ಪೆರಿಫೆರಲ್ ರಸ್ತೆ ಯೋಜನೆ ರದ್ದುಗೊಳಿಸಲು ಸಾಧ್ಯವಿಲ್ಲ: ಡಿಸಿಎಂ ಡಿಕೆ ಶಿವಕುಮಾರ
ಪೆರಿಫೆರಲ್ ರಿಂಗ್ ರಸ್ತೆಗೆ ಭೂಮಿ ನೀಡುವ ರೈತರ ಹಿತ ಕಾಪಾಡುವ ಸಲುವಾಗಿ ಬದಲಿ ಭೂಮಿ ಹಂಚಿಕೆ, ಹೆಚ್ಚಿನ ಪರಿಹಾರ ನೀಡುವ ವಿಚಾರದಲ್ಲಿ ಶಕ್ತಿ ಮೀರಿ ಪ್ರಯತ್ನಿಸಲಾಗುವುದು. ಆದರೆ, ರಸ್ತೆ ನಿರ್ಮಾಣ ಯೋಜನೆ ಜಾರಿ ಮಾಡೇ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು.
ಬೆಂಗಳೂರು (ಆ.2): ಪೆರಿಫೆರಲ್ ರಿಂಗ್ ರಸ್ತೆಗೆ ಭೂಮಿ ನೀಡುವ ರೈತರ ಹಿತ ಕಾಪಾಡುವ ಸಲುವಾಗಿ ಬದಲಿ ಭೂಮಿ ಹಂಚಿಕೆ, ಹೆಚ್ಚಿನ ಪರಿಹಾರ ನೀಡುವ ವಿಚಾರದಲ್ಲಿ ಶಕ್ತಿ ಮೀರಿ ಪ್ರಯತ್ನಿಸಲಾಗುವುದು. ಆದರೆ, ರಸ್ತೆ ನಿರ್ಮಾಣ ಯೋಜನೆ ಜಾರಿ ಮಾಡೇ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು.
ಹೊಸೂರು ರಸ್ತೆಯಿಂದ ತುಮಕೂರು ರಸ್ತೆಗೆ ಸಂಪರ್ಕಿಸುವ ಪೆರಿಫೆರಲ್ ರಿಂಗ್ ರಸ್ತೆ ಯೋಜನೆಗೆ ಭೂಮಿ ನೀಡಲಿರುವ ರೈತರು ಹಾಗೂ ಭೂ ಮಾಲಿಕರೊಂದಿಗೆ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸೋಮವಾರ ಸಭೆ ನಡೆಸಿ ಮಾತನಾಡಿದ ಅವರು, ಪೆರಿಫೆರಲ್ ರಿಂಗ್ ರಸ್ತೆ ಯೋಜನೆಗಾಗಿ ಒಟ್ಟು 2,565.30 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಿದೆ. ಭೂ ಸ್ವಾಧೀನ ಸೇರಿದಂತೆ ಯೋಜನೆಗೆ .25 ಸಾವಿರ ಕೋಟಿ ವೆಚ್ಚವಾಗಲಿದೆ. 5 ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸಲಾಗುತ್ತದೆ. 2005ರಲ್ಲಿ ಯೋಜನೆಗೆ ಮೊದಲ ಪ್ರಾಥಮಿಕ ಅಧಿಸೂಚನೆ ಪ್ರಕಟಿಸಲಾಯಿತು. ಆಗಿನಿಂದಲೂ ಒಂದಿಲ್ಲೊಂದು ಕಾರಣದಿಂದ ಯೋಜನೆ ಅನುಷ್ಠಾನ ಸಾಧ್ಯವಾಗಿಲ್ಲ ಎಂದರು.
Brand Bengaluru ವಿರುದ್ಧ ಬೀದಿಗಿಳಿದ ವ್ಯಾಪಾರಿಗಳು; ಸೌಟು, ತಟ್ಟೆಹಿಡಿದು ಪ್ರತಿಭಟನೆ
ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂನಲ್ಲಿ ಪ್ರಕರಣ ದಾಖಲಾಗಿದ್ದಾಗ 2013ಕ್ಕಿಂತ ಹಿಂದಿನ ಭೂಸ್ವಾಧೀನ ಕಾಯ್ದೆಯಂತೆ ಭೂಮಾಲಿಕರಿಗೆ ಪರಿಹಾರ ನೀಡುವಂತೆ ಆದೇಶಿಸಿದೆ. ಹೀಗಾಗಿ 2013ರ ಭೂ ಸ್ವಾಧೀನ ಕಾಯ್ದೆಯಂತೆ ಪರಿಹಾರ ನೀಡಲು ಸಾಧ್ಯವಿಲ್ಲ. ಆದರೂ, ರೈತರ ಹಿತ ಕಾಪಾಡಲು ಕಾನೂನು ತಜ್ಞರೊಂದಿಗೆ ಮಾತುಕತೆ ನಡೆಸಿ, ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟದಲ್ಲಿ ಚರ್ಚಿಸಿ ಹೆಚ್ಚಿನ ಪರಿಹಾರ ನೀಡುವ ಸಂಬಂಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಯೋಜನೆಗಾಗಿ ಬೇಕಿರುವ ಭೂಮಿಗೆ ಸಂಬಂಧಿಸಿದಂತೆ ಈಗಾಗಲೇ ನೋಟಿಫಿಕೇಷನ್ ಹೊರಡಿಸಲಾಗಿದೆ. ಅದನ್ನು ಡಿ-ನೋಟಿಫೈ ಮಾಡಲು ಸಾಧ್ಯವಿಲ್ಲ. ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಚ್‌ನ ಏಕ ಸದಸ್ಯ ಪೀಠ ಆದೇಶ ನೀಡಿದ ನಂತರ ರೈತರಾರಯರೂ ಮೇಲ್ಮನವಿ ಸಲ್ಲಿಸಲಿಲ್ಲ. ಬೇಕಿದ್ದರೆ ಈಗ ರೈತರು ಮೇಲ್ಮನವಿ ಸಲ್ಲಿಸಬಹುದು. ಅದರಲ್ಲಿ ನನ್ನದು ತಕರಾರಿಲ್ಲ. ಏನೇ ಅಡೆತಡೆ ಬಂದರೂ ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗಾಗಿ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ರೈತರನ್ನು ವಿಶ್ವಾಸಕ್ಕೆ ಪಡೆದು ಪೆರಿಫೆರಲ್ ರಸ್ತೆಗೆ ಭೂ ಪರಿಹಾರ ನಿರ್ಧಾರ: ಡಿಕೆಶಿ
ಬಿಡಿಎ ಅಧ್ಯಕ್ಷ ರಾಕೇಶ್ ಸಿಂಗ್, ಆಯುಕ್ತ ಕುಮಾರ ನಾಯಕ್, ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್, ಶಾಸಕ ನಾರಾಯಣ ಸ್ವಾಮಿ ಇದ್ದರು.
ಯೋಜನೆಗೆ ಈಗಾಗಲೇ ಮೂರು ಬಾರಿ ಟೆಂಡರ್ ಪ್ರಕ್ರಿಯೆ ನಡೆಸಲಾಗಿದೆ. ಆದರೆ, ಗುತ್ತಿಗೆದಾರರನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಈಗಾಗಲೇ ಬಹಳಷ್ಟುವಿಳಂಬವಾಗಿದ್ದು, ಈಗ ಯೋಜನೆ ಅನುಷ್ಠಾನಗೊಳಿಸುವುದು ಅನಿವಾರ್ಯವಾಗಿದೆ. ಸಭೆಯಲ್ಲಿ ರೈತರು ನೀಡಿರುವ ಸಲಹೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು.
-ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ.
ಯೋಜನೆ ಹೆಸರು ಬದಲು
ಪೆರಿಫೆರಲ್ ರಿಂಗ್ ರಸ್ತೆಯಿಂದಾಗಿ ಕೈಗಾರಿಕೆ ಸೇರಿದಂತೆ ಬೆಂಗಳೂರಿನ ಆರ್ಥಿಕ ಪರಿಸ್ಥಿತಿ ವೃದ್ಧಿಯಾಗುವಂತಹ ಹಲವು ಕ್ರಮಗಳು ಅನುಷ್ಠಾನಗೊಳ್ಳಲಿದೆ. ಹೀಗಾಗಿ ಯೋಜನೆಗೆ ಪ್ರತ್ಯೇಕ ಹೆಸರು ಇಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೂಚಿಸಿದ್ದಾರೆ. ಹೀಗಾಗಿ ಪಿಆರ್‌ಆರ್‌ಗೆ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಎಂದು ಹೆಸರಿಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಬಿಡಿಎ ಆಯುಕ್ತ ಕುಮಾರ್ ನಾಯಕ್ ತಿಳಿಸಿದರು.