ನಾವು ಈಗ ವಿದೇಶಗಳಿಗೂ ಪ್ರಯಾಣ ಕೈಗೊಳ್ಳುತ್ತಿದ್ದೇವೆ. ಆದರೆ ನಮ್ಮ ನೆಲದ ಬಗ್ಗೆ ತಿಳಿದುಕೊಳ್ಳುವುದು ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ಬೆಂಗಳೂರಿನ ಪರಂಪರೆಯನ್ನು ಮರುಶೋಧಿಸುವಲ್ಲಿ ಉತ್ಸಾಹ ಹೊಂದಿರುವ ಧನಪಾಲ್ ಅವರ ಬಗ್ಗೆ ಹೆಮ್ಮೆ ಎನಿಸುತ್ತದೆ. ಸುಮಾರು 17 ವರ್ಷಗಳಿಂದ ಅವರು ಈ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ
ನವದೆಹಲಿ(ಆ.28): ಬೆಂಗಳೂರಿನ ಐತಿಹಾಸಿಕ ಹಿನ್ನೆಲೆಯನ್ನು ಅಧ್ಯಯನ ಮಾಡುವುದರ ಜೊತೆಗೆ ಅದನ್ನು ಇತರರಿಗೂ ಪರಿಚಯಿಸಲು ಶ್ರಮಿಸುತ್ತಿರುವ ಬೆಂಗಳೂರಿನ ಶಿಲಾಶಾಸನಗಳ ಪರಿಣತ ಧನಪಾಲ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾಸಿಕ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಹೊಗಳಿದ್ದಾರೆ.
ಭಾನುವಾರ ಮಾತನಾಡಿದ ಪ್ರಧಾನಿ ಮೋದಿ, ‘ನಾವು ಈಗ ವಿದೇಶಗಳಿಗೂ ಪ್ರಯಾಣ ಕೈಗೊಳ್ಳುತ್ತಿದ್ದೇವೆ. ಆದರೆ ನಮ್ಮ ನೆಲದ ಬಗ್ಗೆ ತಿಳಿದುಕೊಳ್ಳುವುದು ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ಬೆಂಗಳೂರಿನ ಪರಂಪರೆಯನ್ನು ಮರುಶೋಧಿಸುವಲ್ಲಿ ಉತ್ಸಾಹ ಹೊಂದಿರುವ ಧನಪಾಲ್ ಅವರ ಬಗ್ಗೆ ಹೆಮ್ಮೆ ಎನಿಸುತ್ತದೆ. ಸುಮಾರು 17 ವರ್ಷಗಳಿಂದ ಅವರು ಈ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
.Mann ki baat: ಚಂದ್ರಯಾನ ಮಿಷನ್ ನವ ಭಾರತದ ಸ್ಪೂರ್ತಿ, ನಾರಿ ಶಕ್ತಿಯ ಜೀವಂತ ಉದಾಹರಣೆ: ಪ್ರಧಾನಿ ಮೋದಿ
‘ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಧನಪಾಲ್, ಬೆಂಗಳೂರು ದರ್ಶಿನಿ ಎಂಬ ಪ್ರವಾಸೋದ್ಯಮ ಸೇವೆಯಲ್ಲಿ ಕೆಲಸ ಮಾಡುತ್ತಿದ್ದಾಗ ಪ್ರವಾಸಿಗರೊಬ್ಬರು ಸ್ಯಾಂಕಿ ಟ್ಯಾಂಕ್ ಬಗ್ಗೆ ಪ್ರಶ್ನೆ ಕೇಳಿದ್ದರು. ಅದಕ್ಕೆ ಉತ್ತರಿಸಲಾಗದ್ದಕ್ಕೆ ಬೇಸರಗೊಂಡು ಅಧ್ಯಯನ ಕೈಗೊಂಡರು. ಪ್ರತಿಯೊಂದು ಹೊಸ ವಿಷಯ ತಿಳಿಯುತ್ತಿದ್ದಂತೆ ಅವರ ಉತ್ಸಾಹ ಹೆಚ್ಚಾಯಿತು. ಬಳಿಕ ಶಿಲಾಶಾಸನಗಳ ಅಧ್ಯಯನದಲ್ಲಿ ಡಿಪ್ಲೊಮಾ ಪಡೆದುಕೊಂಡರು. ಈವರೆಗೆ ಅವರು ಕೈಗೊಂಡಿರುವ ಕಾರ್ಯದ ಬಗ್ಗೆ ಹೆಮ್ಮೆ ಎನಿಸುತ್ತದೆ. ಅವರಿಂದ ಸ್ಫೂರ್ತಿ ಪಡೆದು ಬೇರೆಯವರು ಸಹ ಅವರ ನಗರ ಮತ್ತು ಪಟ್ಟಣಗಳಲ್ಲಿ ಇದೇ ರೀತಿ ಮಾಡುವಂತೆ ನಾನು ಒತ್ತಾಯಿಸುತ್ತೇನೆ’ ಎಂದು ಮೋದಿ ಅವರು ಹೇಳಿದ್ದಾರೆ.
