Asianet Suvarna News Asianet Suvarna News

ಶಿಕ್ಷಣ, ತಂತ್ರಜ್ಞಾನದಲ್ಲಿ ರಾಜ್ಯದ ಪ್ರಗತಿಗೆ ರಾಷ್ಟ್ರಪತಿ ಕೋವಿಂದ್‌ ಶ್ಲಾಘನೆ

ಶಿಕ್ಷಣ ಮತ್ತು ತಂತ್ರಜ್ಞಾನದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ನಾವೀನ್ಯತೆ ಸೂಚ್ಯಂಕದಲ್ಲಿ ದೇಶದಲ್ಲಿಯೇ ಕರ್ನಾಟಕ ಪ್ರಥಮ ಸ್ಥಾನ ಗಳಿಸಿದೆ ಎಂದು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

president of india ramnath kovind visit bengaluru gvd
Author
Bangalore, First Published Jun 14, 2022, 5:00 AM IST

ಬೆಂಗಳೂರು (ಜೂ.14): ಶಿಕ್ಷಣ ಮತ್ತು ತಂತ್ರಜ್ಞಾನದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ನಾವೀನ್ಯತೆ ಸೂಚ್ಯಂಕದಲ್ಲಿ ದೇಶದಲ್ಲಿಯೇ ಕರ್ನಾಟಕ ಪ್ರಥಮ ಸ್ಥಾನ ಗಳಿಸಿದೆ ಎಂದು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸೋಮವಾರ ನಗರದ ರಾಷ್ಟ್ರೀಯ ಮಿಲಿಟರಿ ಶಾಲೆಯ ಅಮೃತ ಮಹೋತ್ಸವ ಆಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕವು ರಾಜ್ಯಪಾಲರ ಮಾರ್ಗದರ್ಶನ, ಮುಖ್ಯಮಂತ್ರಿಯವರ ನಾಯಕತ್ವದಲ್ಲಿ ಗಮನಾರ್ಹವಾದ ಪ್ರಗತಿಯನ್ನು ಸಾಧಿಸುತ್ತಿದೆ. 

ಪ್ರಮುಖವಾಗಿ ಶೈಕ್ಷಣಿಕ ಮತ್ತು ತಂತ್ರಜ್ಞಾನಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಹೀಗಾಗಿಯೇ ನಾವೀನ್ಯತೆ ಸೂಚ್ಯಂಕದಲ್ಲಿ ದೇಶದಲ್ಲಿಯೇ ಕರ್ನಾಟಕ ಪ್ರಥಮ ಸ್ಥಾನ ಗಳಿಸಿದೆ. ರಾಜ್ಯದ ರಾಜಧಾನಿ ಬೆಂಗಳೂರು ಜಾಗತಿಕ ಕಲಿತಾ, ಉದ್ಯಮ ಹಾಗೂ ತಂತ್ರಜ್ಞಾನ ಕೇಂದ್ರವಾಗಿ ಹೊರ ಹೊಮ್ಮಿದ್ದು, ಬಂಡವಾಳ ಹೂಡಿಕೆಯಲ್ಲಿ ಬೆಂಗಳೂರು ವಿಶ್ವದಲ್ಲಿಯೇ 5 ಸ್ಥಾನಗಳಲ್ಲಿ ಒಂದು ಸ್ಥಾನವನ್ನು ಅಲಂಕರಿಸಿದೆ. ಈ ಎಲ್ಲಾ ಸಾಧನೆಗೆ ಕಾರಣವಾದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಎಂದರು.

2 ದಿನಗಳ ಭೇಟಿಗಾಗಿ ಇಂದು ರಾಷ್ಟ್ರಪತಿ ಕೋವಿಂದ್‌ ಬೆಂಗಳೂರಿಗೆ

ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಶಾಲೆಯ ಸಮಾನತೆ, ಏಕತೆ ಸಾರುವ ಶಿಕ್ಷಣ ಎಲ್ಲರಿಗೂ ಮಾದರಿಯಾಗಿದೆ. ಈ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ದೇಶದ ಮಿಲಿಟರಿ ಅಧಿಕಾರಿಗಳು, ನ್ಯಾಯಾಧೀಶರು, ರಾಜಕಾರಣಿಗಳು, ಕ್ರೀಡಾಪಟುಗಳು, ಆಡಳಿತ ಸೇವೆ ಅಧಿಕಾರಿಗಳು ಹೀಗೆ ವಿವಿಧ ಕ್ಷೇತ್ರಗಳಲ್ಲಿ ಅಪ್ರತಿಮ ಸಾಧನೆ ಮಾಡಿದ್ದಾರೆ. ಪರಮವೀರ ಚಕ್ರ, ವಿಶಿಷ್ಟಸೇವಾ ಪದಕ ಮುಂತಾದ ಮನ್ನಣೆ ಪಡೆದಿದ್ದಾರೆ. ಭಾರತದ ಮೊದಲ ಕಮಾಂಡರ್‌ ಇನ್‌ ಚೀಪ್‌ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಕೆ.ಎಂ ಅವರು ಈ ಶಾಲೆಯ ವಿದ್ಯಾರ್ಥಿಯಾಗಿದ್ದು, ಸದ್ಯ ಮಿಲಿಟರಿಯಲ್ಲಿ ಸೇವೆ ಸಲ್ಲಿಸುತ್ತಿರುವ 23 ರಾಜ್ಯದ ವಿದ್ಯಾರ್ಥಿಗಳು ಈ ಶಾಲೆಯ ಹಳೆಯ ವಿದ್ಯಾರ್ಥಿಗಳಾಗಿದ್ದಾರೆ ಎಂದು ಹೇಳಿದರು.

ದೇಶ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವವನ್ನು ಆಚರಿಸುತ್ತಿದೆ. ಈ ಶಾಲೆಗೆ ಕೂಡಾ 75 ವರ್ಷ ತುಂಬಿರುವುದು ಹೆಮ್ಮೆಯ ವಿಷಯ. ಈ ಶಾಲೆಯ ವಿದ್ಯಾರ್ಥಿಗಳು ಸೈಕ್ಲಿಂಗ್‌ ಮೂಲಕ 1,800 ಕಿ.ಮೀ ಸಂಚರಿಸಿ ವಿವಿಧ ರಾಜ್ಯಗಳ ಹಳ್ಳಿಗಳಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಕಥೆಗಳನ್ನು ಜನರಿಗೆ ಹೇಳಿದ್ದಾರೆ. ಈ ಪ್ರಸ್ತುತ ವರ್ಷದಿಂದ ಬಾಲಕಿಯರಿಗೆ ಸಹ ಮಿಲಿಟರಿ ಶಾಲೆಯಲ್ಲಿ ಪ್ರವೇಶ ಕಲ್ಪಿಸಲು ಸಂತೋಷವಾಗುತ್ತದೆ. ಈ ಶಾಲೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಿಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಅಮೃತ ಮಹೋತ್ಸವದ ಸ್ಮರಣ ಸಂಚಿಕೆಯನ್ನು ರಾಷ್ಟ್ರಪತಿಗಳು ಬಿಡುಗಡೆಗೊಳಿಸಿದರು. ವೇದಿಕೆಯಲ್ಲಿ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದೇಶದ ಪ್ರಥಮ ಮಹಿಳೆ ಸವಿತಾ ಕೋವಿಂದ್‌, ಭಾರತೀಯ ನೌಕಾಪಡೆಯ ಉಪ ಮುಖ್ಯಸ್ಥರು ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿ ಸಿ.ಎನ್‌. ಗೋರ್ಮಡೆ ಉಪಸ್ಥಿರಿದ್ದರು.

Vijayapura: ಕ್ರಾಂತಿಯೋಗಿಗೆ ಅಪಚಾರ ಮಾಡಿದ ವಿಜಯಪುರ ಜಿಲ್ಲಾಡಳಿತ!

ತಿರುಪತಿ ರೀತಿಯ ಇಸ್ಕಾನ್‌ ದೇಗುಲ ಇಂದು ಲೋಕಾರ್ಪಣೆ: ಮಂಗಳವಾರ ಕನಕಪುರ ರಸ್ತೆಯ ದೊಡ್ಡ ಕಲ್ಲಸಂದ್ರದ ವೈಕುಂಠ ಗಿರಿಯಲ್ಲಿ ತಿರುಪತಿ ದೇವಾಲಯವನ್ನು ಹೋಲುವ ಇಸ್ಕಾನ್‌ ದೇಗುಲದ ಲೋಕಾರ್ಪಣಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ಬಳಿಕ ಮಧ್ಯಾಹ್ನದ ವೇಳೆಗೆ ದೆಹಲಿಗೆ ಹಿಂತಿರುಗಲಿದ್ದಾರೆ. ರಾಜಭವನಕ್ಕೆ ಬಂದ ನಂತರ ಅಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಮೈಸೂರು ಪೇಟ ತೊಡಿಸಿ ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ವೇಳೆ ರಾಜಭವನದ ಅಧಿಕಾರಿಗಳು ಉಪಸ್ಥಿತರಿದ್ದರು.

Follow Us:
Download App:
  • android
  • ios