ಬೆಳಗಾವಿ, (ನ.6): ಕೊಲೆ ಆರೋಪದಲ್ಲಿ ಜೈಲಿಗೆ ಹೋದರೆ ಅವರು ನಮ್ಮವರು ಎನ್ನುವುದು ಸರಿಯಲ್ಲವೆಂದು ಪಂಚಮಸಾಲಿ ಮಠದ ಜಯಮೃತ್ಯುಂಜಯ ಶ್ರೀಗಳಿಗೆ ಪ್ರಮೋದ್ ಮುತಾಲಿಕ್ ತಿರುಗೇಟು ಕೊಟ್ಟಿದ್ದಾರೆ.

"

ಲಿಂಗಾಯತ ಸಮಾಜದ ಮುಖಂಡರೊಬ್ಬರನ್ನು ಸಿಬಿಐ ಪೋಲಿಸರು ಬಂದಿಸಿರುವುದು ಖಂಡನೀಯ. ಉತ್ತಮ ಹಿನ್ನಲೆಯುಳ್ಳ ಕುಟುಂಬದಿಂದ ಬಂದ ವ್ಯಕ್ತಿಯನ್ನು ಬೆಳಗಿನ ಜಾವ ಏಕಾಏಕಿ ಬಂದಿಸಿರುವುದು ಸರಿಯಲ್ಲ ಎಂದು ಪಂಚಮಸಾಲಿ ಮಠದ ಜಯಮೃತ್ಯುಂಜಯ ಶ್ರೀಗಳು ಹೇಳಿದ್ದರು.

ನಾಲ್ಕು ವರ್ಷದ ಹಳೇ ಕೇಸು: ಮಾಜಿ ಸಚಿವಗೆ ಬಿಗ್ ಶಾಕ್..! 

ಈ ಬಗ್ಗೆ ಪ್ರತಿಕ್ರಿಯಿಸಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್,  ಕಾನೂನು ಪ್ರಕಾರ ಅಪರಾಧಿ, ನಿರಪರಾಧಿ ಅನ್ನುವುದು ಸಾಬೀತಾಗಬೇಕು. ಪ್ರಾರಂಭದಲ್ಲಿ ಆರೋಪಿಗಳು ನಮ್ಮವರು ಎನ್ನುವುದು ಅನೈತಿಕತೆ ಎಂದರು.

"

ಕಾವಿ ಬಟ್ಟೆ ಹಾಕಿರುವ ನೀವು ಒಂದು ಜಾತಿಗೆ ಸೀಮಿತವಲ್ಲ. ಬಂಧನವಾದ ಕೂಡಲೇ ಬೆಂಬಲ ಕೊಡುವುದರಿಂದ ತಪ್ಪು ಸಂದೇಶ ರವಾನೆ ಆಗುತ್ತದೆ. ಆಧಾರ ಇರುವ ಕಾರಣ ಸಂಶಯದಿಂದ ವಿನಯ ಕುಲಕರ್ಣಿ ಬಂಧಿಸಿದ್ದಾರೆ. ವಿನಯ್ ಕುಲಕರ್ಣಿ ಅವರ ಪರವಾಗಿ ನಿಂತಿದ್ದು, ನಿಮ್ಮ ಮಠದ ಶೋಭೆ ಅಲ್ಲ ಎಂದು ಸ್ವಾಮೀಜಿ ವಿರುದ್ಧ ಕಿಡಿಕಾರಿದರು.