ಜರ್ಮನಿಯಿಂದ ಮೇ.3ರ ಮಧ್ಯರಾತ್ರಿ ಬೆಂಗಳೂರಿಗೆ ಆಗಮಿಸಲಿರುವ ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ನಂತರ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ನಂತರ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮೇ 3 ಮಧ್ಯರಾತ್ರಿ ಬೆಂಗಳೂರಿನ ಕೆಂಪೇಗೌಡ ಏರ್‌ಫೋರ್ಟ್‌ಗೆ ಪ್ರಜ್ವಲ್ ರೇವಣ್ಣ ಆಗಮಿಸಲಿದ್ದು ಮೇ 4ರಂದು ವಿಚಾರಣೆಗೆ ಹಾಜರಾಗುತ್ತಾರೆ ಎಂಬ ಎಕ್ಸ್ ಕ್ಲೂಸಿವ್ ಮಾಹಿತಿ ಏಷ್ಯಾ ನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ.
ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ದೇಶಕ್ಕೆ ಮರಳಲು ಲುಪ್ತನಾ ಏರ್‌ಲೈನ್ಸ್ ನಲ್ಲಿ ಟಿಕೆಟ್ ಬುಕ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜರ್ಮನಿಯ ಫ್ರಾಂಕ್‌ಪರ್ಟ್‌ನಲ್ಲಿ ವಿದೇಶಿ ಪ್ರವಾಸದಲ್ಲಿರುವ ಪ್ರಜ್ವಲ್ ರೇವಣ್ಣ ತಮ್ಮ ವಕೀಲರ ಜೊತೆ ಸಂಪರ್ಕ ಸಾಧಿಸಿದ್ದು, ತಮ್ಮ ವಿರುದ್ಧ ದಾಖಲಾದ ಪ್ರಕರಣ ರದ್ದುಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ.
40 ಜಿಬಿ, 2 ಪೆನ್‌ಡ್ರೈವ್‌ಗಳು: 2900ಕ್ಕೂ ಹೆಚ್ಚು ವಿಡಿಯೋ!:
ಹಾಸನ ಸಂಸದ ನಡೆಸಿದ್ದಾರೆ ಎನ್ನಲಾದ ರಾಸಲೀಲೆ ವಿಡಿಯೋಗಳನ್ನು ಎಸ್‌ಐಟಿ ಸಂಗ್ರಹಿಸಿದೆ. ಎರಡು ಪೆನ್ ಡ್ರೈವ್‌ಗಳಲ್ಲಿ ಸುಮಾರು 40 ಜಿಬಿಯಷ್ಟು 2900ಕ್ಕೂ ಅಧಿಕ ಅಶ್ಲೀಲ ವಿಡಿಯೋಗಳಿವೆ. ಈ ವಿಡಿಯೋಗಳಲ್ಲಿರುವ ಮಹಿಳೆಯರ ಫೋಟೋ ತೆಗೆದು ಅವರನ್ನು ಪತ್ತೆ ಹಚ್ಚುವ ಕಾರ್ಯಕ್ಕೆ ಎಸ್‌ಐಟಿ ಇಳಿದಿದೆ ಎಂದು ಮೂಲಗಳು ಹೇಳಿವೆ. ಈ ವೇಳೆ ಸಂಸದರ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪಗಳು ಹಾಗೂ ಪೆನ್ ಡ್ರೈವ್ ಸ್ಫೋಟದ ಹಿಂದೆ ನಡೆದಿರುವ ಸಂಚು.. ಹೀಗೆ ಹಾಸನ ಜಿಲ್ಲೆಯಲ್ಲಿ ಲೈಂಗಿಕ ಹಗರಣ ಬೆಳಕಿಗೆ ಬಂದ ನಂತರ ಗತಿಸಿರುವ ಬೆಳವಣಿಗೆಗಳ ಬಗ್ಗೆ ಎಸ್ಪಿ ಅವರಿಂದ ಎಸ್ಐಟಿ ಮುಖ್ಯಸ್ಥರು ಮಾಹಿತಿ ಪಡೆದಿದ್ದಾರೆ. ಈ ವೇಳೆ ಕೆಲವು ಮಹತ್ವದ ಮಾಹಿತಿಯನ್ನು ಎಸ್‌ಐಟಿ ಮುಖ್ಯಸ್ಥರೊಂದಿಗೆ ಎಸ್ಪಿ ಹಂಚಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.
ಕೇಂದ್ರ ಸರ್ಕಾರ ತಲುಪಿದ ಪ್ರಜ್ವಲ್ ರೇವಣ್ಣ ಕಾಮಕಾಂಡ; ಮಹಿಳೆಯರ ಅವಮಾನ ಸಹಿಸೊಲ್ಲವೆಂದ ಅಮಿತ್ ಶಾ!
ಜೀವ ಭೀತಿಗೊಳಗಾದ ಸಂತ್ರಸ್ತೆಯರು: ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಪತ್ತೆಗೆ ಸಹಕಾರ ನೀಡುವಂತೆ ಎಸ್ಪಿ ಅವರಿಗೆ ಎಸ್‌ಐಟಿ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಶೋಷಣೆಗೊಳಗಾದ ಮಹಿಳೆಯರ ಪೈಕಿ ಕೆಲವರನ್ನು ಗುರುತಿಸಲಾಗಿದೆ. ಆದರೆ ಕೆಲವರು ಮರ್ಯಾದೆ ಹಾಗೂ ಜೀವ ಭೀತಿಗೊಳಗಾಗಿ ತಮ್ಮ ಮೇಲಿನ ದೌರ್ಜನ್ಯ ಬಗ್ಗೆ ಹೇಳಿಕೆ ನೀಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಎಸ್‌ಐಟಿಗೆ ಸ್ಥಳೀಯರ ಪೊಲೀಸರು ಗಮನಕ್ಕೆ ತಂದಿದ್ದಾರೆ. ಈ ಜೀವ ಭೀತಿ ಹಿನ್ನೆಲೆಯಲ್ಲಿ ಸಂತ್ರಸ್ತ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡುವಂತೆ ಸ್ಥಳೀಯ ಪೊಲೀಸರಿಗೆ ಎಸ್‌ಐಟಿ ಅಧಿಕಾರಿಗಳು ಸೂಚಿಸಿರುವುದಾಗಿ ತಿಳಿದು ಬಂದಿದೆ.
ದೂರು ನೀಡಿದ ಸಂತ್ರಸ್ತೆ ವಿಚಾರಣೆ: ಇನ್ನು ಹಾಸನ ಸಂಸದ ಪ್ರಜ್ವಲ್ ಹಾಗೂ ಅವರ ತಂದೆ ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಸಂತ್ರಸ್ತೆಯನ್ನು ಎಸ್‌ಐಟಿ ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ತಂದೆ-ಮಗನ ಮೇಲೆ ಲೈಂಗಿಕ ಕಿರುಕುಳ ಆರೋಪದಡಿ ಎಫ್‌ಐಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಸಂತ್ರಸ್ತೆಯನ್ನು ಕರೆಸಿ ಪ್ರಾಥಮಿಕ ಹಂತದ ಮಾಹಿತಿಯನ್ನು ಎಸ್‌ಐಟಿ ಪಡೆದುಕೊಂಡಿದ್ದು, ಮತ್ತೆ ವಿಚಾರಣೆಗೆ ಹಾಜರಾಗುವಂತೆ ಆಕೆಗೆ ಸೂಚಿಸಿ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.
Prajwal Revanna : ಪ್ರಜ್ವಲ್ ರೇವಣ್ಣ ವಿರುದ್ಧ ಪ್ರತಿಭಟನೆಯ ಜ್ವಾಲಾಗ್ನಿ: SIT ಎದುರು ಸಂತ್ರಸ್ತೆಯರು ಹೇಳಿದ್ದೇನು ?
ಪ್ರಜ್ವಲ್ ವಿರುದ್ಧದ ಲೈಂಗಿಕ ಹಗರಣ ಸಂಬಂಧ ಆ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಅವರಿಂದ ಮಹತ್ವದ ಮಾಹಿತಿಯನ್ನು ವಿಶೇಷ ತನಿಖಾ ದಳವು (ಎಸ್‌ಐಟಿ) ಸಂಗ್ರಹಿಸಿದೆ. ಎಸ್‌ಐಟಿ ಕರೆ ಹಿನ್ನೆಲೆಯಲ್ಲಿ ಸೋಮವಾರ ಹಾಸನ ಜಿಲ್ಲಾ ಎಸ್ಪಿ ಮೊಹಮ್ಮದ್ ಸುಜೀತಾ ಅವರು ರಾಜ್ಯ ಅಪರಾಧ ತನಿಖಾ ದಳದ (ಸಿಐಡಿ) ಕೇಂದ್ರ ಕಚೇರಿಯಲ್ಲಿ ಎಸ್‌ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ಅವರನ್ನು ಭೇಟಿಯಾಗಿದ್ದರು.