Asianet Suvarna News Asianet Suvarna News

ರಾಜ್ಯದಲ್ಲಿ ಮತ್ತೆ ದೂರವಾಣಿ ಕರೆ ಕದ್ದಾಲಿಕೆ ಗದ್ದಲ: ಕುಮಾರಸ್ವಾಮಿ ಆರೋಪ

ಸಂಸದ ಪ್ರಜ್ವಲ್‌ ರೇವಣ್ಣ ರಾಸಲೀಲೆ ವಿಡಿಯೋ ಪ್ರಕರಣ ಸಂಬಂಧ ತಮ್ಮ ಸುತ್ತಮುತ್ತಲಿನ 40 ಜನರ ಫೋನ್‌ಗಳನ್ನು ರಾಜ್ಯ ಸರ್ಕಾರ ಕದ್ದಾಲಿಕೆ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ 

Phone Tap again in Karnataka Says Former CM HD Kumaraswamy grg
Author
First Published May 21, 2024, 4:32 AM IST

ಬೆಂಗಳೂರು(ಮೇ.21):  ರಾಜ್ಯ ರಾಜಕಾರಣದಲ್ಲಿ ಮತ್ತೆ ದೂರವಾಣಿ ಕದ್ದಾಲಿಕೆ ಆರೋಪ ಕೇಳಿಬಂದಿದೆ. ಸಂಸದ ಪ್ರಜ್ವಲ್‌ ರೇವಣ್ಣ ರಾಸಲೀಲೆ ವಿಡಿಯೋ ಪ್ರಕರಣ ಸಂಬಂಧ ತಮ್ಮ ಸುತ್ತಮುತ್ತಲಿನ 40 ಜನರ ಫೋನ್‌ಗಳನ್ನು ರಾಜ್ಯ ಸರ್ಕಾರ ಕದ್ದಾಲಿಕೆ ಮಾಡುತ್ತಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಇದಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದು, ಕುಮಾರಸ್ವಾಮಿ ಹಾಗೂ ಅವರ ಕುಟುಂಬದ ಫೋನ್‌ ಟ್ಯಾಪಿಂಗ್‌ ಮಾಡುವ ಮುಠ್ಠಾಳತನದ ಕೆಲಸವನ್ನು ನಾವು ಮಾಡುವುದಿಲ್ಲ. ಅವರು ಪ್ರಚಾರಕ್ಕಾಗಿ ಆರೋಪ ಮಾಡುತ್ತಿದ್ದಾರೆ ಎಂದಿದ್ದಾರೆ. 

ನಾನ್ಯಾಕೆ ಆದಿಚುಂಚನಗಿರಿ ಸ್ವಾಮೀಜಿ ಪೋನ್‌ ಟ್ಯಾಪ್‌ ಮಾಡಲಿ: ಎಚ್‌.ಡಿ.ಕುಮಾರಸ್ವಾಮಿ

ಈ ನಡುವೆ, ಹಾಗೆಲ್ಲಾ ಕದ್ದಾಲಿಕೆ ಮಾಡಲು ಬರುವುದಿಲ್ಲ. ಕುಮಾರಸ್ವಾಮಿ ಅವರ ಬಳಿ ಮಾಹಿತಿ ಇದ್ದರೆ ಮಾಹಿತಿ ಕೊಡಲಿ, ತನಿಖೆ ಮಾಡುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್‌ ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios