ರಾಜ್ಯದಲ್ಲಿ ಬಿಸಿಲ ಪ್ರಮಾಣ ಹೆಚ್ಚಾಗಿ ಹಾಗೂ ಸಮುದ್ರ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಕಾರಣಕ್ಕೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು(ಮಾ.15):  ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭವಾಗುವ ಲಕ್ಷಣಗಳು ಕಾಣುತ್ತಿದ್ದು, ಮುಂದಿನ 48 ಗಂಟೆಗಳಲ್ಲಿ ಉತ್ತರ, ದಕ್ಷಿಣ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಬಿಸಿಲ ಪ್ರಮಾಣ ಹೆಚ್ಚಾಗಿ ಹಾಗೂ ಸಮುದ್ರ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಕಾರಣಕ್ಕೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಒಳನಾಡಿನ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಯ ಒಂದೆರಡು ಮಿಂಚು, ಗುಡುಗು ಸಹಿತ ಮುಂದಿನ 48 ಗಂಟೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಸೋಮವಾರ ಕಲಬುರಗಿಯಲ್ಲಿ ರಾಜ್ಯ ಅತಿ ಹೆಚ್ಚು ಗರಿಷ್ಠ ಉಷ್ಣಾಂಶ 36.9 ಡಿಗ್ರಿ ಸೆಲ್ಸಿಯಸ್‌ ದಾಖಲಾದರೆ, ಕನಿಷ್ಠ ಉಷ್ಣಾಂಶ ಬಾಗಲಕೋಟೆಯಲ್ಲಿ 13.0 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಬಿಸಿಲಿನ ಬೇಗೆಯಿಂದ ಬಳಲುತ್ತಿರುವವರಿಗೆ ಗುಡ್‌ ನ್ಯೂಸ್‌: ರಾಜ್ಯದಲ್ಲಿ ಇಂದಿನಿಂದ 5 ದಿನ ಮಳೆ..!

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಷಿಯಸ್‌ ಗರಿಷ್ಠ ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇದೆ. ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟುಕನಿಷ್ಠ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.