ಈ ತಿಂಗಳ 12 ಮತ್ತು 19ರಂದು ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಕರ್ನಾಟಕಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ. 

ಬೆಂಗಳೂರು(ಜ.10): ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಭೇಟಿ ಹೆಚ್ಚಳಗೊಂಡಿದ್ದು, ಈ ತಿಂಗಳ 12 ಮತ್ತು 19ರಂದು ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವಿಷಯ ತಿಳಿಸಿದ್ದಾರೆ. ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಯುವ ಜನೋತ್ಸವದಲ್ಲಿ ಭಾಗವಹಿಸುವ ಸಂಬಂಧ ಪ್ರಧಾನಿ ಮೋದಿ ಅವರು ಜ.12ರ ಮಧ್ಯಾಹ್ನದಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಏಳು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಪಾಲ್ಗೊಳ್ಳುತ್ತಿದ್ದಾರೆ ಎಂದು ಹೇಳಿದರು.

ವಿಶ್ವದ ಅತೀ ಉದ್ದದ ನದಿ ಹಡಗು ಯಾನಕ್ಕೆ ಜ.13ಕ್ಕೆ ಪ್ರಧಾನಿ ಚಾಲನೆ

ಬಳಿಕ 19ರಂದು ಪ್ರಧಾನಿ ಮೋದಿ ಅವರು ಕಲಬುರಗಿಗೆ ಆಗಮಿಸಲಿದ್ದು, ಕೇಂದ್ರ ಹಾಗೂ ರಾಜ್ಯ ಅನುದಾನಿತ ನಾರಾಯಣಪುರ ಎಡದಂಡೆ ಕಾಲುವೆ (ಎನ್‌ಎಲ್‌ಬಿಸಿ) ಆಧುನೀಕರಣದ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕಲಬುರಗಿಯಲ್ಲಿ ಬಂಜಾರ ಸಮಾವೇಶ ನಡೆಸುವ ಚಿಂತನೆಯಿದೆ ಎಂದರು.