ಕೇಂದ್ರ ಸರ್ಕಾರವು ಈ ತಿಂಗಳ ಅಂತ್ಯದ ವೇಳೆಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19 ನೇ ಕಂತನ್ನು ಬಿಡುಗಡೆ ಮಾಡಲಿದೆ. ರಾಷ್ಟ್ರೀಯ ಮಾಧ್ಯಮ ವರದಿಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಈ ತಿಂಗಳ 24 ರಂದು ಬಿಹಾರಕ್ಕೆ ಭೇಟಿ ನೀಡಲಿದ್ದು, ಕೃಷಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 19 ನೇ ಕಂತನ್ನು ವಿತರಿಸಲಾಗುತ್ತದೆ ಎನ್ನಲಾಗಿದೆ.

ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಕಂತು ಹಣ ಬಿಡುಗಡೆ: ಕೇಂದ್ರ ಸರ್ಕಾರವು ಈ ತಿಂಗಳ ಅಂತ್ಯದ ವೇಳೆಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19 ನೇ ಕಂತನ್ನು ಬಿಡುಗಡೆ ಮಾಡಲಿದೆ. ರಾಷ್ಟ್ರೀಯ ಮಾಧ್ಯಮ ವರದಿಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಈ ತಿಂಗಳ 24 ರಂದು ಬಿಹಾರಕ್ಕೆ ಭೇಟಿ ನೀಡಲಿದ್ದು, ಕೃಷಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 19 ನೇ ಕಂತನ್ನು ವಿತರಿಸಲಾಗುತ್ತದೆ ಎನ್ನಲಾಗಿದೆ.

ನೀವು ರೈತರಾಗಿದ್ದರೆ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿ ಪ್ರಯೋಜನಗಳನ್ನು ಪಡೆಯಲು ಇ-ಕೆವೈಸಿಯನ್ನು ತಕ್ಷಣವೇ ಪೂರ್ಣಗೊಳಿಸಿ . ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಕ್ಟೋಬರ್ 15, 2024 ರಂದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18 ನೇ ಕಂತನ್ನು ಬಿಡುಗಡೆ ಮಾಡಿದರು. ಇದೀಗ 19ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. 

ಇದನ್ನೂ ಓದಿ: ರೈತರೇ ಅಪ್ಪಿ ತಪ್ಪಿಯೂ ಈ 2 ತಪ್ಪುಗಳನ್ನ ಮಾಡಬೇಡಿ; ಇಲ್ಲವಾದ್ರೆ ಸರ್ಕಾರದ ಹಣ ಬರಲ್ಲ

ಏನಿದು ಪಿಎಂ ಕಿಸಾನ್ ಯೋಜನೆ ?

ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಅಥವಾ ಪಿಎಂ ಕಿಸಾನ್ ಕೇಂದ್ರ ಸರ್ಕಾರದ ಪ್ರಾಯೋಜಿತ ಯೋಜನೆಯಾಗಿದೆ. ಈ ಯೋಜನೆಯ ದೇಶದ ರೈತರಿಗೆ ಕೇಂದ್ರ ಸರ್ಕಾರದಿಂದ 100% ಹಣವನ್ನು ನೀಡಲಾಗುತ್ತೆ. ಇದರಲ್ಲಿ ರಾಜ್ಯಗಳ ಮೇಲೆ ಯಾವುದೇ ಆರ್ಥಿಕ ಹೊರೆ ಇರುವುದಿಲ್ಲ. ಈ ಯೋಜನೆಯಡಿಯಲ್ಲಿ 6,000 ರೂ.ಗಳನ್ನು ನೇರವಾಗಿ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ. ನಾಲ್ಕು ತಿಂಗಳಿಗೊಮ್ಮೆಯಂತೆ ಮೂರು ಸಮಾನ ಕಂತುಗಳಲ್ಲಿ ತಲಾ 2,000 ರೂ.ಗಳಂತೆ ಒಟ್ಟು ರೂ. ವಾರ್ಷಿಕ 6,000 ರೂ.ಗಳ ಪಾವತಿಯನ್ನು ಮಾಡಲಾಗುತ್ತದೆ. ಈ ಹಣವನ್ನು ಅರ್ಹ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ. ಆದರೆ, ಆಧಾರ್ ಸಂಖ್ಯೆಯನ್ನು ಆ ಬ್ಯಾಂಕ್ ಖಾತೆಗೆ ಲಿಂಕ್ ಮಾಡಿರಬೇಕು.

ಇ-ಕೆವೈಸಿ ಮಾಡುವುದು ಏಕೆ ಅಗತ್ಯ?

ಈ ಯೋಜನೆಯ ಪ್ರಯೋಜನಗಳು ದೇಶಾದ್ಯಂತ ಎಲ್ಲಾ ರೈತರನ್ನು ತಲುಪಲು ಮತ್ತು ಮಧ್ಯವರ್ತಿಗಳ ಒಳಗೊಳ್ಳುವಿಕೆ ತಪ್ಪಿಸಲು eKYC ಮಾಡುವುದು ಅವಶ್ಯಕವಾಗಿದೆ. ಇದು ವಂಚನೆಯ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ. 

ಪಿಎಂ ಕಿಸಾನ್ ಯೋಜನಾ ಫಲಾನುಭವಿಗಳು ಇಕೆವೈಸಿ ಪೂರ್ಣಗೊಳಿಸಲು ಮೂರು ವಿಧಾನಗಳಿವೆ:

OTP ಆಧಾರಿತ ಇ-ಕೆವೈಸಿ (PM-KISAN ಪೋರ್ಟಲ್ ಮತ್ತು ಮೊಬೈಲ್ ಅಪ್ಲಿಕೇಶನ್‌ನಲ್ಲಿ ಲಭ್ಯವಿದೆ)
ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿ ಸಾಮಾನ್ಯ ಸೇವಾ ಕೇಂದ್ರಗಳು (CSC) ಮತ್ತು ರಾಜ್ಯ ಸೇವಾ ಕೇಂದ್ರಗಳಲ್ಲಿ (SSC) ಲಭ್ಯವಿದೆ. ಇನ್ನು ಮುಖದ ದೃಢೀಕರಣ ಆಧಾರಿತ ಇ-ಕೆವೈಸಿ (PM ಕಿಸಾನ್ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಲಭ್ಯವಿದೆ), ಇದನ್ನು ದೇಶಾದ್ಯಂತ ಲಕ್ಷಾಂತರ ರೈತರು ಬಳಸುತ್ತಿದ್ದಾರೆ.

ಇದನ್ನೂ ಓದಿ: PM Kisan: ರೈತರೇ ಪಿಎಂ ಕಿಸಾನ್ ಹಣ ಬಂದಿಲ್ಲವೇ? ಏನು ಮಾಡಬೇಕು? ಇಲ್ಲಿದೆ ಪರಿಹಾರ!

ಪ್ರಧಾನ ಮಂತ್ರಿ ಕಿಸಾನ್ ಯೋಜನೆಗೆ ನೋಂದಾಯಿಸುವುದು ಹೇಗೆ?

ಈ ಯೋಜನೆಯಡಿಯಲ್ಲಿ, ಅರ್ಹ ಫಲಾನುಭವಿಗಳು ಆಧಾರ್ ಕಾರ್ಡ್, ಪೌರತ್ವ ಪ್ರಮಾಣಪತ್ರ, ಭೂ ಮಾಲೀಕತ್ವ ಪುರಾವೆ ದಾಖಲೆಗಳು ಮತ್ತು ಬ್ಯಾಂಕ್ ಖಾತೆ ವಿವರಗಳೊಂದಿಗೆ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಾಗುತ್ತದೆ. 

PM-KISAN ಪೋರ್ಟಲ್‌ಗೆ ಹೋಗಿ, 'ರಿಜಿಸ್ಟರ್ ಆನ್‌ಲೈನ್' ಮೇಲೆ ಕ್ಲಿಕ್ ಮಾಡಿ ಮತ್ತು ಎಲ್ಲಾ ವಿವರಗಳನ್ನು ಪೂರ್ಣಗೊಳಿಸಿ. ನಂತರ ನಿಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಕ್ಕೆ (CSC) ಭೇಟಿ ನೀಡುವ ಮೂಲಕವೂ ನೀವು ಈ ಕಾರ್ಯವನ್ನು ಪೂರ್ಣಗೊಳಿಸಬಹುದಾಗಿದೆ.