ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಲಬುರಗಿ ಉತ್ತರ ಕ್ಷೇತ್ರದದಿಂದ ಆಯ್ಕೆಯಾದ ಕಾಂಗ್ರೆಸ್‌ ಶಾಸಕಿ ಕನೀಝ್‌ ಫಾತಿಮಾ ಅವರು ಅಫಿಡವಿಟ್‌ನಲ್ಲಿ ಆಸ್ತಿ ಹಾಗೂ ಶೈಕ್ಷಣಿಕ ಅರ್ಹತೆ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದು, ಅವರ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಫಾತಿಮಾ ಅವರಿಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

ಬೆಂಗಳೂರು (ಡಿ.9) : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಲಬುರಗಿ ಉತ್ತರ ಕ್ಷೇತ್ರದದಿಂದ ಆಯ್ಕೆಯಾದ ಕಾಂಗ್ರೆಸ್‌ ಶಾಸಕಿ ಕನೀಝ್‌ ಫಾತಿಮಾ ಅವರು ಅಫಿಡವಿಟ್‌ನಲ್ಲಿ ಆಸ್ತಿ ಹಾಗೂ ಶೈಕ್ಷಣಿಕ ಅರ್ಹತೆ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದು, ಅವರ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಫಾತಿಮಾ ಅವರಿಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

ಈ ಕುರಿತಂತೆ ಚುನಾವಣೆಗೆ ಜನತಾದಳ (ಸಂಯುಕ್ತ) ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದ ಎ.ಎಸ್. ಶರಣಬಸಪ್ಪ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರ ಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು.

ಪೊಲೀಸರ ಮಾತು ಕೇಳದೆ ಮೌಲ್ವಿ ಮನೆಗೆ ಹೋದ ಸಿಎಂ; ಇನ್ನಷ್ಟು ದಾಖಲೆ ಬಿಡುಗಡೆ ಮಾಡುವೆ ಎಂದ ಯತ್ನಾಳ್‌!

ಕೆಲ ಕಾಲ ಅರ್ಜಿದಾರರ ಪರ ವಕೀಲ ವಾದ ಆಲಿಸಿದ ಬಳಿಕ ಪ್ರತಿವಾದಿಗಳಾದ ಶಾಸಕಿ ಕನೀಝ್‌ ಫಾತಿಮಾ, ಚಂದ್ರಕಾಂತ್‌, ನಾಸಿರ್ ಹುಸೇನ್‌, ಮತ್ತಿತರರಿಗೆ ನೋಟಿಸ್‌ ಜಾರಿಗೊಳಿಸಿದ ನ್ಯಾಯಪೀಠ, ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿತು.

ರಾಜ್ಯ ವಿಧಾನಸಭೆಗೆ 2023ರ ಮೇ 10ರಂದು ನಡೆದ ಚುನಾವಣೆಯಲ್ಲಿ ಕನೀಝ್‌ ಫಾತಿಮಾ ಕಲಬುರಗಿ ಉತ್ತರ ಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಆದರೆ, ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ತಮ್ಮ ಸ್ಥಿರಾಸ್ತಿ, ಶೇರುಗಳು ಹಾಗೂ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲೆಗಳಲ್ಲಿ ಸತ್ಯಾಂಶದ ವಿವರಗಳನ್ನು ನೀಡಿಲ್ಲ. ಇದು ಜನಪ್ರತಿನಿಧಿಗಳ ಕಾಯ್ದೆಯ ಉಲ್ಲಂಘನೆಯಾಗಿದ್ದು, ಅವರ ಆಯ್ಕೆಯನ್ನು ಅನೂರ್ಜಿತಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಸಿಎಂ ಆದಾಗೆಲ್ಲ ಬರ ಎಂಬ ಮಾತಿಗೆ ಸದನದಲ್ಲಿ ಗದ್ದಲ! ಆರಗ ಜ್ಞಾನೇಂದ್ರ ಆಡಿದ ಮಾತು ಕಡತದಿಂದ ತೆಗೆಸಿದ ಸ್ಪೀಕರ್!