Asianet Suvarna News

ಪ್ರಣಭ್ ಕಣ್ಮರೆ : ರಾಜ್ಯದಲ್ಲಿ 7 ದಿನ ಶೋಕಾಚರಣೆ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ 7 ದಿನಗಳ ಕಾಲ ಶೋಕಾಚರಣೆ ಮಾಡಲಾಗುತ್ತಿದೆ. ಈ ವೇಳೆ ರಾಜ್ಯದಲ್ಲಿ ಯಾವುದೇ ಸಾರ್ವಜನಿಕ ಮನೊರಂಜನಾ ಸಮಾರಮಭಗಳನ್ನು ನಡೆಸುವಂತಿಲ್ಲ.

Pranab Mukherjee No More 7 Days Mourning in Karnataka
Author
Bengaluru, First Published Sep 1, 2020, 7:27 AM IST
  • Facebook
  • Twitter
  • Whatsapp

ಬೆಂಗಳೂರು (ಸೆ.01) : ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ನಿಧನರಾಗಿರುವ ಹಿನ್ನೆಲೆಯಲ್ಲಿ ಅವರ ಗೌರವಾರ್ಥ ರಾಜ್ಯದಲ್ಲಿ 7 ದಿನ ಶೋಕಾಚರಣೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸೆ.6ರವರೆಗೆ ಶೋಕಾಚರಣೆ ಮಾಡಲಾಗುವುದು. ಈ ಅವಧಿಯಲ್ಲಿ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ನಿಯಮಿತವಾಗಿ ಹಾರಿಸಲಾಗುವ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಎಂದು ತಿಳಿಸಲಾಗಿದೆ.

ಉಡುಪಿಯಲ್ಲಿ ಪ್ರಣಬ್ ಪ್ರಯಾಣ, ವೈದ್ಯರ ಮೇಲಿನ ಹಲ್ಲೆ ಖಂಡಿಸಿದ್ದ ಇತಿಹಾಸ

ಕಳೆದ 21 ದಿನಗಳಿಂದ ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ದೇಶದ ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ (84) ಅವರು ಸೋಮವಾರ ಇಹಲೋಕ ತ್ಯಜಿಸಿದ್ದಾರೆ.

‘ನಡೆದಾಡುವ ವಿಶ್ವಕೋಶ’ ಎಂಬ ಬಿರುದು ಹೊಂದಿದ್ದ, ದೇಶದ ಗೌರವಾನ್ವಿತ ರಾಜಕಾರಣಿ ಎಂದು ಹೆಸರು ಗಳಿಸಿದ್ದ ಪ್ರಣಬ್‌ ಅವರು ಸಂಜೆ 4.30ಕ್ಕೆ ಹೃದಯ ಸ್ತಂಭನದಿಂದ ಕೊನೆಯುಸಿರೆಳೆದಿದ್ದಾರೆ. ದೇಶದ ಅತ್ಯುಚ್ಚ ನಾಗರಿಕ ಪುರಸ್ಕಾರ ಭಾರತ ರತ್ನಕ್ಕೆ ಭಾಜನರಾಗಿದ್ದ ಪ್ರಣಬ್‌ ಅವರು ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಹಿರಿಯ ರಾಜಕೀಯ ನಾಯಕನ ಅಗಲಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 7 ದಿನಗಳ ಕಾಲ ರಾಷ್ಟ್ರವ್ಯಾಪಿ ಶೋಕಾಚರಣೆ ಘೋಷಣೆ ಮಾಡಿದೆ. ಆ.31ರಿಂದ ಸೆ.6ರವರೆಗೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸುವಂತೆ, ಮನರಂಜನಾ ಕಾರ್ಯಕ್ರಮ ಹಮ್ಮಿಕೊಳ್ಳದಂತೆ ಸೂಚಿಸಿದೆ.

ದೇಶ ಕಂಡ ಅದ್ಭುತ ರಾಜಕಾರಣಿ ಪ್ರಣಬ್ ದಾದಾ ನಡೆದು ಬಂದ ಹಾದಿ!

ಪ್ರಣಬ್‌ ಅವರು ಕೊನೆಯುಸಿರೆಳೆದ ಸುದ್ದಿ ತಿಳಿಯುತ್ತಿದ್ದಂತೆ ರಾಷ್ಟ್ರಪತಿ ರಾಮನಾಥ ಕೋವಿಂದ್‌, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಕೇಂದ್ರ ಸಚಿವರಾದ ರಾಜನಾಥ ಸಿಂಗ್‌, ಅಮಿತ್‌ ಶಾ, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ, ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು, ವಿವಿಧ ಕ್ಷೇತ್ರಗಳ ಪ್ರಮುಖರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Follow Us:
Download App:
  • android
  • ios