Asianet Suvarna News Asianet Suvarna News

ಸಿಲಿಕಾನ್ ಸಿಟಿ ಜನರಿಗೆ ವೀಕೆಂಡ್‌ ಶಾಕ್! ಈ ಏರಿಯಾಗಳಲ್ಲಿ ಇಂದು ಸಂಜೆವರೆಗೆ ವಿದ್ಯುತ್ ವ್ಯತ್ಯಯ

ನಗರದ ಟಿ ಬೇಗೂರು ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಹಿನ್ನಲೆ ಇಂದು ಕೆಲ ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

Power outage today in these areas of Bangalore city BESCOM at Bengaluru rav
Author
First Published Dec 10, 2023, 1:00 PM IST

ಬೆಂಗಳೂರು (ಡಿ.10) ನಗರದ ಟಿ ಬೇಗೂರು ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಹಿನ್ನಲೆ ಇಂದು ಕೆಲ ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ. ಇಂದು ಬೆಳಗ್ಗೆ 10 ರಿಂದ ಸಂಜೆ 4ರವರೆಗೆ ಹಲವೆಡೆ ವಿದ್ಯುತ್ ಅಡಚಣೆಯಾಗಲಿದೆ

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?

ದಾಬಸ್ ಪೇಟೆ, ಜಿಂದಾಲ್, ಎಸ್ಕೆ ಸ್ಟೀಲ್, ತ್ಯಾಮಗೊಂಡ್ಲು, ತಾವರೆಕೆರೆ, ಬ್ಯಾಡರಹಳ್ಳಿ ಸೇರಿದಂತೆ ನೆಲಮಂಗಲ ಟಿ ಬೇಗೂರು ಸುತ್ತಮುತ್ತಲಿನ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ. 

ಸಿಲಿಕಾನ್ ಸಿಟಿ ಜನರಿಗೆ ಮುಂದುವರಿದ 'ಕತ್ತಲು ಭಾಗ್ಯ' ಈ ಏರಿಯಾದಲ್ಲಿ ಇಂದು, ನಾಳೆ ವಿದ್ಯುತ್ ವ್ಯತ್ಯಯ

ಕೈಗಾರಿಕಾ ಮಂಡಳಿ ವಿದ್ಯುತ್‌ ಕೆಲಸದಲ್ಲಿ ಅಕ್ರಮ: ಅರುಣ್‌

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ವಿದ್ಯುತ್ ಕಾಮಗಾರಿಗಳಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಡಾ। ಬಿ.ಆರ್.ಅಂಬೇಡ್ಕರ್ ಪ್ರಚಾರ ಸಮಿತಿ ಹೆಸರಿನ ಸಂಘಟನೆ ಒತ್ತಾಯಿಸಿದೆ.

ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಮಿತಿ ಅಧ್ಯಕ್ಷ ಅರುಣ್ ಕುಮಾರ್, 2022-23ನೇ ಸಾಲಿನಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಗುತ್ತಿಗೆ ಕಾಮಗಾರಿಗಳನ್ನು ನಕಲಿ ಲೈಸನ್ಸ್ ಮತ್ತು ಬ್ಯಾಂಕ್ ಎಫ್.ಡಿ ದಾಖಲೆಗಳನ್ನು ಸೃಷ್ಟಿಸಿರುವ ಅನರ್ಹ ಗುತ್ತಿಗೆದಾರರಿಗೆ ನೀಡಲಾಗಿದೆ. ಮೆ. ಗೀತಾ ಎಲೆಕ್ಟ್ರಾನಿಕ್ಸ್, ಮೆ. ಕುಮಾರ್ ಎಲೆಕ್ಟ್ರಾನಿಕ್ಸ್, ಮೆ. ಅರವಿಂದ್ ಎಲೆಕ್ಟ್ರಾನಿಕ್ಸ್ ಹೆಸರಿನ ಸಂಸ್ಥೆಗಳಿಗೆ ಅಕ್ರಮವಾಗಿ ಟೆಂಡರ್ ಹಂಚಿಕೆ ಮಾಡಲಾಗಿದೆ. ದುಪ್ಪಟ್ಟು ಅಂದಾಜು ತಯಾರಿಸಿ ತರಾತುರಿಯಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾರ್ಯಾದೇಶ ನೀಡಿ ಕೆಟಿಟಿಪಿ ಕಾಯ್ದೆಯನ್ನು ಉಲ್ಲಂಘಿಸಲಾಗಿದೆ ಎಂದು ಆಪಾದಿಸಿದರು.

ಬೆಂಗಳೂರು ಜನರಿಗೆ ಭಾನುವಾರದ ಶಾಕ್‌ : ಸತತ ಮೂರನೇ ದಿನವೂ ವಿದ್ಯುತ್‌ ಕಡಿತ

ಅಕ್ರಮದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದರು.

Follow Us:
Download App:
  • android
  • ios