ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಪಡೆದಿರುವುದನ್ನು ಪ್ರಶ್ನಿಸಿ ಎಸ್ಐಟಿ ಅಧಿಕಾರಿಗಳು ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದು, ಈ ಸಂಬಂಧ ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.

ಬೆಂಗಳೂರು (ಜು.9): ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಪಡೆದಿರುವುದನ್ನು ಪ್ರಶ್ನಿಸಿ ಎಸ್ಐಟಿ ಅಧಿಕಾರಿಗಳು ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದು, ಈ ಸಂಬಂಧ ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.

ಅಪಹರಣ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಪಡೆದುಕೊಂಡಿರುವ ಭವಾನಿ ರೇವಣ್ಣ. ನಿರೀಕ್ಷಣಾ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್ ಕದ ತಟ್ಟಿರುವ ಎಸ್‌ಐಟಿ ಅಧಿಕಾರಿಗಳು. ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾ.ಸೂರ್ಯಕಾಂತ್ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿರುವ ಹಿನ್ನೆಲೆ ಎಸ್‌ಐಟಿ ಮುಖ್ಯಸ್ಥ ಬಿಕೆ ಸಿಂಗ್, ಎಸ್ಪಿಪಿ ಜಗದೀಶ್, ಹಾಗೂ ತನಿಖಾಧಿಕಾರಿ ಹೇಮಂತ್ ಅವರು ಈಗಾಗಲೇ ದೆಹಲಿಯಲ್ಲಿ ಬೀಡುಬಿಟ್ಟಿದೆ.

ವಿಚಾರಣೆ ವೇಳೆ ಹಿರಿಯ ವಕೀಲ ಕಪಿಲ್ ಸಿಬಲ್ ಎಸ್‌ಐಟಿ ಪರ ಹಾಜರಾಗುವ ಸಾಧ್ಯತೆಯಿದೆ. ಒಂದು ವೇಳೆ ನಿರೀಕ್ಷಣಾ ಜಾಮೀನು ರದ್ದಾದರೆ ಭವಾನಿ ರೇವಣ್ಣಗೆ ಸಂಕಷ್ಟ ಎದುರಾಗಲಿದೆ.