ರಾಜ್ಯದ ದೇವಸ್ಥಾನಗಳ ಪೂಜಾ ಕಾರ್ಯ ಇತ್ಯಾದಿಗಳ ಕೆಲಸಕ್ಕೆಂದು ಸರ್ಕಾರ ಬಿಡುಗಡೆ ಮಾಡುವ ‘ತಸ್ತಿಕ್‌’ ಹಣಕ್ಕೂ ಖಜಾನೆ ಅಧಿಕಾರಿಗಳು ಪರ್ಸೆಂಟೇಜ್‌ ಕೇಳುತ್ತಿದ್ದಾರೆಂದು ಮುಜರಾಯಿ ಇಲಾಖೆಗೆ ಒಳಪಟ್ಟದೇವಸ್ಥಾನಗಳ ಅರ್ಚಕರ ಸಂಘ ಆರೋಪಿಸಿದೆ.

ಬೆಂಗಳೂರು (ಆ.6) :  ರಾಜ್ಯದ ದೇವಸ್ಥಾನಗಳ ಪೂಜಾ ಕಾರ್ಯ ಇತ್ಯಾದಿಗಳ ಕೆಲಸಕ್ಕೆಂದು ಸರ್ಕಾರ ಬಿಡುಗಡೆ ಮಾಡುವ ‘ತಸ್ತಿಕ್‌’ ಹಣಕ್ಕೂ ಖಜಾನೆ ಅಧಿಕಾರಿಗಳು ಪರ್ಸೆಂಟೇಜ್‌ ಕೇಳುತ್ತಿದ್ದಾರೆಂದು ಮುಜರಾಯಿ ಇಲಾಖೆಗೆ ಒಳಪಟ್ಟದೇವಸ್ಥಾನಗಳ ಅರ್ಚಕರ ಸಂಘ ಆರೋಪಿಸಿದೆ.

ಈ ಕುರಿತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಪತ್ರ ಬರೆದಿರುವ ಮುಜರಾಯಿ ಇಲಾಖೆಯ ಸಿ ದರ್ಜೆ ದೇವಸ್ಥಾನಗಳ ಅರ್ಚಕರ ಸಂಘ, ಸರ್ಕಾರ ಪ್ರತಿ ವರ್ಷ ದೇವಸ್ಥಾನಗಳಲ್ಲಿ ನಿತ್ಯ ಪೂಜಾ ಕಾರ್ಯ ಇತ್ಯಾದಿ ಸಣ್ಣ ಪುಟ್ಟಗಳ ಕೆಲಸಗಳಿಗೆ ತಸ್ತಿಕ್‌ ಹಣ ಬಿಡುಗಡೆ ಮಾಡುತ್ತಿದೆ. ಈ ಹಣ ಬಿಡುಗಡೆ ಮಾಡಲು ಖಜಾನೆ ಅಧಿಕಾರಿಗಳಿಗೆ ಶೇ.20ರಷ್ಟುಕಮಿಷನ್‌ ಕೇಳುತ್ತಿದ್ದಾರೆ. ಕಮಿಷನ್‌ ಕೊಡದೇ ಇದ್ದರೆ ಹಣ ಬಿಡುಗಡೆ ಮಾಡುತ್ತಿಲ್ಲ. ಹಣ ಬಿಡುಗಡೆಗೂ ದಲ್ಲಾಳಿಗಳಿಗೆ ಹಣ ಕೊಡಬೇಕಾಗಿದೆ. ಆದ್ದರಿಂದ ಕಮಿಷನ್‌ ವ್ಯವಹಾರವನ್ನು ಸರ್ಕಾರ ತಡೆಯಬೇಕು ಎಂದು ಆಗ್ರಹಿಸಿದೆ.

ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ ಮಸೀದಿ ಮದ್ರಸಾಗೆ ನೆರವು : ವ್ಯಾಪಕ ವಿರೋಧ

ಕಮಿಷನ್‌ ವ್ಯವಹಾರ ನಡೆಯದಿರಲು ಸರ್ಕಾರ ಆಯಾ ದೇವಾಲಯಗಳ ಅರ್ಚಕರ ಖಾತೆಗೆ ತಸ್ತಿಕ್‌ ಹಣ ಜಮೆ ಮಾಡುವಂತೆ ಸಚಿವರಿಗೆ ಮನವಿ ಮಾಡಿದೆ.

ಅರ್ಚಕರ ಖಾತೆಗೆ ಜಮೆಗೆ ಕ್ರಮ: ರಾಮಲಿಂಗಾರೆಡ್ಡಿ

ಸಂಘದ ಮನವಿಗೆ ಸ್ಪಂದಿಸಿರುವ ಸಚಿವ ರಾಮಲಿಂಗಾರೆಡ್ಡಿ, ಅರ್ಚಕರು ಸಾಕಷ್ಟುಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಮಾಡಿದ್ದಾರೆ. ಈವರೆಗೆ ತಹಶೀಲ್ದಾರ್‌ ಕಚೇರಿಯಿಂದ ವೇತನ ಪಡೆಯಬೇಕಿತ್ತು. ಕಮಿಷನ್‌ ಕೇಳುತ್ತಿರುವುದರಿಂದ ಸಾಕಷ್ಟುಸಮಸ್ಯೆ ಆಗುತ್ತಿದೆ ಎಂದು ದೂರಿದ್ದರು. ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಅರ್ಚಕರ ಖಾತೆಗೆ ನೇರವಾಗಿ ತಸ್ತಿಕ್‌ ಹಣ ಜಮೆ ಮಾಡುವಂತೆ ಈಗಾಗಲೇ ಆದೇಶಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾಗಿ ಪ್ರತಿಕ್ರಿಯಿಸಿದ್ದಾರೆ.

ಕಾಶಿಯಾತ್ರೆ ಸಬ್ಸಿಡಿ 7500ಗೆ ಹೆಚ್ಚಳಕ್ಕೆ ಚಿಂತನೆ: ಸಚಿವ ರಾಮಲಿಂಗಾರೆಡ್ಡಿ