Asianet Suvarna News Asianet Suvarna News

ಪೊಲೀಸ್ ಕಾನ್ಸ್ ಟೇಬಲ್ ಲಿಖಿತ ಪರೀಕ್ಷೆಗೆ ಹೊಸ ದಿನಾಂಕ ನಿಗದಿ

ಪೊಲೀಸ್  ಕಾನ್ಸ್ ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಇದ್ರಿಂದ ರಾಜ್ಯ ಸರ್ಕಾರ ಪರೀಕ್ಷೆಗೆ ಹೊಸ ದಿನಾಂಕ ನಿಗದಿ ಮಾಡಿದೆ.

Police constable question paper leaked exam postponed to Dec 23
Author
Bengaluru, First Published Nov 29, 2018, 3:44 PM IST
  • Facebook
  • Twitter
  • Whatsapp

ಬೆಂಗಳೂರು, (ನ.29): ಕರ್ನಾಟಕ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಮುಂದೂಡಲಾಗಿದ್ದ ಪರೀಕ್ಷೆ ಇದೇ ಡಿಸೆಂಬರ್ 23ಕ್ಕೆ ನಡೆಯಲಿದೆ.

ರಾಜ್ಯದ 24 ಜಿಲ್ಲೆಗಳಲ್ಲಿ ಡಿಸೆಂಬರ್ 23ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ: ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಮುಂದೂಡಿಕೆ

ಖಾಲಿ ಇದ್ದ 2,113 ಪೇದೆಗಳ ಹುದ್ದೆಗೆ ನವೆಂಬರ್ 25ರರಂದು ರಾಜ್ಯವ್ಯಾಪಿ ಲಿಖಿತ ಪರೀಕ್ಷೆ ನಿಗದಿ ಮಾಡಲಾಗಿತ್ತು. ಆದ್ರೆ ಅದಕ್ಕೂ ಮುನ್ನ ನವೆಂಬರ್ 24ರಂದು ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಬೆಳಕಿಗೆ ಬಂದಿತ್ತು. ಇದ್ರಿಂದ ಪರೀಕ್ಷೆಯನ್ನ ಮುಂದೂಡಲಾಗಿತ್ತು.

ಶಿವಕುಮಾರ್ ಹಾಗೂ ಬಸವರಾಜ್ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ಸುಳಿವು ಸಿಕ್ಕಿದ್ದು, ಈ ಪ್ರಕರಣದಲ್ಲಿ 116 ಅಭ್ಯರ್ಥಿಗಳು ಸೇರಿ 120 ಮಂದಿಯನ್ನು ಬಂಧಿಸಲಾಗಿದೆ. ಆದ್ರೆ ಇದರ ಕಿಂಗ್ ಪಿನ್ ಬಸವರಾಜ್ ತಲೆಮರೆಸಿಕೊಂಡಿದ್ದಾನೆ.

Follow Us:
Download App:
  • android
  • ios