ನಾಳೆ ಟಿಪ್ಪು ಜಯಂತಿ ಆಚರಣೆಗೆ ಸಿದ್ಧತೆ; ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಜಾರಿ!
ನಾಳೆ ಶ್ರೀರಂಗಪಟ್ಟಣದಲ್ಲಿ ಟಿಪ್ಪು ವಕ್ಫ್ ಎಸ್ಟೇಟ್‌ನಿಂದ ಟಿಪ್ಪು ಜಯಂತಿ ಆಚರಣೆಗೆ ಚಿಂತನೆ ನಡೆಸಿರುವ ಹಿನ್ನೆಲೆ ತಾಲೂಕಿನಾದ್ಯಂತ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಮಂಡ್ಯ (ನ.9): ನಾಳೆ ಶ್ರೀರಂಗಪಟ್ಟಣದಲ್ಲಿ ಟಿಪ್ಪು ವಕ್ಫ್ ಎಸ್ಟೇಟ್‌ನಿಂದ ಟಿಪ್ಪು ಜಯಂತಿ ಆಚರಣೆಗೆ ಚಿಂತನೆ ನಡೆಸಿರುವ ಹಿನ್ನೆಲೆ ತಾಲೂಕಿನಾದ್ಯಂತ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ನಾಳೆ (ನ.10) ರಂದು ಟಿಪ್ಪುವಕ್ಫ್ ಎಸ್ಟೇಟ್ ವತಿಯಿಂದ ಜಯಂತಿ ಆಚರಿಸಲು ಸಿದ್ಧತೆ ನಡೆದಿದೆ. ಮೈಸೂರು ಸೇರಿದಂತೆ ಹಲವೆಡೆಯಿಂದ ಜನ ಸೇರುವ ಸಾಧ್ಯತೆಯಿರು ಹಿನ್ನೆಲೆ ಮುಂಜಾಗೃತ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿರುವ ತಹಸೀಲ್ದಾರ ಪರಶುರಾಮ ಸತ್ತಿಗೇರಿ.
ಕೊಡಗಿನಲ್ಲಿ ಚುನಾವಣೆಗೆ ಟಿಪ್ಪು ಅಸ್ತ್ರ ಬಳಸಿದ್ವಾ ರಾಜಕೀಯ ಪಕ್ಷಗಳು!
ನಾಳೆ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ನಿಷೇಧಾಜ್ಞೆವಿರುತ್ತದೆ. ಈ ವೇಳೆ ಮೆರವಣಿಗೆ, ಪ್ರತಿಭಟನೆ, ರಾಲಿಗಳಿಗೆ ನಿರ್ಬಂಧ. ಬ್ಯಾನರ್, ಬಂಟಿಂಗ್ಸ್, ಧ್ವನಿವರ್ಧಕ, ಪಟಾಕಿ, ಡಿಜೆ ಬಳಕೆಗೂ ನಿಷೇಧವಿದೆ. ಘೋಷಣೆ ಕೂಗದಂತೆ, ಪ್ರಜೋಧನಕಾರಿ ಚಿತ್ರವಿರುವ ಟೀ ಶರ್ಟ್ ಧರಿಸುವುದು ಸೇರಿದಂತೆ ಸಾರ್ವಜನಿಕರ ಆಸ್ತಿಪಾಸ್ತಿ, ಸಾರ್ವಜನಿಕರ ಪ್ರಾಣ ರಕ್ಷಣೆಗಾಗಿ 144 ಸಕ್ಷನ್ ಜಾರಿ ಮಾಡಲಾಗಿದೆ.
ಫಿಟ್ನೆಸ್ ಸೆಂಟರ್ನಲ್ಲಿ ಯುವತಿ ಸ್ನಾನ ಮಾಡೋದನ್ನ ಸೆರೆ ಹಿಡಿದ ಕಾಮುಕ ಕೋಚ್!
ಅಧಿಕೃತವಾಗಿ ಸರ್ಕಾರದ ಕಡೆಯಿಂದ ನಡೆಯಲ್ಲ ಟಿಪ್ಪು ಜಯಂತಿ ಆಚರಣೆ ಇಲ್ಲ. ಟಿಪ್ಪು ಜಯಂತಿ ರದ್ದುಪಡಿಸಿ 2019 ರಲ್ಲಿಯೇ ಆದೇಶ ಮಾಡಿರುವ ಸರ್ಕಾರ. ಕಾಂಗ್ರೆಸ್ ಸರ್ಕಾರ ಬಂದ ಮೇಲೂ ಇದುವರೆಗೆ ಸರ್ಕಾರ ಟಿಪ್ಪು ಜಯಂತಿ ರದ್ದತಿ ವಾಪಸ್ ಹೀಗಾಗಿ ಈ ವರ್ಷವೂ ಅಧಿಕೃತವಾಗಿ ಟಿಪ್ಪು ಜಯಂತಿ ಆಚರಣೆ ಇಲ್ಲ. ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಹಿಂಸಾಚಾರ ನಡೆದಂತೆ ಈ ವೇಳೆ ನಡೆಯಬಹುದೆಂಬ ಮುಂಜಾಗ್ರತೆಯಿಂದ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಬಂದೋಬಸ್ತ್ ಮಾಡಿದೆ.