ಪ್ರಜ್ವಲ್ ರೇವಣ್ಣ ವಿವಾದ ನಡುವೆಯೇ ನಾಳೆ ದೇವೇಗೌಡರ 92ನೇ ಜನ್ಮದಿನ, ಆಚರಣೆ ಇಲ್ಲ
ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ನಡುವೆಯೇ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಕಾರಣಾಂತರಗಳಿಂದ ಜನ್ಮದಿನವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು (ಮೇ.17): ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ನಡುವೆಯೇ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಕಾರಣಾಂತರಗಳಿಂದ ಜನ್ಮದಿನವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಈ ಸಂಬಂಧ ಅವರು ಅಭಿಮಾನಿಗಳು ಮತ್ತು ಜೆಡಿಎಸ್ ಕಾರ್ಯಕರ್ತರಿಗೆ ಪತ್ರ ಬರೆದಿದ್ದಾರೆ. ಶನಿವಾರ ತಮ್ಮ ಹುಟ್ಟುಹಬ್ಬವಿದ್ದು, 91 ವರ್ಷ ಪೂರೈಸುತ್ತಿದ್ದೇನೆ. ಕಾರಣಾಂತರಗಳಿಂದಾಗಿ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿಲ್ಲ. ತಾವೆಲ್ಲರೂ ಇದ್ದಲ್ಲಿಯೇ ಹಾರೈಸಬೇಕು ಎಂದಿದ್ದಾರೆ.
ಪ್ರಸಕ್ತ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆ(Karnataka MLC election 2024)ಯಲ್ಲಿ ಜೆಡಿಎಸ್ - ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕು ಹಾಗೂ ಪಕ್ಷದ ಸಂಘಟನೆಗೆ ಪ್ರತಿಯೊಬ್ಬರೂ ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಪ್ರಜ್ವಲ್ ಫೋಟೊ ಹಾಕಿಕೊಂಡು ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಪಕ್ಷ ಮತ ಕೇಳಲಿ: ಮಾಜಿ ಎಂಎಲ್‌ಸಿ ರಮೇಶ್ ಬಾಬು ಲೇವಡಿ
ಜೈಲಿನಿಂದ ಹೊರಬಂದರೂ ಮನೆಯಿಂದ ರೇವಣ್ಣ ದೂರ
ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರು ತಮ್ಮ ಬೆಂಗಳೂರಿನ ಸ್ವಂತ ನಿವಾಸದಿಂದ ದೂರ ಉಳಿದಿದ್ದಾರೆ.
ಜೈಲಿನಿಂದ ಬಿಡುಗಡೆಯಾದ ಬಳಿಕ ತಮ್ಮ ತಂದೆ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ನಿವಾಸದಲ್ಲಿಯೇ ವಾಸ್ತವ್ಯ ಹೂಡಿದ್ದಾರೆ. ಬಸವನಗುಡಿಯಲ್ಲಿನ ನಿವಾಸದಿಂದ ದೂರ ಉಳಿದಿದ್ದಾರೆ. ಒಮ್ಮೆ ಮಾತ್ರ ಬಸವನಗುಡಿ ನಿವಾಸಕ್ಕೆ ಭೇಟಿ ನೀಡಿದ್ದು, ಕೆಲವೇ ನಿಮಿಷಗಳ ಕಾಲ ಮಾತ್ರ ಇದ್ದು, ವಾಪಸ್ ಬಂದಿದ್ದರು. ನಿವಾಸದಿಂದ ದೂರ ಉಳಿಯಲು ಜ್ಯೋತಿಷ್ಯರು ಸಲಹೆ ನೀಡಿದ್ದಾರೆಯೇ ಎಂಬ ಅನುಮಾನ ಮೂಡಿದ್ದು, ಇದೇ ಕಾರಣಕ್ಕಾಗಿ ಬಸವನಗುಡಿ ನಿವಾಸದಿಂದ ದೂರ ಉಳಿದಿದ್ದಾರೆ ಎನ್ನಲಾಗಿದೆ.
ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್! “ಸನ್ ಆಫ್ ರೇವಣ್ಣ”ಗೆ ಕಾದಿದ್ಯಾ ಭಾರೀ ಸಂಕಷ್ಟ..?
ಪೆನ್‌ಡ್ರೈವ್ ಪ್ರಕರಣ ಬಹಿರಂಗವಾಗುತ್ತಿದ್ದಂತೆ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದರೆ, ರೇವಣ್ಣ ಅವರು ಬಸವನಗುಡಿ ನಿವಾಸದತ್ತ ಸುಳಿಯುತ್ತಿಲ್ಲ. ಜೈಲಿಗೆ ಹೋಗಿ ಬಂದ ಬಳಿಕ ದೇವೇಗೌಡ ನಿವಾಸದಲ್ಲಿ ವಾಸ್ತವ್ಯ ಮಾಡುತ್ತಿದ್ದಾರೆ. ಇದಕ್ಕೆ ಜ್ಯೋತಿಷಿಗಳು ಸಲಹೆ ನೀಡಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ರೇವಣ್ಣ ಅವರು ಜ್ಯೋತಿಷ್ಯದ ಮೇಲೆ ಅಪಾರ ನಂಬಿಕೆಯನ್ನಿಟ್ಟುಕೊಂಡಿದ್ದಾರೆ. ಪ್ರತಿಯೊಂದಕ್ಕೂ ಜ್ಯೋತಿಷ್ಯದ ಮೇಲೆಯೇ ತೀರ್ಮಾನ ಕೈಗೊಳ್ಳುತ್ತಾರೆ. ಹೀಗಾಗಿ ಇಂತಹ ಅನುಮಾನ ಸಹಜವಾಗಿಯೇ ಮೂಡಿದೆ ಎಂಬ ಮಾತುಗಳು ಕೇಳಿಬಂದಿವೆ.