Asianet Suvarna News Asianet Suvarna News

9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ, 2 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್

2021 ರಲ್ಲಿ ಅಪ್ರಾಪ್ತ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪಿಗೆ 20 ವರ್ಷ ಕಠಿಣ, 2 ಲಕ್ಷ ರೂ. ದಂಡ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ ಎಫ್‌ಟಿಎಸ್‌ಸಿ-2 (ಪೋಕ್ಸ್‌) ನ್ಯಾಯಾಧೀಶರು ಆದೇಶಿಸಿದ್ದಾರೆ.

Pocso case the court sentenced the accused severely at shivamogga rav
Author
First Published Dec 1, 2023, 10:54 AM IST

ಶಿವಮೊಗ್ಗ (ನ.1): 2021 ರಲ್ಲಿ ಅಪ್ರಾಪ್ತ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪಿಗೆ 20 ವರ್ಷ ಕಠಿಣ, 2 ಲಕ್ಷ ರೂ. ದಂಡ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ ಎಫ್‌ಟಿಎಸ್‌ಸಿ-2 (ಪೋಕ್ಸ್‌) ನ್ಯಾಯಾಧೀಶರು ಆದೇಶಿಸಿದ್ದಾರೆ.

ಪ್ರಕರಣದ ಹಿನ್ನೆಲೆ:

ದಾವಣಗೆರೆ ಜಿಲ್ಲೆ ನ್ಯಾಮತಿಯ 34 ವರ್ಷದ ವ್ಯಕ್ತಿ ಶಿಕ್ಷೆಗೆ ಗುರಿಯಾದ ಆರೋಪಿ. ಆರೋಪಿ 2021 ರಲ್ಲಿ  ಒಂಬತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಆ ಬಗ್ಗೆ ಪೋಕ್ಸೊ ಕಾಯ್ದೆಯಡಿ  ಶಿವಮೊಗ್ಗದ ವಿನೋಬನಗರ ಠಾಣೆಯಲ್ಲಿ ಪೋಕೋದಡಿ ಪ್ರಕರಣ ದಾಖಲಾಗಿತ್ತು. ಅಂದಿನ ತನಿಖಾಧಿಕಾರಿಯಾಗಿದ್ದ ವಿನೋಬನಗರ ಸಿಪಿಐ ಎನ್ ಎನ್ ರವಿ ಅವರು ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ ಎಫ್‌ಟಿಎಸ್‌ಸಿ-2 (ಪೋಕ್ಸ್‌) ನ್ಯಾಯಾಧೀಶರು  ವಿಚಾರಣೆ ವೇಳೆ ಆರೋಪ ಸಾಬೀತಾಗಿದ್ದರಿಂದ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ.

ಮದುವೆಗೆ ಒಪ್ಪದ್ದಕ್ಕೆ ಅತ್ತೆ ಮಗಳನ್ನೇ ಅಪಹರಿಸಿದ್ದ ಕಿರಾತಕ; ಘಟನೆ ನಡೆದ ಏಳು ಗಂಟೆಯಲ್ಲೇ ಆರೋಪಿ ಬಂಧನ

ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿ ಆರು ತಿಂಗಳು ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದ್ದಾರೆ. ಅಲ್ಲದೆ, ಸಂತ್ರಸ್ತೆಗೆ 3 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು

Follow Us:
Download App:
  • android
  • ios