ಪ್ರಜ್ವಲ್ ರೇವಣ್ಣ ಪ್ರಕರಣ ಯಾವುದೇ ಕಾರಣಕ್ಕೂ ಸಿಬಿಐಗೆ ವಹಿಸೊಲ್ಲ: ಸಿಎಂ

ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐ ವಹಿಸುವ ಅಗತ್ಯವಿಲ್ಲ ನಮ್ಮ ಪೊಲೀಸರೇ ಈ ಪ್ರಕರಣದ ತನಿಖೆ ನಡೆಸುತ್ತಾರೆ. ನನಗೆ ನಮ್ಮ ಪೊಲೀಸರ ಮೇಲೆ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Prajwal Revanna sex videos tapes case CM Siddaramaiah reacts at bengaluru rav

ಬೆಂಗಳೂರು (ಮೇ.10): ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐ ವಹಿಸುವ ಅಗತ್ಯವಿಲ್ಲ ನಮ್ಮ ಪೊಲೀಸರೇ ಈ ಪ್ರಕರಣದ ತನಿಖೆ ನಡೆಸುತ್ತಾರೆ. ನನಗೆ ನಮ್ಮ ಪೊಲೀಸರ ಮೇಲೆ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪ್ರಜ್ವಲ್ ರೇವಣ್ಣ ಪ್ರಕರಣವನ್ನ ಸಿಬಿಐಗೆ ವಹಿಸುವಂತೆ ಮೈತ್ರಿ ನಾಯಕರು ಒತ್ತಾಯಿಸಿದ ವಿಚಾರ ಸಂಬಂಧ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಬಿಜೆಪಿಯವರು ಯಾವತ್ತಾದರೂ ಒಂದು ಪ್ರಕರಣವಾದರೂ ಸಿಬಿಐಗೆ ಕೊಟ್ಟಿದ್ದಾರಾ? ಹಿಂದೆ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಡಿ.ಕೆ. ರವಿ ಪ್ರಕರಣ, ಒಂದಂಕಿ ಲಾಟರಿ ಪ್ರಕರಣ, ಸಚಿವರಾದ ಕೆ.ಜೆ. ಜಾರ್ಜ್‌ ಅವರ ಮೇಲಿನ ಆರೋಪ, ಪರೇಶ್‌ ಮೇಸ್ತಾ ಸಾವಿನ ಪ್ರಕರಣಗಳನ್ನು ಸಿಬಿಐಗೆ ವಹಿಸಲಾಗಿತ್ತು. ಹಿಂದೆ ಬಿಜೆಪಿಯವರೇ ಸಿಬಿಐ ಯನ್ನು ಕರಪ್ಷನ್‌ ಬ್ಯೂರೋ ಆಫ್‌ ಇನ್ವೆಸ್ಟಿಗೇಷನ್ ಎಂದು ಬಣ್ಣಿಸಿದ್ದಾರೆ. ದೇವೇಗೌಡರು ಚೋರ್‌ ಬಚಾವೋ ಸಂಸ್ಥೆ ಎಂದು ಹೇಳಿದ್ದರು. ಈಗ ಸಿಬಿಐ ಮೇಲೆ ಅವರಿಗೆ ವಿಶ್ವಾಸ ಬಂತಾ? ನನಗೆ ಸಿಬಿಐ ಮೇಲೆ ವಿಶ್ವಾಸವಿದೆ. ಆದರೆ, ನಮ್ಮ ಪೊಲೀಸರ ಬಗ್ಗೆ ಹೆಚ್ಚು ನಂಬಿಕೆ ಇದೆ. ಅದಕ್ಕಾಗಿ ವಿಶೇಷ ತನಿಖಾ ತಂಡ ರಚನೆ ಮಾಡಿದ್ದೇವೆ ಎಂದರು.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್‌ ಸಿಬಿಐಗೆ ವಹಿಸಿ: ರಾಜ್ಯಪಾಲರಿಗೆ ಜೆಡಿಎಸ್‌ ಮೊರೆ

ನಮ್ಮ ಸರ್ಕಾರ ಕಾನೂನು ರೀತ್ಯ ನಡೆಯುತ್ತಿರುವ ಕೆಲಸದಲ್ಲಿ, ತನಿಖೆಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಅವರು ಸರಿಯಾದ ರೀತಿಯಲ್ಲಿ ಕೆಲಸ ಮಾಡುತ್ತಾರೆಂದು ನಂಬಿದ್ದೇನೆ. ನಾನು ಯಾವತ್ತೂ ಕಾನೂನಿಗೆ ವಿರುದ್ಧವಾಗಿ ಕೆಲಸ ಮಾಡಿ ಎಂದು ಹೇಳಿಲ್ಲ, ಹೇಳುವುದೂ ಇಲ್ಲ. ಈ ಪ್ರಕರಣದಲ್ಲಿ ಅಂತರರಾಷ್ಟ್ರೀಯ ಮಟ್ಟದ ತನಿಖೆಯ ಅಗತ್ಯವಿಲ್ಲ. ಎಲ್ಲ ಅಪರಾಧ ಪ್ರಕರಣಗಳ ತನಿಖೆ ಯಾರು ಮಾಡುತ್ತಾರೆ? ನಮ್ಮ ಪೊಲೀಸರಲ್ಲವೇ? ಅವರದ್ದೇ ವಿಶೇಷ ತನಿಖಾದಳ ರಚಿಸಿರುವುದಲ್ಲವೇ? ನಮ್ಮ ಪೊಲೀಸರನ್ನು ನಾವು ನಂಬಬೇಕಲ್ಲವೆ? ಎಂದು ಪ್ರಶ್ನಿಸಿದರು ಮುಂದುವರಿದರು, ಪ್ರಜ್ವಲ್ ರೇವಣ್ಣನವರ ಮಹಿಳಾ ದೌರ್ಜನ್ಯ ಪ್ರಕರಣದಲ್ಲಿ ನಾನಾಗಲೀ, ಡಿ.ಕೆ.ಶಿವಕುಮಾರ್‌ ಆಗಲೀ, ಸರ್ಕಾರದ ಯಾರೊಬ್ಬರೂ ಹಸ್ತಕ್ಷೇಪ ಮಾಡುತ್ತಿಲ್ಲ. ನನಗೆ ಎಸ್‌ಐಟಿ ಮೇಲೆ ವಿಶ್ವಾಸವಿದೆ. ಸತ್ಯಾಸತ್ಯತೆ ಹೊರಬರುವ ನಂಬಿಕೆ ಇದೆ ಎಂದರು.

Latest Videos
Follow Us:
Download App:
  • android
  • ios