳೆದ ವಿಧಾನಸಭೆ ಅವಧಿಯ 81 ಮಂದಿ ಶಾಸಕರಿಂದ ಆಸ್ತಿ ವಿವರ ಸಲ್ಲಿಸಿಲ್ಲ. ಈ ಬಾರಿ ವಿಧಾನಸಭೆ ಅವಧಿಯ 51 ಮಂದಿ ಶಾಸಕರಿಂದ ಆಸ್ತಿ ವಿವರ ಸಲ್ಲಿಕೆ ಆಗಿಲ್ಲ. 21 ಮಂದಿ ವಿಧಾನ ಪರಿಷತ್ ಸದಸ್ಯರಿಂದಲೂ ಆಸ್ತಿ ವಿವರ ಸಲ್ಲಿಕೆ ಆಗಿಲ್ಲ. 

ಸಿಸಿ ಕ್ಲಿಯರೆನ್ಸ್ ಮಾಡಲು ಹಣಕ್ಕೆ ಬೇಡಿಕೆ ಭ್ರಷ್ಟಾಚಾರದ ಕೂಪವಾಗಿರೋ ಬಳ್ಳಾರಿ ಆರ್‌ಟಿಒ ಕಚೇರಿ!

ಜೂನ್ 30 ರ ಬಳಿಕ ಆಸ್ತಿ ವಿವರ ಸಲ್ಲಿಕೆ ಮಾಡಿರುವ ಸಚಿವ ಮಧು ಬಂಗಾರಪ್ಪ, ಮಾಜಿ ಸಚಿವ ಮುರಿಗೇಶ್ ನಿರಾಣಿ. ಅವಧಿ ಮುಗಿದ ಬಳಿಕ ಆಸ್ತಿ ವಿವರ ಸಲ್ಲಿಕೆ ಮಾಡಿರುವ 10 ಮಂದಿ ಶಾಸಕರು, ಒಬ್ಬ ವಿಧಾನ ಪರಿಷತ್ ಸದಸ್ಯ. ಇನ್ನು ಆಸ್ತಿ ವಿವರ ಸಲ್ಲಿಸದ ಶಾಸಕರು, ಸಚಿವರಿಗೆ ನೋಟಿಸ್ ಕಳಿಸಿದ ಲೋಕಾಯುಕ್ತ. ಸೆಪ್ಟಂಬರ್ 1 ರಂದೇ ನೊಟೀಸ್ ನೀಡಿದ್ದರೂ ಇಲ್ಲಿವರೆಗೆ ಆಸ್ತಿ ವಿವರ ಸಲ್ಲಿಸದೇ ನಿರ್ಲಕ್ಷ್ಯ ತೋರಿಸಿರುವ ಶಾಸಕರು. 

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 90ಕ್ಕೂ ಹೆಚ್ಚುಕಡೆ ಲೋಕಾ ದಾಳಿ; ನಿದ್ದೆ ಮಂಪರಿನಲ್ಲಿದ್ದ ಭ್ರಷ್ಟ ಅಧಿಕಾರಿಗಳಿಗೆ ಶಾಕ್!