Asianet Suvarna News Asianet Suvarna News

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಆರಗ ‘ಹಿಜಾಬ್‌ ಶಕ್ತಿ’ ಹೇಳಿಕೆಗೆ ಡಿಕೆಶಿ ಕಿಡಿ

ಪ್ರವೀಣ್‌ ಹತ್ಯೆಯನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸುತ್ತಿದೆ. ಹತ್ಯೆಗೆ ಕಾರಣ ಯಾರು ಎಂಬುದನ್ನು ಎಸ್‌ಪಿ ಅಥವಾ ಡಿವೈಎಸ್‌ಪಿ ಹೇಳಬೇಕು. ಆದರೆ, ಈ ಬಗ್ಗೆ ಗೃಹ ಸಚಿವರು ಒಂದು ಪಕ್ಷಕ್ಕೆ ಸೀಮಿತವಾದವರಂತೆ ಹೇಳಿಕೆ ನೀಡುತ್ತಿದ್ದಾರೆ. ಹೀಗೆ ಹೇಳಿಕೆ ನೀಡಿದರೆ ರಾಜ್ಯ ಉಳಿಯುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಕಿಡಿ ಕಾರಿದ್ದಾರೆ.

Praveen Nettaru Murder Case Government Failed In Maintaining Law And Order Says Dk Shivakumar gvd
Author
Bangalore, First Published Jul 28, 2022, 5:15 AM IST

ಬೆಂಗಳೂರು (ಜು.28): ಪ್ರವೀಣ್‌ ಹತ್ಯೆಯನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸುತ್ತಿದೆ. ಹತ್ಯೆಗೆ ಕಾರಣ ಯಾರು ಎಂಬುದನ್ನು ಎಸ್‌ಪಿ ಅಥವಾ ಡಿವೈಎಸ್‌ಪಿ ಹೇಳಬೇಕು. ಆದರೆ, ಈ ಬಗ್ಗೆ ಗೃಹ ಸಚಿವರು ಒಂದು ಪಕ್ಷಕ್ಕೆ ಸೀಮಿತವಾದವರಂತೆ ಹೇಳಿಕೆ ನೀಡುತ್ತಿದ್ದಾರೆ. ಹೀಗೆ ಹೇಳಿಕೆ ನೀಡಿದರೆ ರಾಜ್ಯ ಉಳಿಯುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಕಿಡಿ ಕಾರಿದ್ದಾರೆ.

‘ಬಿಜೆಪಿ ಮುಖಂಡ ಪ್ರವೀಣ್‌ ಹತ್ಯೆಯ ಹಿಂದೆ ಹಿಜಾಬ್‌ ಹಿಂದಿನ ಶಕ್ತಿಗಳಿವೆ’ ಎಂಬ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆಗೆ ಕಿಡಿ ಕಾರಿದ ಅವರು, ಪ್ರತಿಯೊಂದು ಸಾವನ್ನೂ ರಾಜಕೀಯವಾಗಿ ಬಳಸಿಕೊಳ್ಳುವುದು ಬಿಜೆಪಿ ರೂಢಿ. ಬಾಳೆ ಹಣ್ಣು ತಿಂದು ಸಿಪ್ಪೆ ಬೇರೆಯವರ ಬಾಯಿಗೆ ಒರೆಸಲು ಯತ್ನಿಸುತ್ತಿದ್ದಾರೆ. ಪೊಲೀಸರು ತನಿಖೆ ಮಾಡಿ ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳಲಿ. ಗೃಹ ಸಚಿವರು ಇಂತಹ ವಿಚಾರಗಳಲ್ಲಿ ಪಕ್ಷಕ್ಕೆ ಸೀಮಿತವಾಗಿ ಹೇಳಿಕೆಗಳನ್ನು ನೀಡಿದರೆ ರಾಜ್ಯ ಉಳಿಯುವುದಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ಮುಖಂಡನ ಹತ್ಯೆ ಹಿಂದೆ ಸರ್ ತನ್ ಸೆ ಜುದಾ? ಕನ್ಹಯ ಶಿರಚ್ಚೇದ ಖಂಡನೆಗೆ ಕೊಲೆ ಶಂಕೆ!

‘ಗೃಹ ಸಚಿವರು ಹಾಗೂ ಮಾಧ್ಯಮಗಳು ಯಾರ ಕಡೆಯೂ ಕೈ ತೋರಿಸಿ ಸುಮ್ಮನೆ ಅವಲಕ್ಷಣ ಎನಿಸಿಕೊಳ್ಳಬೇಡಿ. 1 ತಿಂಗಳ ಹಿಂದೆ ನಡೆದಿದ್ದ ಪ್ರಕರಣದಲ್ಲಿ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ಈ ಹಿಂದೆ ನಡೆದಿದ್ದ ಸಂಚುಗಳ ಬಗ್ಗೆಯೂ ಗೊತ್ತಿದೆ. ಹೀಗಾಗಿ ಕೊಲೆ ರಾಜಕೀಯವಾಗಿ ಆಯಿತೇ ಅಥವಾ ವೈಯಕ್ತಿಕ ಕಾರಣಕ್ಕಾಗಿ ಆಯಿತೇ, ಬೇರೆ ಏನಾದರೂ ಕಾರಣ ಇದೆಯೇ ಎಂಬುದನ್ನು ಪೊಲೀಸರು ಹೇಳಲಿ’ ಎಂದು ಹೇಳಿದರು.

ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ಪೊಲೀಸರು ಹಾಗೂ ಗೃಹ ಸಚಿವರು ತಮ್ಮ ಜವಾಬ್ದಾರಿ ನಿರ್ವಹಣೆಯಲ್ಲಿ ವಿಫಲರಾಗಿದ್ದಾರೆ. ಹೀಗಾಗಿಯೇ ಇದನ್ನು ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ. ಇದಕ್ಕೆ ಯಾವ ರೀತಿಯ ತನಿಖೆ ಬೇಕಿದ್ದರೂ ಮಾಡಲಿ ಎಂದು ಒತ್ತಾಯಿಸಿದರು.

ಸೈದ್ಧಾಂತಿಕವಾಗಿ ಏನೇ ಭಿನ್ನಾಭಿಪ್ರಾಯ ಇದ್ರೂ ಕೊಲೆ ಮಾಡಬಾರದು: ಮಂಗಳವಾರ ನಡೆದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್‌ ನೆಟ್ಟಾರು ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರೆಯೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಅಮಾಯಕ ಯುವಕ ತನ್ನ ಅಂಗಡಿ ಮುಚ್ಚಿ ಮನೆಗೆ ಹೋಗುವ ವೇಳೆ ಘಟನೆ ನಡೆದಿದೆ. ಇದು ದುರದೃಷ್ಟಕರ ಸಂಗತಿಯಾಗಿದೆ ಅಂತ ತಿಳಿಸಿದ್ದಾರೆ. ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಆರಗ ಜ್ಞಾನೇಂದ್ರ ಅವರು, ಕರಾವಳಿಯಲ್ಲಿ ಬಹಳ ವರ್ಷಗಳಿಂದ ಇಂತಹ ಘಟನೆಗಳು ನಡೆಯುತ್ತಿವೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರು ಈಗಾಗಲೇ ತನಿಖೆಯನ್ನ ನಡೆಸುತ್ತಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಲು ಮನವಿ ಮಾಡುತ್ತೇನೆ.  ಸಹಜವಾಗಿಯೇ ಆ ಭಾಗದ ಜನ ಉದ್ವೇಗಕ್ಕೆ ಒಳಗಾಗಬೇಡಿ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರ ಜೊತೆ ಕೂಡ ಮಾತಾಡಿದ್ದೇನೆ. ಶಾಂತಿ, ಸುವ್ಯವಸ್ಥೆ ಕೈಗೊಳ್ಳಲು ಕ್ರಮ ತೆಗೆದುಕೊಂಡಿದ್ದೇವೆ ಅಂತ ಹೇಳಿದ್ದಾರೆ.  ಸೈದ್ಧಾಂತಿಕವಾಗಿ ಏನೇ ಭಿನ್ನಾಭಿಪ್ರಾಯ ಇರಬಹುದು. ಆದರೆ ಕೊಲೆಯಂತಹ ಕೃತ್ಯಗಳು ನಡೆಯಬಾರದು. ಘಟನಾ ಸ್ಥಳದಲ್ಲಿ ಸಾಕಷ್ಟು ದೊಡ್ದ ಪ್ರಮಾಣದಲ್ಲಿ ಪೋಲೀಸರಿದ್ದಾರೆ. 

ಇನ್ನು ಯಾಕೋ ಗಲಭೆ ಎಬ್ಬಿಸಿಲ್ಲ ಬಿಜೆಪಿಯವ್ರು, ಪ್ರವೀಣ್ ಹತ್ಯೆ ಪ್ರಕರಣ ಕುರಿತು ಜಾರಕಿಹೊಳಿ ವ್ಯಂಗ್ಯ!

ಶಾಂತಿ, ಸುವ್ಯವಸ್ಥೆ ಕಾಪಾಡಿಕೊಳ್ಳಲು ಕ್ರಮ ತೆಗೆದುಕೊಳ್ತಾರೆ. ಅಲ್ಲಿ ಜನರನ್ನು ಕನ್ವಿನ್ಸ್ ಮಾಡುವ ಪ್ರಯತ್ನ ಮಾಡುತ್ತೇವೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುತ್ತೇವೆ ಅಂತ ಮಾಹಿತಿ ನೀಡಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡ ಪ್ರತಿಕ್ರಿಯೆ ನೀಡಿದ್ದು , ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಅಂತ ಭರವಸೆ ನೀಡಿದ್ದಾರೆ. 

Follow Us:
Download App:
  • android
  • ios