ಮಾ.12ರಂದು ದಶಪಥ ಹೆದ್ದಾರಿ ಉದ್ಘಾಟನೆ: ಮಂಡ್ಯ ಮಾರ್ಗದ ವಾಹನ ಸಂಚಾರ ಬದಲಾವಣೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರು - ಮೈಸೂರು ದಶಪಥ ರಸ್ತೆ ಉದ್ಘಾಟನೆ ಕಾರ್ಯಕ್ರಮಕ್ಕೆ ಮಾರ್ಚ್ 12 ರಂದು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದ ಸಂಜೆವರೆಗೆ ವಾಹನ ಸಂಚಾರ ಮಾರ್ಗಗಳನ್ನು ಬದಲಾವಣೆ ಮಾಡಲಾಗುತ್ತಿದೆ.

PM Modi Arrival for inauguration of Dashpath Highway on March 12 Change in traffic on Mandya road sat

ಬೆಂಗಳೂರು (ಮಾ.08): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಗೆಜ್ಜಲಗೆರೆ ಕಾಲೋನಿ ಬಳಿ ಬೆಂಗಳೂರು - ಮೈಸೂರು ರಾಷ್ಟ್ರೀಯ ದಶಪಥ ರಸ್ತೆ ಉದ್ಘಾಟನೆ ಕಾರ್ಯಕ್ರಮಕ್ಕೆ ಮಾರ್ಚ್ 12 ರಂದು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದ ಸಂಜೆವರೆಗೆ ವಾಹನ ಸಂಚಾರ ಮಾರ್ಗಗಳನ್ನು ಬದಲಾವಣೆ ಮಾಡಲಾಗುತ್ತಿದೆ. 

ಇನ್ನು ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯಲ್ಲಿಯೇ ಕಾರ್ಯಕ್ರಮ ಆಯೋಜನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಸಮಸ್ಯೆ ಆಗಲಿದೆ. ಈ ಹಿನ್ನಲೆಯಲ್ಲಿ ಮಾರ್ಚ್ 12ರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಮಾರ್ಗ ಬದಲಾವಣೆ ಮಾಡಿ ಮಂಡ್ಯದ ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ಆದೇಶ ಹೊರಡಿಸಿದ್ದಾರೆ.

ಪ್ರತಾಪ್‌ ಸಿಂಹ ಮಾಡಿದ ಕೆಲಸದ ಕ್ರೆಡಿಟ್‌ ಪಡೆಯಲು ಕಾಂಗ್ರೆಸ್‌ ನಾಟಕ: ನಳಿನ್‌ ಕುಮಾರ್‌ ಕಟೀಲ್‌

ಮಂಡ್ಯಕ್ಕೆ ಹೋಗುವ ಎಲ್ಲ ವಾಹನಗಳಿಗೆ ಮಾರ್ಗ ಬದಲಾವಣೆ ವಿವರ

  • ಮೈಸೂರು ನಗರದಿಂದ ಬೆಂಗಳೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳು ಮೈಸೂರು -ಬನ್ನೂರು-ಕಿರುಗಾವಲು- ಮಳವಳ್ಳಿ-ಹಲಗೂರು-ಕನಕಪುರ- ಬೆಂಗಳೂರು ಮಾರ್ಗವಾಗಿ ಸಂಚರಿಸುವುದು.
  • ಮೈಸೂರು ನಗರದಿಂದ ತುಮಕೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲ ರೀತಿಯ ವಾಹನಗಳು ಮೈಸೂರು-ಶ್ರೀರಂಗಪಟ್ಟಣ- ಪಾಂಡವಪುರ-ನಾಗಮಂಗಲ-ಬೆಳ್ಳೂರು ಕ್ರಾಸ್ - ತುಮಕೂರು ಮಾರ್ಗವಾಗಿ ಸಂಚರಿಸುವುದು.
  • ತುಮಕೂರಿನಿಂದ ಮೈಸೂರಿಗೆ ಮದ್ದೂರು ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳು ತುಮಕೂರು-ಬೆಳ್ಳೂರು ಕ್ರಾಸ್- ನಾಗಮಂಗಲ-ಪಾಂಡವಪುರ- ಶ್ರೀರಂಗಪಟ್ಟಣ ಮೈಸೂರು ಮಾರ್ಗವಾಗಿ ಸಂಚರಿಸುವುದು.
  • ಬೆಂಗಳೂರಿನಿಂದ ಮೈಸೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳು ಬೆಂಗಳೂರು-ಚನ್ನಪಟ್ಟಣ-ಹಲಗೂರು-ಮಳವಳ್ಳಿ-ಕಿರುಗಾವಲು-ಬನ್ನೂರು - ಮೈಸೂರು ಮಾರ್ಗವಾಗಿ ಸಂಚರಿಸುವುದು.
  • ಬೆಂಗಳೂರಿನಿಂದ ಮದ್ದೂರು ಮಾರ್ಗವಾಗಿ ಕೊಳ್ಳೇಗಾಲ- ಮಹದೇಶ್ವರ ಬೆಟ್ಟಕ್ಕೆ ತೆರಳುವ ಎಲ್ಲಾ ರೀತಿಯ ವಾಹನಗಳು ಬೆಂಗಳೂರು-ಚನ್ನಪಟ್ಟಣ- ಹಲಗೂರು-ಮಳವಳ್ಳಿ- ಕೊಳ್ಳೇಗಾಲ- ಮಹದೇಶ್ವರ ಬೆಟ್ಟ ಮಾರ್ಗವಾಗಿ ಸಂಚರಿಸುವುದು.

ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಸೂಚಿಸಿದೆ. ತಪ್ಪಿದಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ಕಾನೂನು ರೀತ್ಯಾ  ಕ್ರಮವಹಿಸಲಾಗುವುದು ಎಂದು ಅವರು‌ ಆದೇಶದಲ್ಲಿ ತಿಳಿಸಿದ್ದಾರೆ.

ಬೆಂಗಳೂರು - ಮೈಸೂರು ದಶಪಥ ಕ್ರೆಡಿಟ್‌ ವಾರ್‌: ಜೆಡಿಎಸ್‌ ಆಯ್ತು, ಈಗ ಕಾಂಗ್ರೆಸ್‌ ಸರದಿ!

ರಸ್ತೆ ನಿರ್ಮಾಣ ಕ್ರೆಡಿಟ್‌ಗೆ ಜಟಾಪಟಿ :  ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಯಾರ ಕೊಡುಗೆ ಎನ್ನುವುದು ಜನರಿಗೆ ಗೊತ್ತಿದೆ. ಪ್ರತಾಪ್‌ ಸಿಂಹ ಮಾಡಿದ ಕೆಲಸದ ಕ್ರೆಡಿಟ್‌ ಪಡೆಯಲು ಕಾಂಗ್ರೆಸ್‌ ನಾಟಕವಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಆರೋಪಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿಜೆಪಿ ನಾಯಕರಿಂದ ಅಭಿನಂದನೆ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರತಾಪ್‌ ಸಿಂಹ ಪ್ರಯತ್ನ ಹಾಗೂ ಮೋದಿ ಅವರ ಕೊಡುಗೆಯಿಂದ ಹೆದ್ದಾರಿ ನಿರ್ಮಾಣವಾಗಿದೆ. 70 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ನವರು ಎಷ್ಟುರಾಷ್ಟ್ರೀಯ ಹೆದ್ದಾರಿ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.

ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳ್ಳುತ್ತದೆ:  ಆಟಲ್‌ ಬಿಹಾರಿ ವಾಜಪೇಯಿ ಇದ್ದಾಗ ಈ ರಾಷ್ಟ್ರದಲ್ಲಿ ದಿನಕ್ಕೆ 11 ಕಿ.ಮೀ.ಕಾಮಗಾರಿ ಆಗಿತ್ತು. ಮನಮೋಹನ್‌ಸಿಂಗ್‌ ಅಧಿಕಾರದಲ್ಲಿದ್ದಾಗ ಕೇವಲ 4 ಕಿ.ಮೀ. ರಸ್ತೆ ಕಾಮಗಾರಿ ಆಗಿದೆ. ಇವರ ಕೊಡುಗೆ ಏನೆಂಬುದು ಜನರಿಗೆ ಚೆನ್ನಾಗಿ ಗೊತ್ತಿದೆ ಎಂದ ಅವರು, ರಾಷ್ಟ್ರೀಯ ಹೆದ್ದಾರಿ ಇನ್ನೂ ಪೂರ್ಣಗೊಂಡಿಲ್ಲವೆಂಬ ಪ್ರಶ್ನೆಗೆ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಂಡಿದೆ. ರಾಷ್ಟ್ರೀಯ ಹೆದ್ದಾರಿ ಅಂದಮೇಲೆ ಕೆಲವೊಂದು ಸಮಸ್ಯೆಗಳಿರುತ್ತವೆ. ಅದನ್ನ ಸರ್ಕಾರ ಬಗೆಹರಿಸುತ್ತದೆ ಎಂದು ಜಾರಿಕೆ ಉತ್ತರ ನೀಡಿದರು.

Latest Videos
Follow Us:
Download App:
  • android
  • ios