Asianet Suvarna News Asianet Suvarna News

ನಾನು, ಪ್ರಿಯಾಂಕ್ ಖರ್ಗೆ ಅಭಿವೃದ್ಧಿ ಬಗ್ಗೆ ಮಾತ್ರ ಮಾತಾಡ್ತೇವೆ: ಸಚಿವ ಶರಣ್ ಪ್ರಕಾಶ್ ಪಾಟೀಲ್

ನಮ್ಮ ಬಾಯಲ್ಲಿ ಅವರುಗಳ ಬಗ್ಗೆ ಮಾತು ಬೇಡ ಮಾಡಿದವರ ಪಾಪ ಆಡಿದವರ ಬಾಯಿಗೇಕೆ ಎಂದು ಪ್ರಜ್ವಲ್ ರೇವಣ್ಣ ಸಹೋದರ ಸೂರಜ್ ರೇವಣ್ಣನಿಂದ ಲೈಂಗಿಕ ಕಿರುಕುಳ ಪ್ರಕರಣದ ಬಗ್ಗೆ ವೈದ್ಯಕೀಯ ಸಚಿವ ಡಾ ಶರಣ್ ಪ್ರಕಾಶ್ ಪಾಟೀಲ್ ಪ್ರತಿಕ್ರಿಯಿಸಲು ನಿರಾಕರಿಸಿದರು.

prajwal revanna brother suraj revanna sexual harrasment case minister sharan prakash patil reacts rav
Author
First Published Jun 22, 2024, 1:08 PM IST

ಕಲಬುರಗಿ (ಜೂ.22): ನಮ್ಮ ಬಾಯಲ್ಲಿ ಅವರುಗಳ ಬಗ್ಗೆ ಮಾತು ಬೇಡ ಮಾಡಿದವರ ಪಾಪ ಆಡಿದವರ ಬಾಯಿಗೇಕೆ ಎಂದು ಪ್ರಜ್ವಲ್ ರೇವಣ್ಣ ಸಹೋದರ ಸೂರಜ್ ರೇವಣ್ಣನಿಂದ ಲೈಂಗಿಕ ಕಿರುಕುಳ ಪ್ರಕರಣದ ಬಗ್ಗೆ ವೈದ್ಯಕೀಯ ಸಚಿವ ಡಾ ಶರಣ್ ಪ್ರಕಾಶ್ ಪಾಟೀಲ್ ಪ್ರತಿಕ್ರಿಯಿಸಲು ನಿರಾಕರಿಸಿದರು.

ಕಲಬುರಗಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿ ಬಗ್ಗೆ ಕೇಳಿ ನಾವು ಮಾತಾಡ್ತೇವೆ. ನಾನು ಪ್ರಿಯಾಂಕ್ ಖರ್ಗೆ ಅಭಿವೃದ್ಧಿ ಬಗ್ಗೆ ಮಾತಾಡ್ತೇವೆ. ನಾವು ತಪ್ಪು ಮಾಡಿದ್ರೆ ನಮ್ಮ ಬಗ್ಗೆ ಸುದ್ದಿ ಮಾಡಿ ನಾವು ತಿದ್ದಿಕೊಳ್ತೇವೆ. ಅದುಬಿಟ್ಟು ರಾಜಕಾರಣ ಬಗ್ಗೆ ನಾವು ಮಾತಾಡೊಲ್ಲ ಎಂದರು.

ಕಿದ್ವಾಯಿ-ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ದಿಢೀರ್ ಭೇಟಿ; ವೈದ್ಯ-ಸಿಬ್ಬಂದಿಗೆ ಚಳಿ ಬಿಡಿಸಿದ ಸಚಿವ ಶರಣಪ್ರಕಾಶ್ ಪಾಟೀಲ್

ಇನ್ನು ಸಮುದಾಯವರು ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಹೇಳಿಕೆ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಾವ್ಯಾರೂ ಡಿಸಿಎಂ ಆಕಾಂಕ್ಷಿಗಳಲ್ಲ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ಅಂತಾ ಇದೆ. ಅವರ ಬಳಿ ಕೇಳಲು ಅವಕಾಶ ಇದೆ. ಡಿಸಿಎಂ ವಿಚಾರ ಹೈಕಮಾಂಡ್‌ಗೆ ಬಿ್ಟ್ಟ ವಿಚಾರ. ಅವರು ಏನು ತೀರ್ಮಾನ ಮಾಡ್ತಾರೋ ಅದನ್ನ ಎಲ್ಲರೂ ಪಾಲಿಸಬೇಕು ಎಂದರು.

Latest Videos
Follow Us:
Download App:
  • android
  • ios