Asianet Suvarna News Asianet Suvarna News

ಉಪಸಭಾಪತಿ ಧರ್ಮೇಗೌಡ ನಿಧನಕ್ಕೆ ಗಣ್ಯರ ಸಂತಾಪ!

ವಿಧಾನಪರಿಷತ್‌ ಉಪಸಭಾಪತಿ ಎಸ್‌ಎಲ್‌ ಧರ್ಮೇಗೌಡ ಆಥ್ಮಹತ್ಯೆಗೆ ಶರಣು| ಸಜ್ಜನ ರಾಜಕಾರಣಿಯ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ| ಟ್ವೀಟ್ ಮಾಡಿ ಸಂತಾಪ ಸೂಚಿಸಿದ ಸಿಎಂ ಬಿಎಸ್‌ವೈ

Political Leaders Pay Tribute To Karnataka Legislative Council Deputy Chairman SL Dharme Gowda pod
Author
Bangalore, First Published Dec 29, 2020, 7:55 AM IST

ಬೆಂಗಳೂರು(ಡಿ.29): ವಿಧಾನಪರಿಷತ್‌ ಉಪಸಭಾಪತಿ ಎಸ್‌ಎಲ್‌ ಧರ್ಮೇಗೌಡ(65) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಧಾನ ಪರಿಷತ್ ಗಲಾಟೆಯಿಂದ ಬಹಳಷ್ಟು ನೊಂದಿದ್ದ ಅವರು ಡೆತ್‌ನೋಟ್‌ನಲ್ಲೂ ಈ ವಿಚಾರ ಉಲ್ಲೇಖಿಸಿದ್ದಾರೆ. ಸಜ್ಜನ ರಾಜಕಾರಣಿಯ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಬಿ. ಎಸ್. ಯಡಿಯೂರಪ್ಪ 'ವಿಧಾನಪರಿಷತ್ ಉಪಸಭಾಪತಿ ಶ್ರೀ ಎಸ್.ಎಲ್.ಧರ್ಮೇಗೌಡರ ನಿಧನದ ಸುದ್ದಿ ದಿಗ್ಭ್ರಮೆ ಮೂಡಿಸಿದೆ. ಇದನ್ನು ನಂಬಲಿಕ್ಕೇ ಸಾಧ್ಯವಾಗುತ್ತಿಲ್ಲ. ಶಾಸಕರಾಗಿ, ಉಪಸಭಾಪತಿಗಳಾಗಿ ಜನಮನ್ನಣೆ ಗಳಿಸಿದ್ದ ಅವರ ದುರಂತ ಅಂತ್ಯ ಅತ್ಯಂತ ದುಃಖವನ್ನುಂಟು ಮಾಡಿದೆ. ಹಿರಿಯ ಅಧಿಕಾರಿಗಳಿಂದ ಘಟನೆಯ ವಿವರ ಪಡೆದುಕೊಳ್ಳುತ್ತಿದ್ದೇನೆ. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತಾ, ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ' ಎಂದು ಸಂತಾಪ ಸೂಚಿಸಿದ್ದಾರೆ.

ಮಾಜಿ ಪಿಎಂ, ಜೆಡಿಎಸ್‌ ನಾಯಕ ಎಚ್. ಡಿ. ದೇವೇಗೌಡ ಕೂಡಾ ಸಂತಾಪ ಸೂಚಿಸುವ ಟ್ವೀಟ್ ಮಾಡುತ್ತಾ 'ವಿಧಾನಪರಿಷತ್ ಉಪಸಭಾಪತಿ ಹಾಗೂ 
ಜನತಾದಳ ಮುಖಂಡರಾದ ಎಸ್.ಎಲ್. ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಕೇಳಿ ಆಘಾತವಾಗಿದೆ. ಸಜ್ಜನ, ಸನ್ನಡತೆಯ ಉಪಸಭಾಪತಿಗಳನ್ನು ಕಳೆದುಕೊಂಡದ್ದು ನಮ್ಮ ರಾಜ್ಯದ ನಷ್ಟ. ಅವರ ಕುಟುಂಬ ಹಾಗೂ ಬಂಧುಮಿತ್ರರಿಗೆ ಈ ನೋವು ಭರಿಸುವ ಶಕ್ತಿ ಭಗವಂತ ನೀಡಲಿ.' ಎಂದು ಬರೆದಿದ್ದಾರೆ.

ಇನ್ನು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿಯೂ ಟ್ವೀಟ್ ಮಾಡಿ 'ವಿಧಾನಪರಿಷತ್ ಉಪಸಭಾಪತಿ, ಜನತಾದಳ ಪಕ್ಷದ ಹಿರಿಯ ಮುಖಂಡರು ಹಾಗೂ ನನ್ನ ಸಹೋದರರಂತಿದ್ದ ಎಸ್.ಎಲ್.ಧರ್ಮೇಗೌಡರ ಆತ್ಮಹತ್ಯೆ ಸುದ್ದಿ ತೀವ್ರ ಆಘಾತವನ್ನುಂಟುಮಾಡಿದೆ. ನಿಷ್ಕಲ್ಮಶ ವ್ಯಕ್ತಿತ್ವದ ಸಜ್ಜನ ರಾಜಕಾರಣಿಯೊಬ್ಬರನ್ನು ನಾವು ಕಳೆದುಕೊಂಡಿದ್ದೇವೆ. ಧರ್ಮೇಗೌಡರ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ಭಗವಂತ ಕರುಣಿಸಲಿ' ಎಂದಿದ್ದಾರೆ.

ಪರಿಷತ್ತಿನ ಉಪಸಭಾಪತಿ ಶ್ರೀ ಧರ್ಮೇಗೌಡರೇ, ಏಕೆ ಹೀಗಾಯಿತು? ಇಂದು ಬೆಳಗ್ಗೆ ನಾನು ನನ್ನ ಬೆಳಗಿನ ವ್ಯಾಯಾಮ ಮುಗಿಸಿ ಯಾರಿಗೊ ಮೆಸೇಜ್...

Posted by Suresh Kumar S on Monday, 28 December 2020

ಇನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡಾ ಧರ್ಮೇಗೌಡರ ನಿಧನದ ಸುದ್ದಿ ಬಗ್ಗೆ ಬರೆಯುತ್ತಾ ಸಂತಾಪ ಸೂಚಿಸಿದ್ದಾರೆ. 

Follow Us:
Download App:
  • android
  • ios