ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಸಿಗರೇಟ್ ಸೇದಿದ್ದಕ್ಕೆ ಯುವಕರ ಮೇಲೆ ಪೊಲೀಸರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ದೌರ್ಜನ್ಯದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ದಂಡ ವಸೂಲಿ ನೆಪದಲ್ಲಿ ಹಣಕ್ಕೆ ಬೇಡಿಕೆ ಇಟ್ಟ ಆರೋಪವೂ ಕೇಳಿಬಂದಿದೆ.

ಬೆಂಗಳೂರು(ಜೂ.17): ನಗರದ ಮೆಜೆಸ್ಟಿಕ್‌ ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್ ಸೇದಿದ ಆರೋಪದ ಮೇಲೆ ಪೊಲೀಸರು ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ.

ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದುವುದನ್ನು ನಿಷೇಧಿಸಿರುವ ಹಿನ್ನೆಲೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಪೊಲೀಸರು. ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವವರಿಗೆ ಭಾರೀ ಮೊತ್ತದ ದಂಡ ವಿಧಿಸಲಾಗುತ್ತಿದೆ. ಆದರೆ ಪೊಲೀಸರು ದಂಡ ವಿಧಿಸುವ ಬದಲಿಗೆ ಯುವಕರನ್ನು ಎಳೆದಾಡಿ, ಕಪಾಳಕ್ಕೆ ಹೊಡೆದು ದೌರ್ಜನ್ಯ ಮಾಡಿರುವ ಆರೋಪ ಕೇಳಿಬಂದಿದೆ.

ಘಟನೆಯ ವಿವರ:

ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡಿದ್ದಾರೆಂಬ ಕಾರಣಕ್ಕೆ ಹಲ್ಲೆಗೊಳಗಾದ ಯುವಕರನ್ನು ಪೊಲೀಸರು ಅಂಡರ್‌ಪಾಸ್‌ಗೆ ಕರೆದೊಯ್ದು ಮತ್ತಷ್ಟು ಥಳಿಸಿದ್ದಾರೆ ಎನ್ನಲಾಗಿದೆ. ಈ ಘಟನೆಯ ಸಂಪೂರ್ಣ ದೃಶ್ಯ ಒಳಗೊಂಡ ಸಿಸಿಟಿವಿ ವಿಡಿಯೋ ದೃಶ್ಯಗಳು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಆಗಿ ಲಭ್ಯವಾಗಿವೆ. ಇದರ ಜೊತೆಗೆ, ದಂಡ ಸಂಗ್ರಹದ ನೆಪದಲ್ಲಿ ಪೊಲೀಸರು ಯುವಕರಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.

ಸಾರ್ವಜನಿಕ ಆಕ್ರೋಶ:

ಸಾರ್ವಜನಿಕ ಸ್ಥಳದಲ್ಲಿ ಪೊಲೀಸರಿಂದಲೇ ಈ ರೀತಿಯ ದೌರ್ಜನ್ಯ ನಡೆದಿರುವುದು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯ ಸಂಪೂರ್ಣ ತನಿಖೆಗೆ ಒತ್ತಾಯ ಕೇಳಿಬಂದಿದ್ದು, ಆರೋಪಿತ ಪೊಲೀಸರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಡ ಹೆಚ್ಚಾಗಿದೆ.

ವಿವರವಾದ ರಿಪೋರ್ಟ್ ಮತ್ತು ಎಕ್ಸ್‌ಕ್ಲೂಸಿವ್ ಸಿಸಿಟಿವಿ ದೃಶ್ಯಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ವೀಕ್ಷಿಸಿ! ಹೆಚ್ಚಿನ ಮಾಹಿತಿಗಾಗಿ ನಮ್ಮೊಂದಿಗೆ ಸಂಪರ್ಕದಲ್ಲಿರಿ!