ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ ಬಂಧನಕ್ಕೆ ಪ್ರವೀಣ್ ನೆಟ್ಟಾರು ಪತ್ನಿ ನೂತನ ಸಂತಸ ವ್ಯಕ್ತಪಡಿಸಿದ್ದಾರೆ.
ಮಂಗಳೂರು (ಮೇ.10): ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ ಬಂಧನಕ್ಕೆ ಪ್ರವೀಣ್ ನೆಟ್ಟಾರು ಪತ್ನಿ ನೂತನ ಸಂತಸ ವ್ಯಕ್ತಪಡಿಸಿದ್ದಾರೆ.
ಅರೋಪಿ ಮುಸ್ತಾಫ್ ಬಂಧನ ಕುರಿತು ಏಷಿಯಾನೆಟ್ ಸುವರ್ಣ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿರುವ ನೂತನ, ಅವನು ಕೊನೆಗೂ ಸಿಕ್ಕಿರೋದಕ್ಕೆ ನಮಗೆ ತುಂಬಾ ಖುಷಿಯಾಗಿದೆ. ಈ ಪ್ರಕರಣದಲ್ಲಿ ಎಲ್ಲ ಆರೋಪಿಗಳಿಗೂ ಮರಣದಂಡನೆಯಾಗಬೇಕು. ಇಡೀ ದೇಶದಲ್ಲಿ ಈ ಪ್ರಕರಣವೇ ಅಂತಿಮವಾಗಬೇಕು, ಮುಂದೆ ಸಮಾಜದಲ್ಲಿ ಇಂತಹ ಪ್ರಕರಣ ಮರುಕಳಿಸಬಾರದು. ಅವನ ಬಂಧನದಿಂದ ನಮ್ಮ ಕುಟುಂಬದವರಿಗೂ ಸಂತಸ ಕುಟುಂಬದ ಪರವಾಗಿ ಎನ್‌ಐಎ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದರು.
ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳು ಇನ್ನೂ ನಾಪತ್ತೆ: ವಾಟ್ಸಾಪ್, ಕರೆ ಮಾಡಿ ಮಾಹಿತಿ ನೀಡಲು ಎನ್‌ಐಎ ಮನವಿ
ಪ್ರಕರಣ ನಡೆದು ಎರಡು ವರ್ಷವಾದರೂ ಆರೋಪಿಗಳನ್ನ ಬಂಧಿಸಲು ಎನ್ಐಎ ಅಧಿಕಾರಿಗಳು ತುಂಬಾ ಪ್ರಯತ್ನ ಪಡುತ್ತಿದ್ದಾರೆ. ಎನ್‌ಐಎ ಸಂಸ್ಥೆಯ ಮೇಲೆ ನಮಗೆ ನಂಬಿಕೆ ಇದೆ. ಎಲ್ಲ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ. ಆದರೆ ಈ ಪ್ರಕರಣದಲ್ಲಿ ಆರೋಪಿಗಳಿಗೆ ನೀಡುವ ಶಿಕ್ಷೆ ಒಂದು ಪಾಠವಾಗಬೇಕು. ಎಸ್‌ಡಿಪಿಐ, ಪಿಎಫ್‌ಐ ಕಾರ್ಯಕರ್ತರು ಮುಂದೆ ಯಾವತ್ತೂ ಇಂತಹ ಕೃತ್ಯಕ್ಕೆ ಕೈಹಾಕಬಾರದು ಅಂತಹ ಶಿಕ್ಷೆ ಆರೋಪಿಗಳಿಗೆ ನೀಡಬೇಕು ಎಂದರು.
ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ ಹಗಲಿರುಳು ಶ್ರಮಿಸಿದ್ದ ಎನ್‌ಐಎ ಅಧಿಕಾರಿಗಳು, ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನವನ್ನು ಘೊಷಿಸಿತ್ತು. ಇದೀಗ ಪ್ರಮುಖ ಆರೋಪಿ ಬಂಧನವಾಗಿದೆ.