Asianet Suvarna News Asianet Suvarna News

Bengaluru Traffic: ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ: ಮೂರು ದಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ

ಫೆಬ್ರವರಿ 6 ರಂದು ಕರುನಾಡಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ
ಬೆಂಗಳೂರು ನಗರ & ತುಮಕೂರು ಜಿಲ್ಲೆಯ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ನಮೋ..
ಕಲ್ಯಾಣ ಕರ್ನಾಟಕ ಆಯ್ತು ಇದೀಗ ಹಳೇ ಮೈಸೂರು ಭಾಗದ ಮೇಲೆ ಮೋದಿ ಫೋಕಸ್

PM Narendra Modi arrival in Bangalore Traffic ban on these roads for three days sat
Author
First Published Feb 4, 2023, 6:44 PM IST

ಬೆಂಗಳೂರು (ಫೆ.04): ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ (ಫೆ.6ರಂದು)  ಬೆಳಗ್ಗೆ ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಬೆಂಗಳೂರು ನಗರದಲ್ಲಿ ಟ್ರಾಫಿಕ್‌ ಸಮಸ್ಯೆ ತಡೆಗಟ್ಟುವ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಎಲ್ಲ ಮಾದರಿಯ ಸರಕು ಸಾಗಣೆ ವಾಹನಗಳ ನಗರ ಪ್ರವೇಶವನ್ನು ನಿಷೇಧಿಸಲಾಗಿದೆ. 

ಬೆಂಗಳೂರು ನಗರಕ್ಕೆ ಆಗಮಿಸಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ (Prime minister Narendra Modi) ಅವರು ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ಇಂಡಿಯಾ ಎನರ್ಜಿ ವೀಕ್ (India energy Week)  ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಫೆಬ್ರವರಿ 5 ರಿಂದ 8 ರವರೆಗೆ ಮೂರು ದಿನ ಕಾರ್ಯಕ್ರಮ ನಡೆಯಲಿದ್ದು, ಇದನ್ನು ಪ್ರಧಾನಿ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ದೇಶ ವಿದೇಶದಿಂದ ಗಣ್ಯರು ಅಗಮಿಸುವ ನಿರೀಕ್ಷೆಗಳಿವೆ. ಇದರ ಜೊತೆ ಪ್ರಧಾನಿಗಳ ಭದ್ರತೆ ಹಿನ್ನೆಲೆ ಬೆಂಗಳೂರಿನ ಸಂಚಾರ (Bengaluru Traffic) ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ವಿಶೇಷವಾಗಿ ಬೆಂಗಳೂರು - ತುಮಕೂರು ರಸ್ತೆಯಲ್ಲಿ (Bengaluru- Tumakuru Road) ವಾಹನ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.

ವಿಶ್ವ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಮೋದಿಗೆ ನಂ. 1 ಸ್ಥಾನ: ಬೈಡೆನ್‌, ಮ್ಯಾಕ್ರನ್‌, ಸುನಕ್‌ರನ್ನೂ ಹಿಂದಿಕ್ಕಿದ ಪ್ರಧಾನಿ..!

ನರೇಂದ್ರ ಮೋದಿ ಕಾರ್ಯಕ್ರಮಗಳು: ಫೆ.6 ರಂದು ಬೆಳಿಗ್ಗೆ 8:20ಕ್ಕೆ ದೆಹಲಿಯಿಂದ ವಿಶೇಷ ವಿಮಾನದ ಬೆಂಗಳೂರಿಗೆ ಪ್ರಯಾಣ ಮಾಡಲಿದ್ದಾರೆ. ಬೆಳಗ್ಗೆ 10:55 ಕ್ಕೆ ಬೆಂಗಳೂರು ಏರ್ಪೋರ್ಟ್ ತಲುಪಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಏರ್ಪೋರ್ಟ್ ನಿಂದ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರು ಅಂತರ್ ರಾಷ್ಟ್ರೀಯ ಎಕ್ಸಿಬಿಷನ್ ಸೆಂಟರ್ (BIEC)ಗೆ ಆಗಮಿಸಲಿದ್ದಾರೆ. 11:25 ಕ್ಕೆ ರಸ್ತೆ ಮೂಲಕ ಬಿಐಇಸಿ ತಲುಪಲಿರುವ ಮೋದಿ ಅವರು ಇಲ್ಲಿನ ಇಂಡಿಯಾ ಎನರ್ಜಿ ವೀಕ್ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. 

ಮಧ್ಯಾಹ್ನ ತುಮಕೂರು ಜಿಲ್ಲಾ ಪ್ರವಾಸ ಕಾರ್ಯಕ್ರಮ: ಇನ್ನು ಬಿಐಇಸಿ ಕಾರ್ಯಕ್ರಮ ಮುಗಿಸಿದ ನಂತರ ಮಧ್ಯಾಹ್ನ 2.45ಕ್ಕೆ ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ (Helicopter) ಮೂಲಕ ತುಮಕೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸಂಜೆ 4.30ಕ್ಕೆ ಹೆಚ್.ಎ. ಎಲ್ (HAL) ಹೆಲಿಕ್ಯಾಪ್ಟರ್ ತಯಾರಿಕ ಘಟಕವನ್ನು ಉದ್ಘಾಟನೆ ಮಾಡಲಿದ್ದಾರೆ. ನಂತರ, ಜಲಜೀವನ್ ಮಿಷನ್ (Jaljeevan Mishan) ಯೋಜನೆಗಳನ್ನು ಇಲ್ಲಿ ಉದ್ಘಾಟಿಸಲಿದ್ದಾರೆ. ಸಂಜೆ 4.40ಕ್ಕೆ ತುಮಕೂರು ಹೆಲಿಪ್ಯಾಡ್ ನಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ (Kempegowda Airport) ನಿಲ್ದಾಣದತ್ತ ಪ್ರಯಾಣ ಮಾಡಲಿದ್ದಾರೆ. ಸಂಜೆ 7.20ಕ್ಕೆ ಬೆಂಗಳೂರು ಏರ್ಪೋರ್ಟ್ ನಿಂದ ದೆಹಲಿಗೆ ಪ್ರಯಾಣ ಮಾಡಲಿದ್ದಾರೆ. ರಾತ್ರಿ 8 ಗಂಟೆಗೆ ದೆಹಲಿ ತಲುಪಲಿದ್ದಾರೆ. 

ಮೂರು ದಿನಗಳು ಸಂಚಾರಕ್ಕೆ ಸಮಸ್ಯೆ:  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಗಮನ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕಾರ್ಯಕ್ರಮ ಆಯೋಜನೆಯ ಹಿನ್ನೆಲೆಯಲ್ಲಿ ಫೆಬ್ರವರಿ 5, 6, 7 ರಂದು ಬೆಂಗಳೂರು ನಗರದೊಳಗೆ ಎಲ್ಲಾ ರೀತಿಯ ಲಘು, ಮಧ್ಯಮ ಹಾಗೂ ಭಾರಿ ಸರಕು ಸಾಗಣೆ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆ ತನಕ ಕೆಲವು ಪ್ರಮುಖ ಮಾರ್ಗಗಳಲ್ಲಿ ಸಾರ್ವಜನಿಕ ವಾಹನಗಳ ಸಂಚಾರವನ್ನೂ ನಿರ್ಬಂಧಿಸಲಾಗಿದೆ.

ತುಮಕೂರು: ಫೆ.6 ಕ್ಕೆ ಪ್ರಧಾ​ನಿ​ಯಿಂದ ಹೆಲಿ​ಕಾ​ಪ್ಟರ್‌ ತಯಾರಿಕಾ ಉದ್ಘಾ​ಟ​ನೆ

ಸರಕು ಸಾಗಣೆ ವಾಹನಗಳ ಸಂಚಾರ ನಿರ್ಬಂಧ ರಸ್ತೆಗಳ ಮಾಹಿತಿ:

  • ತುಮಕೂರು ರಸ್ತೆಯಿಂದ ಬೆಂಗಳೂರು ನಗರದೊಳಗೆ ಸರಕು ಸಾಗಣೆ ವಾಹನಗಳ ನಿರ್ಬಂಧ
  • ಮೈಸೂರು ರಸ್ತೆಯಿಂದ ನಾಯಂಡಹಳ್ಳಿ ಮತ್ತು ಸೋಮನಹಳ್ಳಿಯವರೆಗೆ ಸಂಚಾರ ಮಾಡುವಂತಿಲ್ಲ.
  • ಬಳ್ಳಾರಿ ರಸ್ತೆಯಿಂದ ಬೆಂಗಳೂರು ನಗರದೊಳಗೆ ಪ್ರವೇಶ ಇಲ್ಲ.
  • ಹೊಸಕೋಟೆ ರಸ್ತೆಯಿಂದ ಹೆಬ್ಬಾಳವರೆಗೆ ಸಂಚಾರ ಮುಕ್ತ ಆಗಿರುವುದಿಲ್ಲ.

ಮಾರ್ಗ ಬದಲಾವಣೆಯ ವಿವರ ಇಲ್ಲಿದೆ ನೋಡಿ..

  • ತುಮಕೂರು ಕಡೆಯಿಂದ ಬಳ್ಳಾರಿ ರಸ್ತೆ, ಹೈದರಾಬಾದ್ ಕಡೆಗೆ ಸಂಚರಿಸುವ ವಾಹನಗಳು ಡಾಬಸ್ ಪೇಟೆಯಲ್ಲಿ ಎಡ ತಿರುವು ಪಡೆದು ದೊಡ್ಡಬಳ್ಳಾಪುರ ಕಡೆಗೆ ಹೋಗಬೇಕು.
  • ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಸಂಚರಿಸುವ ವಾಹನಗಳು ಸೊಂಡೆಕೊಪ್ಪ ಕ್ರಾಸ್ ನಲ್ಲಿ ಬಲ ತಿರುವು ಪಡೆದು ತಾವರೆಕೆರೆ ಮುಖಾಂತರ ಮಾಗಡಿ ರಸ್ತೆಗೆ ಸಂಪರ್ಕ ಪಡೆದು ಆ ಮೂಲಕ ನೈಸ್ ರಸ್ತೆ ತಲುಪಿ ಮೈಸೂರು ರಸ್ತೆ, ಎಲೆಕ್ಟ್ರಾನಿಕ್ ಸಿಟಿ, ಹೊಸೂರು ಕಡೆಗೆ ಹೋಗಬೇಕು.
  • ಬಳ್ಳಾರಿ ರಸ್ತೆ ಕಡೆಯಿಂದ ತುಮಕೂರು ರಸ್ತೆ ಕಡೆಗೆ ಸಂಚರಿಸುವ ವಾಹನಗಳು ದೇವನಹಳ್ಳಿ ಬಲ ತಿರುವು ಪಡೆದು ದೊಡ್ಡಬಳ್ಳಾಪುರ ರಸ್ತೆಯ ಮೂಲಕ ತುಮಕೂರು ಕಡೆಗೆ ಹೋಗಬಹುದು.
  • ಹೊಸಕೋಟೆಯಿಂದ ತುಮಕೂರು ಕಡೆಗೆ ಸಂಚರಿಸುವ ವಾಹನಗಳು ಬೂದಿಗೆರೆ ಕ್ರಾಸ್ ಮುಖಾಂತರ ದೇವನಹಳ್ಳಿ, ದೊಡ್ಡಬಳ್ಳಾಪುರ ಮೂಲಕ ಡಾಬಸ್ ಪೇಟೆ ಮೂಲಕ ತುಮಕೂರು ಮಾರ್ಗದತ್ತ ಸಂಚಾರ ಮಾಡಬೇಕು.
Follow Us:
Download App:
  • android
  • ios