ಸಹಕಾರ ಕ್ಷೇತ್ರದಲ್ಲಿ ನಾನು ಈ ಮಟ್ಟಕ್ಕೆ ಬೆಳೆಯಲು ನನ್ನ ಗುರು ಡಿಕೆಶಿ ಕಾರಣ: ಎಸ್‌ಟಿ ಸೋಮಶೇಖರ್

ನಾನು ಸಹಕಾರ ಕ್ಷೇತ್ರದಲ್ಲಿ ಬೆಳೆಯಬೇಕಾದರೆ ನನ್ನ ಗುರುಗಳಾದ ಡಿ.ಕೆ.ಶಿವಕುಮಾರ್‌ ಕಾರಣ ಎಂದು ಬಿಜೆಪಿ ಶಾಸಕ ಎಸ್‌.ಟಿ.ಸೋಮಶೇಖರ್‌ ಹಾಡಿ ಹೊಗಳಿದ್ದಾರೆ. ಇತ್ತೀಚೆಗಷ್ಟೇ ಸೋಮಶೇಖರ್‌ ಅವರು ಕ್ಷೇತ್ರದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಕೊಂಡಾಡಿದ್ದರು.

Political guru DK Shivakumar is the reason I grew up in politics says ST Somashekhar rav

ಬೆಂಗಳೂರು (ಆ.15):  ನಾನು ಸಹಕಾರ ಕ್ಷೇತ್ರದಲ್ಲಿ ಬೆಳೆಯಬೇಕಾದರೆ ನನ್ನ ಗುರುಗಳಾದ ಡಿ.ಕೆ.ಶಿವಕುಮಾರ್‌ ಕಾರಣ ಎಂದು ಬಿಜೆಪಿ ಶಾಸಕ ಎಸ್‌.ಟಿ.ಸೋಮಶೇಖರ್‌ ಹಾಡಿ ಹೊಗಳಿದ್ದಾರೆ. ಇತ್ತೀಚೆಗಷ್ಟೇ ಸೋಮಶೇಖರ್‌ ಅವರು ಕ್ಷೇತ್ರದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಕೊಂಡಾಡಿದ್ದರು.

ಸೋಮವಾರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌(DK Shivakumar) ಅವರೊಂದಿಗೆ ನಾಡಪ್ರಭು ಕೆಂಪೇಗೌಡ ಲೇಔಟ್‌(Kempegowda layout) ಕಾಮಗಾರಿ ಪರಿಶೀಲನೆ ನಡೆಸಿದರು. ಆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರಹಳ್ಳಿ ಕ್ಷೇತ್ರದ ಶಾಸಕ ಆಗಬೇಕು ಅಂತ ನನ್ನನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದವರು ಡಿ.ಕೆ.ಶಿವಕುಮಾರ್‌. ಅವರ ಶ್ರಮದಿಂದ ನಾನು ಇವತ್ತು ಇಂತಹ ವೇದಿಕೆ ಮೇಲೆ ನಿಂತು ಮಾತನಾಡಲು ಕಾರಣವಾಗಿದೆ ಎಂದರು.

ನಾನು ಸಿದ್ದು ಶಿಷ್ಯ, ಅವರು ನಮ್ಮ ನೆಚ್ಚಿನ ನಾಯಕರು: ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್

ನಾನು ಈ ಮಟ್ಟಕ್ಕೆ ಬೆಳೆಯಲು ನೂರಕ್ಕೆ 100 ಕಾರಣ ಡಿ.ಕೆ.ಶಿವಕುಮಾರ್‌ ಎಂದ ಸೋಮಶೇಖರ್‌, ನಿಮ್ಮಲ್ಲಿ ಒಳಗೊಂದು ಹೊರಗೊಂದು ಇಲ್ಲ. ನಿಮ್ಮಲ್ಲಿ ಬೆಂಗಳೂರಿನ ಜನ ವಿಶ್ವಾಸ ಇಟ್ಟಿದ್ದಾರೆ. ಅದರಂತೆ ನೀವು ಕೆಲಸ ಮಾಡುತ್ತಾ ಇದ್ದೀರಿ ಎಂದು ಶಿವಕುಮಾರ್‌ ಅವರನ್ನು ಕೊಂಡಾಡಿದರು. ಆದಷ್ಟುಶೀಘ್ರವಾಗಿ ನಾಡಪ್ರಭು ಕೆಂಪೇಗೌಡ ಲೇಔಟ್‌ಗೆ ಮೂಲಸೌಕರ್ಯಗಳನ್ನು ಒದಗಿಸಿಕೊಟ್ಟು ನಿವೇಶನದಾರರು ಮನೆಗಳನ್ನು ಕಟ್ಟಿಕೊಳ್ಳಲು ಅನುಕೂಲ ಒದಗಿಸಿಕೊಡಬೇಕೆಂದು ಮನವಿ ಮಾಡಿದರು.

ಕಾಂಗ್ರೆಸ್‌- ಜೆಡಿಎಸ್‌ ಒಳ ಒಪ್ಪಂದದಿಂದ ಬಿಜೆಪಿ ಮಣಿಸಲು ಅಸಾಧ್ಯ: ಎಸ್‌.ಟಿ.ಸೋಮಶೇಖರ್‌

Latest Videos
Follow Us:
Download App:
  • android
  • ios