Asianet Suvarna News Asianet Suvarna News

ಪೆಟ್ರೋಲ್ ಡೀಸೆಲ್ ದರ ಹೆಚ್ಚಿಸಿದರೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ ಕಡಿಮೆ ಬೆಲೆಯಿದೆ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ ಮಾಡಿದ ನಂತರವೂ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಿಗಿಂತ ಕಡಿಮೆ ಬೆಲೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Petrol diesel price hike also lower than in BJP ruled states says CM Siddaramaiah sat
Author
First Published Jun 17, 2024, 5:35 PM IST

ಬೆಂಗಳೂರು (ಜೂ.17) : ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಿಗಿಂತ ಹಾಗೂ ದಕ್ಷಿಣ ಭಾರತದ ಇತರೆ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ. ಲೆಕ್ಕದಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ದರವನ್ನು ತಗ್ಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗೃಹ ಕಚೇರಿ ಕೃಷ್ಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತೆರಿಗೆ ಹೆಚ್ಚಳದ ಅನಿವಾರ್ಯತೆಯನ್ನು ಕೇಂದ್ರದ ಮೋದಿ ಸರ್ಕಾರ ಹೇಗೆ ಸೃಷ್ಟಿಸಿದೆ. ರಾಜ್ಯದ ಪಾಲಿನ ಹಣವನ್ನು ಕೊಡದೇ ಇರುವುದರಿಂದ ಇಂತಹ ಪರಿಸ್ಥಿತಿ ಸೃಷ್ಟಿ ಆಗಿದೆ. ದೇಶದಲ್ಲಿ 2015ರ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಅರ್ಧಕ್ಕರ್ಧ ಕಡಿಮೆ ಆದಾಗಲೂ ಅವರ ಲಾಭವನ್ನು ದೇಶದ ಜನರಿಗೆ ನೀಡದೆ ಮೋದಿ ಸರ್ಕಾರ ಇಂಧನ ಬೆಲೆಯನ್ನು ನಿರಂತರವಾಗಿ ಏರಿಸುತ್ತಾ ಹೋಗಿದ್ದರ ಅಂಕಿ ಅಂಶಗಳನ್ನು ವಿವರಿಸಿದರು. 

ಸಂಪನ್ಮೂಲ ಕ್ರೋಢಿಕರಣಕ್ಕಾಗಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ: ಗೃಹ ಸಚಿವ ಪರಮೇಶ್ವರ

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ ಹೆಚ್ಚಳದಿಂದ ಸಂಗ್ರಹವಾಗುವ ಅಂದಾಜು 3,000 ಕೋಟಿ ರೂ.ಗಳು ರಾಜ್ಯದ ಖಜಾನೆಗೆ ಸಂದಾಯವಾಗುತ್ತದೆ. ಆ ಹಣ ಜನರ ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗವಾಗುತ್ತದೆ ಅದು ನಮ್ಮ ಜೇಬಿಗೆ ಹೋಗುವುದಿಲ್ಲ. ಆದರೆ, ಹಿಂದಿನ ಬಿಜೆಪಿ ಸರ್ಕಾರದಲ್ಲಿ ರಾಜ್ಯದ ಪ್ರತಿಯೊಂದು ಯೋಜನೆಗಳಲ್ಲಿಯೂ ಶೇ.40% ತೆರಿಗೆ ಹಣ ಬಿಜೆಪಿ ನಾಯಕರ ಜೇಬಿಗೆ ಹೋಗುತ್ತಿತ್ತು. ಈ ರೀತಿ ಅಂದಾಜು 1.5 ಲಕ್ಷ ಕೋಟಿ ರೂ.ಗಳಷ್ಟು  ರಾಜ್ಯದ ಜನರ ಬೆವರಗಳಿಕೆಯ ತೆರಿಗೆ ಹಣವನ್ನು ಈ ಬಿಜೆಪಿ ನಾಯಕರ ತಮ್ಮ ಜೇಬಿಗೆ  ತುಂಬಿಸಿಕೊಂಡಿದ್ದಾರೆ. ಇಂತಹ ಲೂಟಿಕೋರ, ಭ್ರಷ್ಟ, ಜನವಿರೋಧಿ ಬಿಜೆಪಿ ನಾಯಕರಿಗೆ ಜನಕಲ್ಯಾಣಕ್ಕಾಗಿ ಸ್ಪಲ್ಪ ಪ್ರಮಾಣದ ತೆರಿಗೆ ಹೆಚ್ಚಿಸಿದ್ದನ್ನು ಪ್ರಶ್ನಿಸುವ ಯೋಗ್ಯತೆ ಎಲ್ಲಿದೆ ಎಂದು ಪ್ರಶ್ನಿಸಿದರು. 

ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 60 ಸಾವಿರ ಕೋಟಿ ರೂ.ಗಳನ್ನು ವ್ಯಯ ಮಾಡುತ್ತಿದೆ. ಇಷ್ಟೂ ಹಣ ರಾಜ್ಯದ ಎಲ್ಲಾ ಜಾತಿ-ಸಮುದಾಯಗಳ ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೋಗುತ್ತದೆ. ಸದ್ಯದ ಅಲ್ಪ ಪ್ರಮಾಣದ ಡೀಸೆಲ್-ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ನಮಗೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3,000 ಕೋಟಿ ರೂ. ಮಾತ್ರ. ಆದರೆ, ಗ್ಯಾರಂಟಿಗಳಿಗೆ ನಾವು ಕೊಡುತ್ತಿರುವುದು 60,000 ಕೋಟಿ ರೂಪಾಯಿ. ಹೀಗಾಗಿ ಆರ್.ಅಶೋಕ್ ಅವರ ಪೆದ್ದುತನದ ಮಾತುಗಳಿಗೆ ಅರ್ಥವಿಲ್ಲ. ಆರ್.ಅಶೋಕ್ ಗೆ ಇದೆಲ್ಲಾ ಅರ್ಥ ಆಗಲ್ಲ , ಅರ್ಥ ಮಾಡಿಕೊಳ್ಳುವ ಸಾಮರ್ಥ್ಯವೂ ಇಲ್ಲ ಎಂದು ವ್ಯಂಗ್ಯವಾಡಿದರು.

ಜನರಿಗೆ ಹೆಚ್ಚಿನ ಹೊರೆಯಾಗದ ರೀತಿಯಲ್ಲಿ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲ ಕ್ರೋಢೀಕರಣದ ಉದ್ದೇಶದೊಂದಿಗೆ ಪೆಟ್ರೋಲ್‌, ಡೀಸೆಲ್‌ ಮಾರಾಟ ತೆರಿಗೆಯಲ್ಲಿ 3 ರೂ. ಗಳಷ್ಟು ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರ ಜಿ.ಎಸ್.ಟಿ. ವ್ಯವಸ್ಥೆ ಜಾರಿಗೊಳಿಸಿದ ನಂತರ ರಾಜ್ಯ ಸರ್ಕಾರಗಳ ಸಂಪನ್ಮೂಲ ಕ್ರೋಢೀಕರಣಕ್ಕೆ ಇರುವ ಅವಕಾಶ ಸೀಮಿತಗೊಂಡಿದೆ ಎಂದು ಹೇಳಿದರು.

ನಟ ದರ್ಶನ್ ನಾಯಿ ರೇಂಜಿಗಿಳಿದು ಕೊಲೆ ಮಾಡಬಾರದಿತ್ತು: ರಾಮ್ ಗೋಪಾಲ್ ವರ್ಮಾ

ಕೇಂದ್ರ ಸರ್ಕಾರ ಜಿ.ಎಸ್.ಟಿ. , ಆದಾಯ ತೆರಿಗೆ, ಕೇಂದ್ರ ಅಬಕಾರಿ ಸುಂಕ ಮೊದಲಾದ ಮೂಲಗಳಿಂದ ತೆರಿಗೆ ಸಂಗ್ರಹಿಸುತ್ತದೆ. ರಾಜ್ಯ ಸರ್ಕಾರಕ್ಕೆ ಕೇವಲ ನೋಂದಣಿ ಮತ್ತು ಮುದ್ರಾಂಕ ಶುಲ್ಕ, ವಾಹನ ತೆರಿಗೆ, ಪೆಟ್ರೋಲ್‌, ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಹಾಗೂ ಮದ್ಯದ ಮೇಲಿನ ಮಾರಾಟ ತೆರಿಗೆ ಹೊರತು ಪಡಿಸಿ ಯಾವುದೇ ಮೂಲಗಳಿಲ್ಲ. ಈ ಹಿನ್ನೆಲೆಯಲ್ಲಿ ಇತರ ರಾಜ್ಯಗಳ ಪೆಟ್ರೋಲ್‌, ಡೀಸೆಲ್‌ ಬೆಲೆಗೆ ಹೋಲಿಸಿದರೆ ರಾಜ್ಯದ ದರಗಳು ಕಡಿಮೆ ಇರುವುದು ಗಮನಿಸಿ, ರಾಜ್ಯ ಸರ್ಕಾರ ಅಲ್ಪ ಪ್ರಮಾಣದ ತೆರಿಗೆ ಹೆಚ್ಚಳ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದರು.

Latest Videos
Follow Us:
Download App:
  • android
  • ios